Just In
- 10 hrs ago
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- 10 hrs ago
'ಮತ್ತೆ ಮನ್ವಂತರ' ತರುತ್ತಿದ್ದಾರೆ ಟಿ.ಎನ್.ಸೀತಾರಾಮ್
- 11 hrs ago
ಚೈತ್ರಾ ಕೊಟೂರು ಪತಿ ಹಾಗೂ ಕುಟುಂಬದವರು ನಾಪತ್ತೆ
- 11 hrs ago
ಪವನ್ ಕಲ್ಯಾಣ್ ಮಗಳ ಕುರಿತು ಸಹನಟಿ ಅನನ್ಯಾ ಮಾತು
Don't Miss!
- Lifestyle
ಸೋಮವಾರದ ದಿನ ಭವಿಷ್ಯ: ಈ ದಿನ ನಿಮ್ಮ ರಾಶಿಫಲ ಹೇಗಿದೆ ನೋಡಿ
- Sports
ಐಪಿಎಲ್ 2021: ಕೊಲ್ಕತ್ತಾ ವಿರುದ್ಧದ ಸೋಲಿಗೆ ಕಾರಣ ಹೇಳಿದ ಡೇವಿಡ್ ವಾರ್ನರ್
- News
ಕರ್ಫ್ಯೂ ನಡುವೆಯೂ ಮೋಜು ಮಸ್ತಿ! ಪಾರ್ಟಿ ಮಾಡುತ್ತಿದ್ದ ಗ್ಯಾಂಗ್ ಕಂಬಿ ಹಿಂದೆ..!
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Automobiles
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ರಾಬರ್ಟ್' ಯಾವ ಜಿಲ್ಲೆಯಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ? ಇಲ್ಲಿದೆ ಸಂಪೂರ್ಣ ವಿವರ
ಡಿ ಬಾಸ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಮಾರ್ಚ್ 11 ರಂದು ಅದ್ದೂರಿಯಾಗಿ ತೆರೆಗೆ ಬಂದಿದೆ. ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಬಿಡುಗಡೆಯಾಗಿರುವ ರಾಬರ್ಟ್ ಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ರಾಬರ್ಟ್ ಚಿತ್ರದ ಮೊದಲ ದಿನದ ಕಲೆಕ್ಷನ್ ರಿಪೋರ್ಟ್ ಹೊರಬಿದ್ದಿದೆ. ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ರಾಬರ್ಟ್ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಕಲೆಕ್ಷನ್ ಮಾಡಿದೆ. ಸಿನಿಮಾ ತಂಡ ಅಧಿಕೃತವಾಗಿ ಕಲೆಕ್ಷನ್ ರಿಪೋರ್ಟ್ ಬಿಡುಗಡೆ ಮಾಡಿದ್ದು, ರಾಬರ್ಟ್ ಮೊದಲ ದಿನ ಕರ್ನಾಟಕದಲ್ಲಿ 17.24 ಕೋಟಿ ರೂ. ಗಳಿಕೆ ಮಾಡಿದೆ. ಇನ್ನು ಜಿಲ್ಲಾವಾರು ಕಲೆಕ್ಷನ್ ವಿವರ ಹೀಗಿದೆ..
'ರಾಬರ್ಟ್' ಬಗ್ಗೆ ನಿರ್ದೇಶಕ ತರುಣ್ ಸುಧೀರ್ ಭಾವನಾತ್ಮಕ ಪತ್ರ

ಯಾವ ಜಿಲ್ಲೆಯಲ್ಲಿ ಎಷ್ಟು ಕೋಟಿ ಕಲೆಕ್ಷನ್ ಆಗಿದೆ
ರಾಬರ್ಟ್ ಚಿತ್ರದ ಜಿಲ್ಲಾವಾರು ಕಲೆಕ್ಷನ್ ವರದಿ ಸಹ ಬಹಿರಂಗವಾಗಿದೆ. ರಾಬರ್ಟ್ ಸಿನಿಮಾ ಯಾವ ಯಾವ ಜಿಲ್ಲೆಯಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎನ್ನುವ ಸಂಪೂರ್ಣ ವರದಿಯನ್ನು ಸಿನಿಮಾ ತಂಡ ಹಂಚಿಕೊಂಡಿದೆ. ಬೆಂಗಳೂರು, ಕೋಲಾರ ಮತ್ತು ತುಮಕೂರಿನಲ್ಲಿ ರಾಬರ್ಟ್ 7 ಕೋಟಿ ರೂ. ಕಲೆಕ್ಷನ್ ಮಾಡಿದೆ.

ಉಳಿದ ಜಿಲ್ಲೆಗಳ ಕಲೆಕ್ಷನ್ ವಿವರ
ಮೈಸೂರು, ಮಂಡ್ಯ ಮತ್ತು ಹಾಸನದಲ್ಲಿ ರಾಬರ್ಟ್ 2 ಕೋಟಿ ರೂ. ಬಾಚಿಕೊಂಡಿದ್ರೆ, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ 2.24 ಕೋಟಿ ರೂ. ಗಳಿಸಿದೆ. ಶಿವಮೊಗ್ಗ 1ಕೋಟಿ ರೂ., ಹೈದರಾಬಾದ್ ಕರ್ನಾಟಕ 3 ಕೋಟಿ ರೂ., ಬಾಂಬೆ ಕರ್ನಾಟಕದಲ್ಲಿ 2 ಕೋಟಿ ರೂ ಕಲೆಕ್ಷನ್ ಆಗಿದೆ. ಕರ್ನಾಟಕದಲ್ಲಿ ರಾಬರ್ಟ್ ಗಳಿಸಿದ್ದು, ಒಟ್ಟು 17.24 ಕೋಟಿ ರೂಪಾಯಿ.
Roberrt Movie Review: ಹಗ್ಗದ ಮೇಲಿನ ನಡಿಗೆಯಲ್ಲಿ ಗೆದ್ದ ದರ್ಶನ್-ತರುಣ್ ಸುಧೀರ್

ದಾಖಲೆ ಕಲೆಕ್ಷನ್ ಮಾಡಿದ ಸಿನಿಮಾ
ರಾಬರ್ಟ್ ಕೋಟಿ ಕೋಟಿ ಬಾಚಿಕೊಳ್ಳುವ ಮೂಲಕ ಕರ್ನಾಟಕದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಚಲನಚಿತ್ರ ಎನ್ನುವ ದಾಖಲೆ ಸಹ ನಿರ್ಮಿಸಿದೆ. ಕರ್ನಾಟಕದಲ್ಲಿ ಹೆಚ್ಚು ಕಲೆಕ್ಷನ್ ದಾಖಲೆ ಹೊಂದಿರುವ ಸಿನಿಮಾಗಳೆಂದರೆ ದರ್ಶನ್ ಚಿತ್ರಗಳು. ಇದೀಗ ರಾಬರ್ಟ್ ಎಲ್ಲಾ ಸಿನಿಮಾಗಳ ದಾಖಲೆಯನ್ನು ಮುರಿದು ಮೊದಲ ಸ್ಥಾನದಲ್ಲಿದೆ.

ಆಂಧ್ರ ಪ್ರದೇಶದ ಕಲೆಕ್ಷನ್ ರಿಪೋರ್ಟ್
ಕನ್ನಡದ ಸಿನಿಮಾವೊಂದು ಮೊದಲ ದಿನ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡಿರುವುದು ನಿಜಕ್ಕೂ ಸ್ಯಾಂಡಲ್ ವುಡ್‌ಗೆ ಹೆಮ್ಮೆಯ ವಿಚಾರವಾಗಿದೆ. ಇನ್ನು ಆಂಧ್ರಪ್ರದೇಶದಲ್ಲೂ ರಾಬರ್ಟ್ ವಿಜಯಯಾತ್ರೆ ಮುಂದುವರೆದಿದೆ. ತೆಲುಗು ನಾಡಿನಲ್ಲೂ ರಾಬರ್ಟ್ ಉತ್ತಮ ಕಲೆಕ್ಷನ್ ಮಾಡಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ರಾಬರ್ಟ್ ಮೊದಲ ದಿನ 3.12 ಕೋಟಿ ರೂ. ಬಾಚಿಕೊಂಡಿದೆ.

ಸಂತಸದಲ್ಲಿ ಸಿನಿಮಾತಂಡ
ದೊಡ್ಡ ಮಟ್ಟದ ಕಲೆಕ್ಷನ್ ನೋಡಿ ಸಿನಿಮಾತಂಡ ಸಹ ಸಂತಸದಲ್ಲಿದೆ. ರಾಬರ್ಟ್ ಎರಡನೇ ದಿನವು ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ತರುಣ್ ಸುಧೀರ್ ನಿರ್ದೇಶನ, ದರ್ಶನ್ ನಟನೆ, ಚಿತ್ರಕತೆ, ಅರ್ಜುನ್ ಜನ್ಯ ಸಂಗೀತ ಪ್ರತಿಯೊಂದು ವಿಚಾರದಲ್ಲೂ ರಾಬರ್ಟ್ ಅಭಿಮಾನಿಗಳ ಹೃದಯ ಗೆದ್ದಿದೆ. ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಬಂಡವಾಳ ಹೂಡಿದ್ದಾರೆ.