Don't Miss!
- News
ಬೆಂಗಳೂರು: ಬಸವೇಶ್ವರನಗರ ಜಂಕ್ಷನ್ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ:CM
- Sports
Ind vs NZ 3rd T20: ಸರಣಿ ಗೆಲ್ಲುವ ಉತ್ಸಾಹದಲ್ಲಿ ಟೀಂ ಇಂಡಿಯಾ: ಪಿಚ್ ವರದಿ ನೋಡಿ ತಂಡದಲ್ಲಿ ಬದಲಾವಣೆ
- Technology
ಸ್ಯಾಮ್ಸಂಗ್ನ ಈ ಹೊಸ ಡಿವೈಸ್ ನೋಡಿದ್ರೆ ನಿಮಗೆ ಏನನ್ನಿಸುತ್ತೆ? ಇದೇನು ಸಾಬೂನಾ?
- Lifestyle
ಒಂಟಿಯಾಗಿ ಅಂಟಾರ್ಟಿಕಾ ಯಾತ್ರೆ ಮಾಡಿದ ಮೊದಲ ಮಹಿಳೆ: ಕ್ಯಾಪ್ಟನ್ ಪ್ರೀತ್ ಚಾಂದಿ, ಇವರ ಸ್ಟೋರಿಯೇ ಸ್ಪೂರ್ತಿದಾಯಕ
- Finance
Budget 2023 Expectations: ಸಾಮಾನ್ಯ ಜನರ ಬಜೆಟ್ ನಿರೀಕ್ಷೆಗಳೇನು?
- Automobiles
ಶೀಘ್ರವೇ ಕಡಿಮೆ ಬೆಲೆಯಲ್ಲಿ ಸಿಗಲಿದೆ ಮಾರುತಿ ಸುಜುಕಿ ಆಲ್ಟೊ ಕೆ10 ಎಕ್ಸ್ಟ್ರಾ ಎಡಿಷನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ರೋಡ್ ಕಿಂಗ್': ಇದು ಹಾಲಿವುಡ್ ನಿರ್ದೇಶಕನ ಕನ್ನಡ ಸಿನಿಮಾ!
ಕನ್ನಡ ಚಿತ್ರರಂಗದಲ್ಲಿ ಹಲವು ಪ್ರಯೋಗಗಳು ಇತ್ತೀಚೆಗೆ ನಡೆಯುತ್ತಿವೆ. ಆದರೆ ಈ ಬಾರಿ ವಿಭಿನ್ನ ಹಾಗೂ ಈ ಹಿಂದೆ ನಡೆದಿರದ ಪ್ರಯೋಗವೊಂದು ಕನ್ನಡ ಚಿತ್ರರಂಗದದಲ್ಲಿ ನಡೆದಿದೆ. ಸ್ಕೈಪ್(ಅಂತರಜಾಲ)ದ ಮೂಲಕವೇ ಇಡೀ ಚಿತ್ರದ ನಿರ್ದೇಶನ ನಡೆದಿದೆ!
ಈ ಚಿತ್ರದ ನಾಯಕ ಮತೀನ್ ಹುಸೇನ್ ಮೂಲತಃ ಯು ಎಸ್ ಎ ನಿವಾಸಿ. ಕೆಲವು ವರ್ಷಗಳ ನಂತರ ಮುಂಬೈಗೆ ಆಗಮಿಸಿದ್ದ ಮತೀನ್, ಅಲ್ಲೇ ಅನುಪಮ್ ಖೇರ್ ಫಿಲ್ಮ್ ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯ ತರಭೇತಿ ಪಡೆದರು. ಆ ಬಳಿಕ ಕನ್ನಡದಲ್ಲಿ ಸಿನಿಮಾ ಮಾಡಲು ಮುಂದಾದರು. ಸಿನಿಮಾ ನಿರ್ದೇಶನಕ್ಕಾಗಿ ಹಾಲಿವುಡ್ ನ ಖ್ಯಾತ ನಿರ್ದೇಶಕ ರಾಂಡಿ ಕೆಂಟ್ ಅವರನ್ನು ಸಂಪರ್ಕಿಸಿದರು. ರಾಂಡಿ ಕೆಂಟ್ ಒಪ್ಪಿದರು ಸಹ. ಆದರೆ ವೀಸಾ ತೊಂದರೆಯಿಂದ ರಾಂಡಿ ಕೆಂಟ್ ಇಲ್ಲಿಗೆ ಬರಲಾಗಲಿಲ್ಲ.
ಆಗ ನೆರವಿಗೆ ಬಂದಿದ್ದೇ ತಂತ್ರಜ್ಞಾನ. ಸ್ಕೈಪ್ ಮೂಲಕ ವಿಡಿಯೋದಲ್ಲಿಯೇ ನಿರ್ದೇಶನ ಮಾಡಲು ಆರಂಭಿಸಿದರು ರಾಂಡಿ ಕೆಂಟ್. ಕಲಾವಿದರು ಬೆಂಗಳೂರಿನಲ್ಲಿ. ನಿರ್ದೇಶಕ ಲಾಸ್ ಎಂಜಲೀಸ್ ನಲ್ಲಿ. ಅಲ್ಲಿಂದಲೇ ನಿರ್ದೇಶನ ಮಾಡಿ 'ರೋಡ್ ಕಿಂಗ್' ಚಿತ್ರ ಸಿದ್ದವಾಯಿತು.
ಮತೀನ್ ಹುಸೇನ್ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ರುಕ್ಷರ್ ದಿಲ್ಹಾನ್ (ರನ್ ಆಂತೋನಿ ಖ್ಯಾತಿ) ನಾಯಕಿಯಾಗಿ ನಟಿಸಿದ್ದಾರೆ. ಲವ್ ಬ್ರೇಕಪ್ ನಿಂದ ಎಕ್ಸ್ ಸಿಂಡ್ರೋಮ್ ಗೆ ತುತ್ತಾದ ಯುವಪ್ರೇಮಿಗಳ ಸುತ್ತ ಹೆಣೆದಿರುವ ಕಥೆಯಿದು. ರೊಮ್ಯಾಂಟಿಕ್, ಥ್ರಿಲ್ಲರ್ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಈಗಾಗಲೇ ಹಲವು ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿರುವ ಈ ಚಿತ್ರ ಸೆಪ್ಟೆಂಬರ್ ನಲ್ಲಿ ರಾಜ್ಯದಾದ್ಯಂತ ತೆರೆ ಕಾಣುತ್ತಿದೆ.
ಜನಪ್ರಿಯ ಗಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಿ, ಹಾಡಿರುವ "ಕೊಡು ನನಗೆ" ಎಂಬ ಹಾಡು ಕೂಡ ಇತ್ತೀಚೆಗೆ ಬಿಡುಗಡೆಯಾಗಿ ಜನಪ್ರಿಯವಾಗುತ್ತಿದೆ. ಅರೀಫ್ ಲಲಾನಿ ಈ ಚಿತ್ರದ ಛಾಯಾಗ್ರಹಕರು. ಹಾಲಿವುಡ್ ನ ಖ್ಯಾತ ಚಿತ್ರಗಳಿಗೆ ಸೌಂಡ್ ಡಿಸೈನರ್ ಆಗಿ ಕಾರ್ಯನಿರ್ವಹಿಸಿರುವ ಸ್ಕಾಟ್ ವಾಲ್ಫ್ ಈ ಚಿತ್ರಕ್ಕೂ ಸೌಂಡ್ ಡಿಸೈನರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಸ್ಕಾಟ್ ವಾಲ್ಫ್ ಅವರ ಸೌಂಡ್ ಡಿಸೈನ್ "ರೋಡ್ ಕಿಂಗ್" ಸಿನಿಮಾದ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ.
ಅಂದಹಾಗೆ ನಿರ್ದೇಶಕ ರಾಂಡಿ ಕೆಂಟ್ 'ಚೈನೀಸ್ ಸ್ಪೀಕಿಂಗ್ ವ್ಯಾಂಪೈರ್ಸ್, 'ದಿ ಫರ್ಫೆಕ್ಟ್ ಹೌಸ್', 'ಲೈಫ್ ಆಫ್ ಲೆಮನ್' ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.