Just In
Don't Miss!
- Sports
ಐಪಿಎಲ್ 2021: ಶಹ್ಬಾಜ್ ಪ್ರದರ್ಶನಕ್ಕೆ ಸಿರಾಜ್ ಮೆಚ್ಚುಗೆಯ ಮಾತು
- News
ರೆಮಿಡಿಸ್ವಿರ್ ಔಷಧ ದುರ್ಬಳಕೆ ಮಾಡಿದರೆ ಹುಷಾರ್!: ಬೊಮ್ಮಾಯಿ ಖಡಕ್ ಎಚ್ಚರಿಕೆ
- Finance
25,000 ಹೊಸ ಉದ್ಯೋಗಿಗಳನ್ನ ನೇಮಕ ಮಾಡಿಕೊಳ್ಳಲಿದೆ ಇನ್ಫೋಸಿಸ್
- Automobiles
ಹೊಸ ಫೀಚರ್ಸ್ಗಳೊಂದಿಗೆ ಬಜಾಜ್ ಸಿಟಿ110ಎಕ್ಸ್ ಬೈಕ್ ಬಿಡುಗಡೆ
- Education
Kalaburagi Mahanagara Palike Recruitment 2021: 219 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ರಂಜಾನ್ 2021: ಉಪವಾಸದ ಈ ತಿಂಗಳಿನಲ್ಲಿ ಹೀಗೆ ಮಾಡಿದರೆ ರೋಗ ನಿರೋಧಕ ಶಕ್ತಿ ವೃದ್ಧಿಸುವುದು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದರ್ಶನ್ 'ರಾಬರ್ಟ್' ಸಿನಿಮಾ ಮೊದಲ ದಿನವೇ ದಾಖಲೆ ಕಲೆಕ್ಷನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಮಾರ್ಚ್ 11 ರಂದು ಅದ್ದೂರಿಯಾಗಿ ತೆರೆಗೆ ಬಂದಿದೆ. ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಬಿಡುಗೆಯಾಗಿರುವ ರಾಬರ್ಟ್ ಚಿತ್ರಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ರಾಬರ್ಟ್ ಮೊದಲ ದಿನದ ಕಲೆಕ್ಷನ್ ರಿಪೋರ್ಟ್ ಹೊರಬಿದ್ದಿದೆ. ಬಾಕ್ಸ್ ಆಫೀಸ್ ಸುಲ್ತಾನ್ ಅಂತನೆ ಕರೆಸಿಕೊಳ್ಳುವ ದರ್ಶನ್ ರಾಬರ್ಟ್ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಕಲೆಕ್ಷನ್ ಮಾಡಿದೆ. ಸಿನಿಮಾತಂಡ ಅಧಿಕೃತವಾಗಿ ಬಿಡುಗಡೆ ಮಾಡಿರುವ ಮೊದಲ ದಿನದ ಕಲೆಕ್ಷನ್ ರಿಪೋರ್ಟ್ ಪ್ರಕಾರ ರಾಬರ್ಟ್ ಸಿನಿಮಾ ಕರ್ನಾಟಕದಲ್ಲಿ 17.24 ಕೋಟಿ ರೂ ಕಲೆಕ್ಷನ್ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ.
ಶಿವರಾತ್ರಿ ಹಬ್ಬದಂದು ರಾಬರ್ಟ್: ದರ್ಶನ್ ಬಗ್ಗೆ ಯಾರಿಗೂ ಗೊತ್ತಿಲ್ಲದ ಸೀಕ್ರೆಟ್ ಬಿಚ್ಚಿಟ್ಟ ರಕ್ಷಿತಾ
ಕನ್ನಡದ ಸಿನಿಮಾವೊಂದು ಮೊದಲ ದಿನ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡಿರುವುದು ನಿಜಕ್ಕೂ ಸ್ಯಾಂಡಲ್ ವುಡ್‌ಗೆ ಹೆಮ್ಮೆಯ ವಿಚಾರವಾಗಿದೆ. ಇನ್ನು ಆಂಧ್ರ ಪ್ರದೇಶದಲ್ಲೂ ರಾಬರ್ಟ್ ಉತ್ತಮ ಕಲೆಕ್ಷನ್ ಮಾಡಿದೆ. ರಾಬರ್ಟ್ ಮೊದಲ ದಿನ ಆಂಧ್ರ ಮತ್ತು ತೆಲಂಗಾಣದಲ್ಲಿ 3.12 ಕೋಟಿ ರೂ. ಬಾಚಿಕೊಂಡಿದೆ.
ದರ್ಶನ್ ಸಿನಿಮಾ ಮೊದಲ ಬಾರಿಗೆ ತೆಲುಗಿನಲ್ಲಿ ಇಷ್ಟು ಅದ್ದೂರಿಯಾಗಿ ಬಿಡುಗಡೆಯಾಗಿದೆ. ಮೊದಲ ಸಿನಿಮಾದಲ್ಲೇ ದೊಡ್ಡ ಮಟ್ಟದ ಕಲೆಕ್ಷನ್ ನೋಡಿ ಸಿನಿಮಾತಂಡ ಸಹ ಸಂತಸದಲ್ಲಿದೆ. ಚಿತ್ರಮಂದಿರಗಳ ವಿಚಾರದಲ್ಲೂ ದಾಖಲೆ ನಿರ್ಮಿಸಿದ್ದ ರಾಬರ್ಟ್, ಕನ್ನಡ ಮತ್ತು ತೆಲುಗಿನಲ್ಲಿ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ.
ಮೊದಲ ಬಾರಿಗೆ ಕನ್ನಡದ ಸಿನಿಮಾವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಕ್ಯೂ ನಿಂತು, ರಾಬರ್ಟ್ ನೋಡಿ ಸಂಭ್ರಮಿಸುತ್ತಿದ್ದಾರೆ.
ರಾಬರ್ಟ್ ಎರಡನೇ ದಿನವು ಹೌಸ್ ಫುಲ್ ದರ್ಶನ ಕಾಣುತ್ತಿದೆ. ತರುಣ್ ಸುಧೀರ್ ನಿರ್ದೇಶನ, ದರ್ಶನ್ ನಟನೆ, ಚಿತ್ರದ ಕತೆ, ಅರ್ಜುನ್ ಜನ್ಯ ಸಂಗೀತ ಪ್ರತಿಯೊಂದು ವಿಚಾರದಲ್ಲೂ ರಾಬರ್ಟ್ ಅಭಿಮಾನಿಗಳ ಹೃದಯ ಗೆದ್ದಿದೆ. ರಾಬರ್ಟ್ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಬಂಡವಾಳ ಹೂಡಿದ್ದಾರೆ.