For Quick Alerts
  ALLOW NOTIFICATIONS  
  For Daily Alerts

  'ಕಾಂತಾರ' ಹಿಟ್ ಆದ ಬೆನ್ನಲ್ಲೆ ಧರ್ಮಸ್ಥಳಕ್ಕೆ ರಿಷಬ್ ಶೆಟ್ಟಿ ಭೇಟಿ

  By ಮಂಗಳೂರು ಪ್ರತಿನಿಧಿ
  |

  'ಕಾಂತಾರ' ಸಿನಿಮಾ ಸೂಪರ್ ಹಿಟ್ ಆದ ಬೆನ್ನಲ್ಲೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ದೇವಾಲಯ ಸುತ್ತಾಟ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ಮುಂಬೈನಲ್ಲಿ ವಿನಾಯಕನ ದೇಗುಲಕ್ಕೆ ತೆರಳಿ ಪೂಜೆ ಮಾಡಿದ್ದ ರಿಷಬ್ ಶೆಟ್ಟಿ ಇದೀಗ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದಾರೆ.

  ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನಟ ಪ್ರಮೋದ್ ಶೆಟ್ಟಿ ಹಾಗೂ ಇನ್ನಿತರರು ಸಹ ಜೊತೆಗಿದ್ದರು.

  ಮಂಜುನಾಥ ಸ್ವಾಮಿ ದರ್ಶನದ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ರಿಷಬ್ ಶೆಟ್ಟ, ಪ್ರಗತಿ ಶೆಟ್ಟಿ, ಪ್ರಮೋದ್ ಶೆಟ್ಟಿ ಹಾಗೂ ಇತರರು ಭೇಟಿಯಾದರು. ಈ ಸಂದರ್ಭದಲ್ಲಿ ವಿರೇಂದ್ರ ಹೆಗ್ಗಡೆಯವರು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಹೆಗ್ಗಡೆಯವರ ಪತ್ನಿ ಹೇಮಾವತಿ ಹೆಗ್ಗಡೆ ಸಹ ಜೊತೆಗಿದ್ದರು.

  ವೀರೇಂದ್ರ ಹೆಗ್ಗಡೆಯವರ ಭೇಟಿ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ರಿಷಬ್ ಶೆಟ್ಟಿ, ''ಸಿನಿಮಾ ಮಾಡುವ ಮುನ್ನ ಹೆಗ್ಗಡೆಯವರನ್ನ ಭೇಟಿ ಮಾಡಿದ್ದೆ, ಆ ಬಳಿಕ ಟ್ರೇಲರ್ ರಿಲೀಸ್ ಆದ ಬಳಿಕ ಮತ್ತೆ ಇಲ್ಲಿಗೆ ಬಂದಿದ್ದೆ, ಸಿನಿಮಾ ರಿಲೀಸ್ ಬಳಿಕ ಹೆಗ್ಗಡೆಯವರ ಭೇಟಿಗೆ ಸಾಕಷ್ಟು ಸಲ ಬರಬೇಕು ಅಂದುಕೊಂಡಿದ್ದೆ ಆದರೆ ಆಗಿರಲಿಲ್ಲ. ಆದರೆ ಇದೀಗ ಕಾಲ ಕೂಡಿ ಬಂತು, ಬಂದು ಆಶೀರ್ವಾದ ಪಡೆದೆವು, ಸಿನಿಮಾ 30 ದಿನ ದಾಟಿ ಯಶಸ್ವಿಯಾಗಿ ಓಡ್ತಾ ಇದೆ'' ಎಂದಿದ್ದಾರೆ.

  ಕೆಲವು ದಿನಗಳ ಹಿಂದೆ ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತರಾಗಿ ಮಂಗಳೂರಿನ ಚಿತ್ರಮಂದಿರವೊಂದರಲ್ಲಿ 'ಕಾಂತಾರ' ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆ ಸಂದರ್ಭದಲ್ಲಿ ಎದ್ದಿದ್ದ ದೈವ ಆಚರಣೆ ಹಿಂದು ಮೂಲ ಪದ್ಧತಿ ಅಲ್ಲ ಎಂಬ ಬಗ್ಗೆಯೂ ಮಾತನಾಡಿದ್ದ ವೀರೇಂದ್ರ ಹೆಗ್ಗಡೆ, '''ದೈವಾರಾಧನೆ ಹಿಂದೂ ಧರ್ಮದ ಭಾಗ ಹೌದಾ ಅಲ್ವಾ ಅನ್ನೋದು ಗೊತ್ತಿಲ್ಲ. ಆದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲ ಸ್ವಭಾವವನ್ನು ಅರಿಯದೆ ಮಾತನಾಡಿದರೆ ಬೇರೆಯಾಗುತ್ತದೆ. ಧರ್ಮದ ಮೂಲ ಹುಡುಕುತ್ತಾ ಹೋದರೆ ಎಲ್ಲಿಯೂ ಸಿಗೋದಿಲ್ಲ. ನಂಬಿಕೆ ಆಚರಣೆ ನಡವಳಿಕೆ ಸ್ವಭಾವಿಕವಾಗಿ ಬೆಳೆದು ಬಂದಿದೆ. ಇದನ್ನು ನಾವು ಬಿಟ್ಟಿರೋಕೆ ಸಾಧ್ಯವೇ ಇಲ್ಲ. ಅವರು ಹಿಂದೂ ಧರ್ಮದ ಯಾವ ಸೂಕ್ಷ್ಮತೆಯನ್ನು ಹೋಗಿ ನೋಡಿದ್ದಾರೆ ಅನ್ನೋದು ಗೊತ್ತಿಲ್ಲ. ದೈವಾರಾಧನೆಗೆ ಎರಡು ಜಿಲ್ಲೆಯಲ್ಲಿ ವ್ಯಾಪಾಕವಾದ ನಂಬಿಕೆಯಿದೆ. ಇವತ್ತೂ ದೈವಾರಾಧನೆ ಮಾಡುತ್ತೇವೆ, ದೈವದ ನುಡಿಗೆ ಗೌರವ ಕೊಡುತ್ತೇವೆ, ದೈವ ಮೈಮೇಲೆ‌ ಬಂದಾಗ ಮಾತಿಗೆ ಗೌರವ ಕೊಡುತ್ತೇವೆ. ಇದನ್ನು ಧರ್ಮಕ್ಕೆ, ಸೂಕ್ಷ್ಮಕ್ಕೆ ವಿಮರ್ಶೆ ಮಾಡುವ ಅಗತ್ಯವೇ ಇಲ್ಲ'' ಎಂದಿದ್ದರು.

  'ಕಾಂತಾರ' ಸಿನಿಮಾ ಬಿಡುಗಡೆ ಆಗಿ ಒಂದು ತಿಂಗಳಾಗಿದ್ದು, ಸಿನಿಮಾವು, ಬಿಡುಗಡೆ ಆದ ಎಲ್ಲ ರಾಜ್ಯಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. 300 ಕೋಟಿ ಕಲೆಕ್ಷನ್ ದಾಟಿ ಸಾಗುತ್ತಿದೆ.

  English summary
  Actor, Director Rishab Shetty visited Dharmastala along with his wife Pragathi Shetty and his friend, actor Pramod Shetty.
  Thursday, November 3, 2022, 17:37
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X