Kantara Chapter 1: ಗುಡ್ ನ್ಯೂಸ್.. 'ಕಾಂತಾರ 1' ಫಸ್ಟ್ ಲುಕ್‌ಗೆ ಮುಹೂರ್ತ ಫಿಕ್ಸ್.. 5 ಅಲ್ಲ 7 ಭಾಷೆಯಲ್ಲಿ ರಿಲೀಸ್
ಕನ್ನಡ ಚಿತ್ರರಂಗಕ್ಕೆ ಹೊಸ ಇಮೇಜ್ ಕೊಟ್ಟ ಸಿನಿಮಾ 'ಕಾಂತರ'. ಈ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ನಟನಾಗಿ, ನಿರ್ದೇಶಕನಾಗಿ ಸಿಕ್ಕಾಪಟ್ಟೆ ಸೌಂಡ್ ಮಾಡಿದ್ದರು. ಭಾರತದಾದ್ಯಂತ ಭಾಷೆಯ ಭೇದವಿಲ್ಲದೆ ಈ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ರಿಲೀಸ್ ಐದೂ ಭಾಷೆಗಳಲ್ಲೂ ಸಿನಿಮಾ ಕಲೆಕ್ಷನ್‌ನಲ್ಲಿ ದಾಖಲೆ ಬರೆದಿತ್ತು.
ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ್ದ 'ಕಾಂತಾರ' ಸಿನಿಮಾ ಭಾರತದಾದ್ಯಂತ ಸುಮಾರು 400 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಕಂಡಿತ್ತು. ಈ ಯಶಸ್ಸಿನಿಂದಲೇ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ಷೆಲ್ ಮಾಡುವುದಕ್ಕೆ ಮುಂದಾಗಿದ್ದರು. ಒಂದಿಷ್ಟು ದಿನ ಈ ಸಿನಿಮಾ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಚಿಕ್ಕದೊಂದು ಸುಳಿವು ಕೂಡ ಕೊಟ್ಟಿರಲಿಲ್ಲ. ಆದ್ರೀಗ ಸಿನಿಪ್ರಿಯರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. 'ಕಾಂತಾರ ಚಾಪ್ಟರ್ 1' ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಅನೌನ್ಸ್ ಮಾಡಿದ್ದಾರೆ.

ರಿಷಬ್ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಂ ಮೂಲಕ 'ಕಾಂತಾರ ಚಾಪ್ಟರ್ 1' ಫಸ್ಟ್ ಲುಕ್ ನವೆಂಬರ್ 27ಕ್ಕೆ ರಿಲೀಸ್ ಆಗುತ್ತೆ ಎಂದು ಅನೌನ್ಸ್ ಮಾಡಿದ್ದಾರೆ. ಈ ವರ್ಷ ಒಳ್ಳೊಳ್ಳೆ ಸಿನಿಮಾಗಳಿಲ್ಲ ಮಂಕಾಗಿದ್ದ ಚಿತ್ರರಂಗಕ್ಕೆ ರಿಷಬ್ ಶೆಟ್ಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ನು ಎರಡು ದಿನಗಳಲ್ಲೇ ಫಸ್ಟ್ ಲುಕ್ ರಿವೀಲ್ ಆಗಲಿದೆ. ವಿಶೇಷ ಅಂದ್ರೆ, ಈ ಬಾರಿ 5 ಭಾಷೆಯಲ್ಲಿ ಅಲ್ಲ ಬರೊಬ್ಬರಿ 7 ಭಾಷೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
'ಕಾಂತರ' ಐದು ಭಾಷೆಗಳಲ್ಲೂ ಮೆಚ್ಚುಗೆ ಗಳಿಸಿತ್ತು. ಅಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲೂ ಜನಪ್ರಿಯತೆಯನ್ನು ಗಳಿಸಿತ್ತು. ಹೀಗಾಗಿ ಕನ್ನಡ,ತೆಲುಗು,ತಮಿಳು, ಮಲಯಾಳಂ, ಹಿಂದಿ, ಬೆಂಗಾಲಿ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬಿಡುಗಡೆಯಾಗಲಿದೆ.


Click it and Unblock the Notifications











