Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತರುಣ್ ಸುಧೀರ್ ಹುಟ್ಟುಹಬ್ಬಕ್ಕೆ ಶುಭಕೋರಿದ 'ರಾಬರ್ಟ್ ಕ್ವೀನ್'
ರಾಬರ್ಟ್ ಚಿತ್ರದ ನಿರ್ದೇಶಕ ತರುಣ್ ಸುದೀರ್ ಹುಟ್ಟುಹಬ್ಬದ ಸಂಬ್ರಮದಲ್ಲಿದ್ದಾರೆ. ತರುಣ್ ಬರ್ತಡೇ ವಿಶೇಷವಾಗಿ ರಾಬರ್ಟ್ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿ ಸರ್ಪ್ರೈಸ್ ನೀಡಿದೆ.
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ತರುಣ್ ಸುಧೀರ್ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದು, ತಮ್ಮ ಮನೆಯಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ರಾಬರ್ಟ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಸಹ ಭಾಗಿಯಾಗಿದ್ದರು.
ತರುಣ್ ಸುಧೀರ್ ಗೆ ವಿಶ್ ಮಾಡಿ 'ರಾಬರ್ಟ್' ಸಿನಿಮಾದ ಹೊಸ ಪೋಸ್ಟರ್ ಶೇರ್ ಮಾಡಿದ ದರ್ಶನ್
ತರುಣ್ ಸುಧೀರ್ ಬರ್ತಡೇ ಇಡೀ ರಾಬರ್ಟ್ ತಂಡಕ್ಕೆ ವಿಶೇಷವಾಗಿದ್ದು, ನಟಿ ಆಶಾ ಭಟ್ ಸಹ ಟ್ವಿಟ್ಟರ್ ಮೂಲಕ ವಿಶ್ ಮಾಡಿದ್ದಾರೆ.
ನಿಮ್ಮೆಲ್ಲ ಒಳ್ಳೆಯದಕ್ಕು ಇದು ಶುಭ ದಿನ ಎಂದು ಶುಭಕೋರಿರುವ ಆಶಾಭಟ್ ತರುಣ್ ಸುಧೀರ್ಗೆ ಧನ್ಯವಾದ ಸಹ ತಿಳಿಸಿದ್ದಾರೆ. ಇನ್ನು ಆಶಾ ಭಟ್ಗೆ ಇದು ಮೊದಲ ಕನ್ನಡ ಸಿನಿಮಾ. ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ನೆಲೆ ಕಾಣಲು ಕಾತುರದಿಂದ ಕಾಯುತ್ತಿದ್ದಾರೆ.
ತರುಣ್ ಸುಧೀರ್ ಹುಟ್ಟುಹಬ್ಬದ ಪ್ರಯುಕ್ತ ನಟ ಶರಣ್ ಹೊಸ ಸಿನಿಮಾ ಘೋಷಣೆ ಮಾಡಿದ್ದು, ಈ ಚಿತ್ರದಲ್ಲಿ ತರುಣ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಸದ್ಯ ರಾಬರ್ಟ್ ಚಿತ್ರವನ್ನು ಸಂಪೂರ್ಣವಾಗಿ ಮುಗಿಸಿರುವ ತರುಣ್ ಸುಧೀರ್, ಬಿಡುಗಡೆಯ ತಯಾರಿಯಲ್ಲಿದ್ದಾರೆ.