»   » ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಜೂಹಿ ಚಾವ್ಲಾ

ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಜೂಹಿ ಚಾವ್ಲಾ

Posted By:
Subscribe to Filmibeat Kannada

ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಜೂಹಿ ಚಾವ್ಲಾ ಮತ್ತೊಮ್ಮೆ "ಇದು ನನ್ನ ನಿನ್ನ ಪ್ರೇಮಗೀತೆ ಚಿನ್ನ...ಇದು ಎಷ್ಟು ಭಾರಿ ಹಾಡಿದರು ಚೆನ್ನಾ..." ಎಂದು ಡ್ಯುಯೆಟ್ ಹಾಡುವ ಸಮಯ ಬಂದಿದೆ. ಈ ಜೋಡಿ ಇಪ್ಪತ್ತೆರಡು ವರ್ಷಗಳ ಬಳಿಕ ಮತ್ತೆ ಬೆಳ್ಳಿಪರದೆ ಮೇಲೆ ಒಂದಾಗುತ್ತಿದ್ದಾರೆ.

ರವಿಚಂದ್ರನ್ ಹಾಗೂ ಜೂಹಿ ಚಾವ್ಲಾ ಜೋಡಿಯಾಗಿ ಅಭಿನಯಿಸಿದ ಕೊನೆಯ ಚಿತ್ರ 'ಶಾಂತಿಕ್ರಾಂತಿ' (1991). ಇದಾದ ಬಳಿಕ ಜೂಹಿ ಕನ್ನಡದಲ್ಲಿ ಅಭಿನಯಿಸಲಿಲ್ಲ. 'ಪ್ರೇಮಲೋಕ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿಯಿಟ್ಟ ಜೂಹಿ ಚಾವ್ಲಾ ಬಳಿಕ 'ಕಿಂದರಿ ಜೋಗಿ' ಹಾಗೂ 'ಶಾಂತಿ ಕ್ರಾಂತಿ' ಚಿತ್ರಗಳಲ್ಲಿ ರವಿಚಂದ್ರನ್ ಜೊತೆ ಅಭಿನಯಿಸಿದ್ದರು.

ಈಗ ಮತ್ತೊಮ್ಮೆ ಒಂದಾಗುತ್ತಿದ್ದಾರೆ. ಕಿಚ್ಚ ಸುದೀಪ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದಲ್ಲಿ ಜೂಹಿ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಎಂ ಎನ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರ ಇದೇ ಆಗಸ್ಟ್ 19ಕ್ಕೆ ಸೆಟ್ಟೇರುತ್ತಿದೆ. ಈ ಚಿತ್ರದಲ್ಲಿ ರವಿಚಂದ್ರನ್ ಅವರಿಗೆ ಜೂಹಿ ಚಾವ್ಲಾ ಜೋಡಿಯಾಗುವುದು ಬಹುತೇಕ ಖಚಿತವಾಗಿದೆ.

ನಲ್ಲ ಮಲ್ಲರ ಕಾಂಬಿನೇಷನ್ ನಲ್ಲಿ ಬರುತ್ತಿರುವ ಈ ಚಿತ್ರ ಸ್ಯಾಂಡಲ್ ವುಡ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ರವಿಚಂದ್ರನ್ ಹಾಗೂ ಸುದೀಪ್ ಇಬ್ಬರು ಇದೇ ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸುತ್ತಿರುವ ಚಿತ್ರ ಇದಾಗಿದೆ. (ಏಜೆನ್ಸೀಸ್)

English summary
The romantic pair of Kannada films Crazy Star Ravichandran and Juhi Chawla all set to recreate magic again in upcoming film. The duo to act in a new film to be directed by Sudeep and produced by M N Kumar launching on 19th August.
Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada