"ನನಗೆ ಬರ್ತ್‌ಡೇ ಅಂದ್ರೇನೆ ಭಯ, ನನ್ನ ಬಗ್ಗೆನೇ ನನಗೆ ಅಸಹ್ಯ ಬಂದ್ಬಿಟ್ಟಿದೆ"; ಫ್ಯಾನ್ಸ್ ಸಾವಿಗೆ ಯಶ್ ಪ್ರತಿಕ್ರಿಯೆ

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ಬ್ಯಾನರ್ ಕಟ್ಟಲು ಹೋಗಿದ್ದ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಮೂವರು ಯುವಕ ಮೃತ ಪಟ್ಟಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಯಶ್ ದುರ್ಘಟನೆಯಿಂದ ಮೃತಪಟ್ಟ ಅಭಿಮಾನಿಗಳ ಮನೆಗೆ ಭೇಟಿ ನೀಡಿದ್ದಾರೆ.

ಮಧ್ಯರಾತ್ರಿ ಯಶ್ ಬ್ಯಾನರ್ ನಿಲ್ಲಿಸಲು ಸೂರಣಗಿ ಗ್ರಾಮದ ಮುರಳಿ ನಡವಿನಮನಿ (20), ಹನಮಂತ ಹರಿಜನ್ (21), ಹಾಗೂ ನವೀನ್ ಗಾಜಿ(19) ಹೋಗಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಈ ಮೂವರು ಅಭಿಮಾನಿಗಳು ಮೃತರಾಗಿದ್ದರು. ಇನ್ನು ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

Rocking star Yash reaction on gadag fans death

ಈ ವೇಳೆ ಮೃತ ಅಭಿಮಾನಿಗಳ ಮನೆಗೆ ಭೇಟಿ ನೀಡಿದ್ದ ಯಶ್ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ಈ ದುರ್ಘಟನೆಯನ್ನು ನೆನೆದು ಭಾವುಕರಾಗಿದ್ದಾರೆ. ಅಭಿಮಾನಿಗಳ ಕುಟುಂಬಸ್ಥರ ಭೇಟಿ ಬಳಿಕ ಯಶ್ ಮಾಧ್ಯಮಕ್ಕೆ ನೀಡಿದ ಹೇಳಿಕೆಗಳ ಝಲಕ್ ಇಲ್ಲಿದೆ.

"ನೋಡಿ ಅಭಿಮಾನ ಯಾವುದೇ ಕಾರಣಕ್ಕೂ ಈ ರೀತಿ ವ್ಯಕ್ತ ಪಡಿಸಬೇಕು, ಬ್ಯಾನರ್ ಹಾಕಬೇಕು ಅನ್ನೋದೆಲ್ಲ ಇಷ್ಟ ಪಡಲ್ಲ. ಪ್ರತಿ ವರ್ಷ ಬರ್ತ್‌ಡೇ ಬಂದಾಗ ಈತರ ಒಂದೊಂದು ಘಟನೆ ನಡೆದಾಗ, ನನಗೆ ಬರ್ತ್‌ಡೇ ಅಂದರೇನೆ ಭಯ ಬಂದುಬಿಟ್ಟಿದೆ. ನಿಜ ಹೇಳಬೇಕು ಅಂದರೆ, ನನ್ನ ಬಗ್ಗೆ ನನಗೆ ಅಸಹ್ಯ ಆಗಿಬಿಟ್ಟಿದೆ."

"ನಿಜ ಹೇಳುತ್ತೇನೆ ಕೇಳಿ. ಅವರು ಎಲ್ಲಿಂದಲೂ ಕೂತು ಪ್ರೀತಿಯಿಂದ ನಮಗೆ ಹರಸಿದರೆ ಸಾಕು. ಅದೇ ನಿಜವಾದ ಬರ್ತ್‌ಡೇ. ಈ ವರ್ಷ ನಾನು ಬರ್ತ್‌ಡೇ ಮಾಡದೇ ಇರೋದಕ್ಕೆ ಕಾರಣನೇ ನೀವು. 10-15 ದಿನಗಳ ಮುಂಚೆ ಎಲ್ಲಾ ಕೋವಿಡ್ ಅಂತ ಶುರು ಮಾಡಿದ್ರಲ್ಲ. ನಮ್ಮ ಬರ್ತ್‌ಡೇ ಅಂತ ಯಾರಿಗೂ ತೊಂದರೆ ಆಗಬಾರದು. ಯಾರಿಗೂ ಆರೋಗ್ಯ ಹಾಳಾಗಬಾರದು, ಬೇಕು ಅಂತಲೇ ಬರ್ತ್‌ಡೇ ಕ್ಯಾನ್ಸಲ್ ಮಾಡಿದ್ದು."

" ಬರ್ತ್‌ಡೇ ಬೇಡ ಅಂದರೂ, ಅಭಿಮಾನಿಗಳು ಬೇಸರ ಮಾಡಿಕೊಳ್ಳುತ್ತಾರೆ. ಮಾಡಿದರೆ ಏನಾದರೂ ಒಂದು ಆಗುತ್ತೆ. ಮನೆಗೆ ಯಾರು ಬೇಕಾದರೂ ಸಹಾಯ ಮಾಡಬಹುದು. ಆದರೆ, ಮನೆಗೆ ಮಗ ಬರುತ್ತಾನಾ? ಮನೆಯಲ್ಲಿ ಮಕ್ಕಳನ್ನು ಕಳ್ಕೊಂಡವರು ಏನು ಹೇಳ್ತಾರೆ? ನಮ್ಮ ಮನೆಯಲ್ಲಿ ಸಾವು ಆದರೂ ಏನು ಹೇಳುವುದಕ್ಕೆ ಸಾಧ್ಯ ಹೇಳಿ? ಏನು ಕೊಟ್ಟರೂ ಮಗ ಬರುತ್ತಾನಾ? ಇನ್ನೂ 20-25 ವರ್ಷದ ಹುಡುಗರು."

"ಈ ಮುಖಾಂತರ ಎಲ್ಲರಿಗೂ ಕೇಳಿ ಕೊಳ್ಳುತ್ತೇನೆ. ಹೀಗೆ ಬ್ಯಾನರ್ ಕಟ್ಟೋದು, ಬೈಕ್‌ನಲ್ಲಿ ಚೇಸ್ ಮಾಡಿಕೊಂಡು ಬರೋದು. ಫೋಟೊ ತೆಗೆಯೋದು, ಸೆಲ್ಫಿ ತೆಗೆಯೋದು ಇವನ್ನೆಲ್ಲ ಬಿಟ್ಟು ಬಿಡಿ. ನನ್ನ ಸುತ್ತಮುತ್ತ ಜನ ಇರಬೇಕು ಅಂತ ಬಯಸೋದಿಲ್ಲ. ಬೇಜಾರು ಮಾಡಿಕೊಂಡರೂ ಪರ್ವಾಗಿಲ್ಲ ಅಂತ ನಾನು ಯಾರ ಕೈಗೂ ಸಿಗೋದಿಲ್ಲ.

"ನಾನು ಈಗ ಏನೋ ಒಂದು ಘೋಷಣೆ ಮಾಡೋದು ದೊಡ್ಡ ವಿಷಯ ಅಲ್ಲ. ನಾನು ನಿಜವಾಗಲೂ ಅವರ ಕುಟುಂಬವನ್ನು ಅರ್ಥ ಮಾಡಿಕೊಂಡು. ಅವರಿಗೆ ಏನು ಅವಶ್ಯಕತೆ ಇರುತ್ತೋ? ಅದನ್ನು ಮಾಡೋಣ. ಇವತ್ತು ಅದೆಲ್ಲ ಮಾತಾಡೋ ಸಮಯ ಅಲ್ಲ.

More from Filmibeat

English summary
Rocking star Yash reaction on gadag fans death:
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X