ಅಕ್ಟೋಬರ್ 9ಕ್ಕೆ ರಾಬರ್ಟ್ ಚಿತ್ರತಂಡದಿಂದ ಸರ್ಪ್ರೈಸ್
ಡಿ ಬಾಸ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ ತಿಂಗಳಲ್ಲಿ ರಾಬರ್ಟ್ ಬಿಡುಗಡೆಯಾಗಬೇಕಿತ್ತು. ಆದ್ರೆ, ಲಾಕ್‌ಡೌನ್ ಆದ ಕಾರಣ ಆಗಲಿಲ್ಲ.
ಅಕ್ಟೋಬರ್ 15ರ ನಂತರ ಚಿತ್ರಮಂದಿರ ತೆರೆಯಲು ಅನುಮತಿ ನೀಡಿದ್ದರೂ, ಸ್ಟಾರ್ ನಟರ ಚಿತ್ರಗಳು ರಿಲೀಸ್ ಆಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಈಗಾಗಲೇ ಹಾಡುಗಳ ಮೂಲಕ ಬಹಳ ಹೈಪ್ ಕ್ರಿಯೇಟ್ ಮಾಡಿರುವ ರಾಬರ್ಟ್ ಅಕ್ಟೋಬರ್ 9ಕ್ಕೆ ಹೊಸ ಪೋಸ್ಟರ್ ಬಿಡುಗಡೆ ಮಾಡಲಿದೆ.
ನಿರ್ದೇಶಕ ತರುಣ್ ಸುಧೀರ್ ಹುಟ್ಟುಹಬ್ಬದ ಹಿನ್ನೆಲೆ ಅಕ್ಟೋಬರ್ 9ಕ್ಕೆ ರಾಬರ್ಟ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಪ್ರಕಟಿಸಿದ್ದಾರೆ.

ದರ್ಶನ್ ನಾಯಕರಾಗಿ ನಟಿಸಿರುವ ಈ ಚಿತ್ರದಲ್ಲಿ ಆಶಾ ಭಟ್ ನಾಯಕಿಯಾಗಿದ್ದಾರೆ. ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗು ನಟ ಜಗಪತಿ ಬಾಬು ವಿಲನ್ ಆಗಿ ಅಭಿನಯಿಸಿದ್ದಾರೆ.
ಇನ್ನು ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನಿರ್ದೇಶಿಸಿದ್ದಾರೆ.


Click it and Unblock the Notifications











