For Quick Alerts
  ALLOW NOTIFICATIONS  
  For Daily Alerts

  ದರ್ಶನ್ 'ರಾಬರ್ಟ್' ಸಿನಿಮಾ ಮೊದಲ ದಿನವೇ ದಾಖಲೆ ಕಲೆಕ್ಷನ್

  |

  ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಮಾರ್ಚ್ 11 ರಂದು ಅದ್ದೂರಿಯಾಗಿ ತೆರೆಗೆ ಬಂದಿದೆ. ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಬಿಡುಗೆಯಾಗಿರುವ ರಾಬರ್ಟ್ ಚಿತ್ರಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

  Roberrt Box Office Collection : ಅಭಿಮಾನಿಗಳ ಆರ್ಭಟಕ್ಕೆ ಬಾಕ್ಸ್ ಆಫೀಸ್ ಲೂಟಿ | Filmibeat Kannada

  ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ರಾಬರ್ಟ್ ಮೊದಲ ದಿನದ ಕಲೆಕ್ಷನ್ ರಿಪೋರ್ಟ್ ಹೊರಬಿದ್ದಿದೆ. ಬಾಕ್ಸ್ ಆಫೀಸ್ ಸುಲ್ತಾನ್ ಅಂತನೆ ಕರೆಸಿಕೊಳ್ಳುವ ದರ್ಶನ್ ರಾಬರ್ಟ್ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಕಲೆಕ್ಷನ್ ಮಾಡಿದೆ. ಸಿನಿಮಾತಂಡ ಅಧಿಕೃತವಾಗಿ ಬಿಡುಗಡೆ ಮಾಡಿರುವ ಮೊದಲ ದಿನದ ಕಲೆಕ್ಷನ್ ರಿಪೋರ್ಟ್ ಪ್ರಕಾರ ರಾಬರ್ಟ್ ಸಿನಿಮಾ ಕರ್ನಾಟಕದಲ್ಲಿ 17.24 ಕೋಟಿ ರೂ ಕಲೆಕ್ಷನ್ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ.

  ಶಿವರಾತ್ರಿ ಹಬ್ಬದಂದು ರಾಬರ್ಟ್: ದರ್ಶನ್ ಬಗ್ಗೆ ಯಾರಿಗೂ ಗೊತ್ತಿಲ್ಲದ ಸೀಕ್ರೆಟ್ ಬಿಚ್ಚಿಟ್ಟ ರಕ್ಷಿತಾಶಿವರಾತ್ರಿ ಹಬ್ಬದಂದು ರಾಬರ್ಟ್: ದರ್ಶನ್ ಬಗ್ಗೆ ಯಾರಿಗೂ ಗೊತ್ತಿಲ್ಲದ ಸೀಕ್ರೆಟ್ ಬಿಚ್ಚಿಟ್ಟ ರಕ್ಷಿತಾ

  ಕನ್ನಡದ ಸಿನಿಮಾವೊಂದು ಮೊದಲ ದಿನ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡಿರುವುದು ನಿಜಕ್ಕೂ ಸ್ಯಾಂಡಲ್ ವುಡ್‌ಗೆ ಹೆಮ್ಮೆಯ ವಿಚಾರವಾಗಿದೆ. ಇನ್ನು ಆಂಧ್ರ ಪ್ರದೇಶದಲ್ಲೂ ರಾಬರ್ಟ್ ಉತ್ತಮ ಕಲೆಕ್ಷನ್ ಮಾಡಿದೆ. ರಾಬರ್ಟ್ ಮೊದಲ ದಿನ ಆಂಧ್ರ ಮತ್ತು ತೆಲಂಗಾಣದಲ್ಲಿ 3.12 ಕೋಟಿ ರೂ. ಬಾಚಿಕೊಂಡಿದೆ.

  ದರ್ಶನ್ ಸಿನಿಮಾ ಮೊದಲ ಬಾರಿಗೆ ತೆಲುಗಿನಲ್ಲಿ ಇಷ್ಟು ಅದ್ದೂರಿಯಾಗಿ ಬಿಡುಗಡೆಯಾಗಿದೆ. ಮೊದಲ ಸಿನಿಮಾದಲ್ಲೇ ದೊಡ್ಡ ಮಟ್ಟದ ಕಲೆಕ್ಷನ್ ನೋಡಿ ಸಿನಿಮಾತಂಡ ಸಹ ಸಂತಸದಲ್ಲಿದೆ. ಚಿತ್ರಮಂದಿರಗಳ ವಿಚಾರದಲ್ಲೂ ದಾಖಲೆ ನಿರ್ಮಿಸಿದ್ದ ರಾಬರ್ಟ್, ಕನ್ನಡ ಮತ್ತು ತೆಲುಗಿನಲ್ಲಿ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ.

  ಮೊದಲ ಬಾರಿಗೆ ಕನ್ನಡದ ಸಿನಿಮಾವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಕ್ಯೂ ನಿಂತು, ರಾಬರ್ಟ್ ನೋಡಿ ಸಂಭ್ರಮಿಸುತ್ತಿದ್ದಾರೆ.

  Roberrt Day 1 Box Office Collection: Darshan starrer earns Rs 17.24 crore

  ರಾಬರ್ಟ್ ಎರಡನೇ ದಿನವು ಹೌಸ್ ಫುಲ್ ದರ್ಶನ ಕಾಣುತ್ತಿದೆ. ತರುಣ್ ಸುಧೀರ್ ನಿರ್ದೇಶನ, ದರ್ಶನ್ ನಟನೆ, ಚಿತ್ರದ ಕತೆ, ಅರ್ಜುನ್ ಜನ್ಯ ಸಂಗೀತ ಪ್ರತಿಯೊಂದು ವಿಚಾರದಲ್ಲೂ ರಾಬರ್ಟ್ ಅಭಿಮಾನಿಗಳ ಹೃದಯ ಗೆದ್ದಿದೆ. ರಾಬರ್ಟ್ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಬಂಡವಾಳ ಹೂಡಿದ್ದಾರೆ.

  English summary
  Roberrt Day 1 Box Office Collection: Darshan starrer Roberrt is off to a great start at the box office as the film has earned Rs 17.24 crore on its opening day.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X