For Quick Alerts
  ALLOW NOTIFICATIONS  
  For Daily Alerts

  ಮತ್ತೆ ಬರ್ತಿದೆ ರಿಷಬ್ ಶೆಟ್ಟಿಯ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ'

  |

  ಸ್ಯಾಂಡಲ್ ವುಡ್ ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಮೂಡಿಬಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾಗೆ ಕನ್ನಡ ಚಿತ್ರರಸಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಷ್ಟೆಯಲ್ಲ ಈ ಸಿನಿಮಾ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. 2018 ಆಗಸ್ಟ್ 24ರಂದು ತೆರೆಗೆ ಬಂದ ಈ ಸಿನಿಮಾ 125 ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ.

  ಇದೀಗ ಈ ಸಿನಿಮಾ ಮತ್ತೆ ಬರ್ತಿದೆ. ಹೌದು, ಸರ್ಕಾರಿ ಹಿ. ಪ್ರಾ. ಶಾಲೆ ಕಾಸರಗೋಡು ಸಿನಿಮಾ ರೀ ರಿಲೀಸ್ ಆಗುತ್ತಿದೆ. ಇಂದಿನಿಂದ (ನ.5) ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ. ಕೊರೊನಾ ಲಾಕ್ ಡೌನ್ ಬಳಿಕ ಚಿತ್ರಮಂದಿರಗಳು ಓಪನ್ ಆಗಿವೆ. ಆದರೆ ಹೊಸ ಸಿನಿಮಾಗಳು ರಿಲೀಸ್ ಆಗುತ್ತಿಲ್ಲ. ಹಾಗಾಗಿ ಈಗಾಗಲೇ ರಿಲೀಸ್ ಆಗಿರುವ ಚಿತ್ರಗಳು ರೀ ರಿಲೀಸ್ ಆಗುತ್ತಿವೆ.

  ಮತ್ತೆ 'ಕಿರಿಕ್' ಮಾಡ್ತೀವಿ ಎಂದ ರಕ್ಷಿತ್ ಶೆಟ್ಟಿ-ರಿಷಬ್ ಶೆಟ್ಟಿ

  ಈಗಾಗಲೇ ಸಾಕಷ್ಟು ಸಿನಿಮಾಗಳು ರೀ ರಿಲೀಸ್ ಆಗಿವೆ. ಈ ತಿಂಗಳು ಮತ್ತು ಮುಂದಿನ ತಿಂಗಳು ಸ್ಯಾಂಡಲ್ ವುಡ್ ನಲ್ಲಿ ಹೊಸ ಸಿನಿಮಾಗಳ ದಿನಾಂಕ ಇನ್ನು ಅನೌನ್ಸ್ ಆಗಿಲ್ಲ. ಹಾಗಾಗಿ ಹಳೆಯ ಸಿನಿಮಾಗಳಿಗೆ ಉತ್ತಮ ಅವಕಾಶ ಒದಗಿಬಂದಿದೆ. ಗಡಿಭಾಗ ಕಾಸರಗೋಡಿನಲ್ಲಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ, ಅಲ್ಲಿನ ಮಕ್ಕಳು, ಪೋಷಕರು ಪಡುತ್ತಿರುವ ಕಷ್ಟವೇನು ಎನ್ನುವುದನ್ನು ರಿಷಬ್ ಶೆಟ್ಟಿ ಸಿನಿಮಾ ಮೂಲಕ ಕಟ್ಟಿಕೊಟ್ಟಿದ್ದರು.

  ಚಿತ್ರದಲ್ಲಿ ಅನಂತ್ ನಾಗ್, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾವೀಗ ಎರಡು ವರ್ಷಗಳ ಬಳಿಕ ರೀ ರಿಲೀಸ್ ಆಗುತ್ತಿರುವ ಬಗ್ಗೆ ನಿರ್ದೇಶಕ ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಇನ್ನೂ ಈ ಸಿನಿಮಾ ನೋಡದವರು ಮತ್ತೆ ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡಿ ಎಂಜಾಯ್ ಮಾಡಬಹುದು.

  English summary
  Rishab Shetty's Sarkari Hi. Pra. Shaale, Kasaragodu movie re-release After a two years.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X