ರಿಷಬ್ ಶೆಟ್ಟಿ ಬಳಿಕ ರಾಮಮಂದಿರ ಉದ್ಘಾಟನೆಗೆ ನಟ ಯಶ್‌ಗೂ ಆಹ್ವಾನ

ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಗಣ್ಯರು, ರಾಜಕಾರಣಿಗಳು ಸೇರಿದಂತೆ ಚಿತ್ರರಂಗದವರು ಭಾಗಿಯಾಗಲಿದ್ದಾರೆ. ಈ ಹಿಂದೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ಬಂದಿತ್ತು.

ಇದರ ಬೆನ್ನಲ್ಲೇ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಾಕಿಂಗ್ ಸ್ಟಾರ್ ಯಶ್ ಅವರಿಗೂ ಆಹ್ವಾನ ಬಂದಿದೆ. ಈ ಹಿಂದೆ ಆಹ್ವಾನ ನಿದ್ದಿದ್ದ ಪಟ್ಟಿಯಲ್ಲಿ ಕನ್ನಡ ಚಿತ್ರರಂಗದಿಂದ ರಿಷಬ್ ಶೆಟ್ಟಿ ಮಾತ್ರ ಇದ್ದರು. ದಕ್ಷಿಣದ ಕೆಲವೇ ಕೆಲವು ನಟರಿಗೆ ಕಾರ್ಯಕ್ರಕ್ಕೆ ಆಹ್ವಾನ ನೀಡಲಾಗಿತ್ತು. ಈಗ ಅವರ ಜೊತೆಗ ಯಶ್‌ಗೂ ಕೂಡ ಈ ಆಹ್ವಾನ ಬಂದಿದ್ದು, ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Rocking Star Yash Invited For Ram Mandir Temple Inauguration Ceremony

ನಟ ಯಶ್‌ಗೂ ಬಂತು ರಾಮಮಂದಿರ ಉದ್ಘಾಟನೆಗೆ ಆಹ್ವಾನ

ನಟ ಯಶ್ ಕೆಜಿಎಫ್ ಸಿನಿಮಾ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರಿಗೆ ಎಲ್ಲಾ ಕಡೆಗಳಲ್ಲೂ ಫ್ಯಾನ್ಸ್ ಇದ್ದಾರೆ. ಹೀಗಾಗಿ ಅವರ ಸ್ಟಾರ್‌ಡಂ ಹೆಚ್ಚಾಗಿದ್ದು, ದೇಶದ ಪ್ರಮುಖ ಸೆಲಬ್ರಿಟಿಗಳಲ್ಲಿ ಒಬ್ಬರಾಗಿದ್ದಾರೆ. ನಟ ರಿಷಬ್ ಶೆಟ್ಟಿ ಜೊತೆಗೆ ರಾಮ ಮಂದಿರ ಉದ್ಘಾಟನೆಗೆ ತೆರಳುವುದು ಖಚಿತವಾಗಿದೆ.

ಇನ್ನು, "ಬಾಲಿವುಡ್‌ನಿಂದ, ರಣಬೀರ್ ಕಪೂರ್, ಆಲಿಯಾ ಭಟ್, ಅಜಯ್ ದೇವಗನ್, ಸನ್ನಿ ಡಿಯೋಲ್, ಟೈಗರ್ ಶ್ರಾಫ್ ಮತ್ತು ಆಯುಷ್ಮಾನ್ ಖುರಾನಾ ಅವರನ್ನು ಆಹ್ವಾನಿಸಲಾಗಿದೆ. ದಕ್ಷಿಣದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್‌ಗಳಾದ ಪ್ರಭಾಸ್ ಮತ್ತು ಯಶ್ ಅವರನ್ನು ಐತಿಹಾಸಿಕ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ" ಎಂದು ಮೂಲಗಳನ್ನು ಉಲ್ಲೇಖಿಸಿ ನಿರ್ಮಾಪಕ ಮಹಾವೀರ್ ಜೈನ್ ತಿಳಿಸಿದ್ದಾರೆ.

ಈ ಹಿಂದೆ ಅಮಿತಾಭ್ ಬಚ್ಚನ್, ಮಾಧುರಿ ದೀಕ್ಷಿತ್, ಅನುಪಮ್ ಖೇರ್, ಅಕ್ಷಯ್ ಕುಮಾರ್, ರಜನಿಕಾಂತ್, ಸಂಜಯ್ ಲೀಲಾ ಬನ್ಸಾಲಿ, ಚಿರಂಜೀವಿ, ಮೋಹನ್ ಲಾಲ್, ಧನುಷ್ ಮತ್ತು ರಿಷಬ್ ಶೆಟ್ಟಿ ಅವರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿತ್ತು. ಈಗ ಮತ್ತಷ್ಟು ಸೆಲಬ್ರಿಟಿಗಳನ್ನು ಪಟ್ಟಿಗೆ ಸೇರಿಸಲಾಗಿದೆ.

Rocking Star Yash Invited For Ram Mandir Temple Inauguration Ceremony

ರಾಮ ಮಂದಿರಕ್ಕೆ 50 ಕೋಟಿ ರೂಪಾಯಿ ದೇಣಿಗೆ ನೀಡಿದ ಯಶ್!?

ಈ ಹಿಂದೆ ನಟ ಯಶ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 50 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಸಕತ್ ವೈರಲ್ ಆಗಿತ್ತು. ಫೇಸ್‌ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಪೋಸ್ಟ್ ವೈರಲ್ ಆಗಿತ್ತು. ಆದರೆ, ಈ ಬಗ್ಗೆ ನಟ ಯಶ್ ಯಾವುದೇ ಮಾಹಿತಿ ನೀಡಲಿಲ್ಲ. ಹಲವು ಫ್ಯಾಕ್ಟ್‌ಚೆಕ್ ವೆಬ್ಸೈಟ್‌ಗಳು ಇದರ ಸತ್ಯಾಸತ್ಯತೆ ಕಂಡು ಹಿಡಿದು ಇದು ಸುಳ್ಳು ಎಂದು ಹೇಳಿದ್ದರು.

ಯಶ್ 2022ರ ಏಪ್ರಿಲ್ ತಿಂಗಳಲ್ಲಿ ಕೆಜಿಎಫ್ ಅಧ್ಯಾಯ 2 ಬಿಡುಗಡೆಯ ಮೊದಲು ತಿರುಪತಿಗೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡು ಅವರು ಅಯೋಧ್ಯೆಗೆ ತೆರಳಿ ದೇಣಿಗೆ ನೀಡಿದ್ದಾರೆ ಎಂದು ವದಂತಿ ಹಬ್ಬಿಸಲಾಗಿತ್ತು. ರಾಮ ಮಂದಿರ ನಿರ್ಮಾಣಕ್ಕೆ ಸೆಲಬ್ರಿಟಿಗಳು ಸೇರಿದಂತೆ ಜನ ಸಾಮಾನ್ಯರು ಕೂಡ ಉದಾರವಾಗಿ ದೇಣಿಗೆ ನೀಡಿದ್ದಾರೆ.

ಜನವರಿ 22 ರಂದು ನಡೆಯಲಿರುವ ರಾಮಮಂದಿರ ಉದ್ಘಾಟನ ಸಮಾರಂಭದಲ್ಲಿ ದೇವಾಲಯದಲ್ಲಿ ರಾಮ ಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಇದರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನೂರಾರು ಅಧಿಕಾರಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಮಾರಂಭಕ್ಕೆ ಎಲ್ಲಾ ಪಂಗಡಗಳ 4,000 ಸಂತರನ್ನು ಆಹ್ವಾನಿಸಲಾಗಿದೆ.

More from Filmibeat

English summary
Actor Yash have been invited for Ram Temple inauguration
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X