Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಯಕಿಯ ಅರ್ಧ ಫೋಟೋ ಶೇರ್ ಮಾಡಿ ಕುತೂಹಲ ಮೂಡಿಸಿದ ರಕ್ಷಿತ್ ಶೆಟ್ಟಿ & ತಂಡ; ಆ ನಟಿ ಇವರೇ ನೋಡಿ?
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಇದೀಗ ಚಿತ್ರದ ಪ್ಯಾಚ್ ವರ್ಕ್ ಕೆಲಸದಲ್ಲಿ ನಿರತರಾಗಿದ್ದಾರೆ. ಇತ್ತೀಚಿಗಷ್ಟೆ ಕಾಶ್ಮೀರದಲ್ಲಿ ಚಿತ್ರೀಕರಣ ಮುಗಿಸಿ ವಾಪಸ್ ಆಗಿದ್ದ ಸಿನಿಮಾತಂಡ ತುಂಬಾ ಕಷ್ಟದ ಭಾಗದ ಚಿತ್ರೀಕರಣವನ್ನು ಸಂಪೂರ್ಣ ಮಾಡುವ ಮೂಲಕ ಚಾರ್ಲಿ ಶೂಟಿಂಗ್ ಮುಕ್ತಾಯವಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.
Recommended Video
ಚಾರ್ಲಿ ಮುಗಿಯುತ್ತಿದ್ದಂತೆ ರಕ್ಷಿತ್ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ಬ್ಯುಸಿಯಾಗುತ್ತಿದ್ದಾರೆ. ಈಗಾಗಲೇ ಪ್ರಿ ಪ್ರೊಡಕ್ಷನ್ ಕೆಲಸ ಮುಗಿಸಿ ಚಿತ್ರೀಕರಣಕ್ಕೆ ಸಿದ್ಧವಾಗಿರುವ ಸಪ್ತ ಸಾಗರದಾಚೆ ಎಲ್ಲೋ ಟೀಂ, ನಾಯಕಿಯ ಅರ್ಧ ಫೋಟೋ ರಿವೀಲ್ ಮಾಡಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದಾರೆ.
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
ರಕ್ಷಿತ್ ಜೊತೆ ರೊಮ್ಯಾನ್ಸ್ ಮಾಡುತ್ತಿರುವ ನಾಯಕಿ ಯಾರಿರಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ನಾಯಕಿಯ ಅರ್ಧ ಫೋಟೋ ನೋಡಿ ಯಾರಿರಬಹುದು ಎಂದು ಅಭಿಮಾನಿಗಳು ಸಾಕಷ್ಟು ಹೆಸರುಗಳನ್ನು ಹೇಳುತ್ತಿದ್ದಾರೆ. ಅಂದಹಾಗೆ ರಕ್ಷಿತ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿರುವ ನಟಿ ಮತ್ತು ಈ ಅರ್ಧ ಫೋಟೋದಲ್ಲಿರುವ ಸುಂದರಿ ರುಕ್ಮಿಣಿ ವಸಂತ್.
ರುಕ್ಮಿಣಿ ವಸಂತ್ ಈಗಾಗಲೇ ಕನ್ನಡದಲ್ಲಿ ಒಂದು ಸಿನಿಮಾ ಮಾಡಿದ್ದಾರೆ. ಹೌದು, ಬೀರ್ ಬಲ್ ಎನ್ನುವ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಇದೀಗ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮೂಲಕ ಎರಡನೇ ಬಾರಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.
ಅಂದಹಾಗೆ ರುಕ್ಮಿಣಿ ಆಡಿಷನ್ ಮೂಲಕ ಸಿನಿಮಾಗೆ ಆಯ್ಕೆಯಾಗಿದ್ದು, ರಕ್ಷಿತ್ ಮತ್ತು ತಂಡದ ಜೊತೆ ಕೆಲಸ ಮಾಡಲು ಸಖತ್ ಎಕ್ಸಾಯಿಟ್ ಆಗಿದ್ದಾರೆ. ಅಂದಹಾಗೆ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾಗೆ ಗೋಧಿ ಬಣ್ಣ ಸಾಧಾರಣ ಮೈ ಕಟ್ಟು ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದಲ್ಲಿ ಸಿನಿಮಾ ಮೂಡಿಬರುತ್ತಿದೆ.