For Quick Alerts
  ALLOW NOTIFICATIONS  
  For Daily Alerts

  'ಮಲ್ಟಿಪ್ಲೆಕ್ಸ್'ಗಳಲ್ಲಿ ರೂ.200 ಟಿಕೆಟ್ ದರ: ಇನ್ನೆರೆಡು ದಿನಗಳಲ್ಲಿ ಅಧಿಕೃತ

  By Bharath Kumar
  |

  'ಮಲ್ಟಿಪ್ಲೆಕ್ಸ್'ಗಳಲ್ಲಿ ಇನ್ಮುಂದೆ ಟಿಕೆಟ್ ದರ 200 ರೂ. ನಿಗದಿಪಡಿಸುವುದರ ಜೊತೆ ಮಲ್ಟಿಪ್ಲೆಕ್ಸ್'ಗಳಲ್ಲಿ ದಿನಕ್ಕೆ 2 ಶೋಗಳನ್ನು ಕನ್ನಡ ಚಿತ್ರ ಪ್ರದರ್ಶಿಸಲು ನಾಳೆ ಅಥವಾ ನಾಡಿದ್ದು ಸರ್ಕಾರಿ ಆದೇಶ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.[ಮೇ ತಿಂಗಳಿಂದ 'ಮಲ್ಟಿಪ್ಲೆಕ್ಸ್'ಗಳಲ್ಲಿ 200 ರೂ ಟಿಕೆಟ್ ಕಡ್ಡಾಯ: ಸಿದ್ದರಾಮಯ್ಯ]

  2016ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ''ಮಲ್ಟಿಪ್ಲೆಕ್ಸ್'ಗಳಲ್ಲಿ 200 ಟಿಕೆಟ್ ದರ ಎರಡು ದಿನದಲ್ಲಿ ಅಧೀಕೃತವಾಗಿ ಸರ್ಕಾರ ಆದೇಶ ಮಾಡಲಿದೆ. ಹಾಗೆಯೇ, ಪ್ರೈಮ್ ಸಮಯದಲ್ಲಿ ಕನ್ನಡ ಚಿತ್ರಗಳಿಗಾಗಿ ಎರಡು ಶೋಗಳನ್ನ ಮೀಸಲಿಡಬೇಕು ಎಂದು ಕೂಡ ಆದೇಶಿಸುವುದಾಗಿ ತಿಳಿಸಿದರು.['ಮಲ್ಟಿಫ್ಲೆಕ್ಸ್'ಗಳಿಗೆ ಸಿದ್ದು ಸರ್ಕಾರ ಶಾಕ್: ಚಿತ್ರಪ್ರೇಮಿಗಳಿಗೆ 'ಸಿನಿಮಾ ಭಾಗ್ಯ']

  ಮಾರ್ಚ್ 15 ರಂದು 2017ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಮಲ್ಟಿಪ್ಲೆಕ್ಸ್'ಗಳಿಗೆ ಏಕರೀತಿಯ ಪ್ರವೇಶದರ ನೀತಿ ಆದೇಶ ಹೊರಡಿಸಿದ್ದರು. ಮೇ ತಿಂಗಳಿನಿಂದ ಈ ನೀತಿ ಜಾರಿಯಾಗಲಿದೆ ಎಂದು ಸರ್ಕಾರ ತಿಳಿಸಿತ್ತು. ಹೀಗಾಗಿ, ಇನ್ನೆರೆಡು ದಿನಗಳಲ್ಲಿ ಸರ್ಕಾರ ಅಧಿಕೃತವಾಗಿ ಘೋಷಿಸಲಿದೆ.['ಮಲ್ಟಿಪ್ಲೆಕ್ಸ್'ಗಳಲ್ಲಿ ಇನ್ನೂ ಸಿಗುತ್ತಿಲ್ಲ 200 ರೂಗೆ ಸಿನಿಮಾ ಟಿಕೆಟ್]

  English summary
  Karnataka Chief Minister Siddaramaiah said on Monday that the cap on ticket pricing in multiplexes will come into effect in two days.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X