Don't Miss!
- News
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದ ಸಿದ್ದರಾಮಯ್ಯ.! ಆ ಪತ್ರದಲ್ಲಿ ಏನಿದೆ.?
- Sports
IND-W vs SA-W T20 Tri-series Final: ಭಾರತ ವನಿತೆಯರ ವಿರುದ್ಧ ದಕ್ಷಿಣ ಆಫ್ರಿಕಾಗೆ ಜಯ
- Lifestyle
ಮಗುವಿಗೆ ತುಂಬಾ ಜ್ವರ ಇದ್ದಾಗ ಏನು ಮಾಡಬೇಕು?
- Finance
6 ತಿಂಗಳಲ್ಲಿ 2ನೇ ಬಾರಿಗೆ ಉದ್ಯೋಗಿಗಳನ್ನು ವಜಾಗೊಳಿಸಿದ Byju's: ಈ ಬಾರಿ ಎಷ್ಟು ನೌಕರರು?
- Automobiles
ಭಾರತದಲ್ಲಿ ಮಾರುತಿ ಜಿಮ್ನಿ ಎಸ್ಯುವಿಗೆ ಭಾರೀ ಡಿಮ್ಯಾಂಡ್: ಪ್ರತಿಸ್ಪರ್ಧಿಗಳಿಗೆ ಹೆಚ್ಚಿದ ಆತಂಕ
- Technology
ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಾಯರ್ಲೆಸ್ ಚಾರ್ಜಿಂಗ್ ಬೆಂಬಲಿಸುವ ಸ್ಮಾರ್ಟ್ವಾಚ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಈ ಬಾರಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಕಿಚ್ಚ ಸುದೀಪ್? ಏನಿದು ಗುಸು ಗುಸು?
ಚುನಾವಣೆ ಹತ್ತಿರ ಬರುತ್ತಿದೆ. ಅದಕ್ಕೆ ಈಗಿನಿಂದಲೇ ರಾಜಕೀಯ ಪಕ್ಷಗಳು ಅಖಾಡಕ್ಕೆ ಇಳಿದಿವೆ. ಗ್ರಾಮ ಗ್ರಾಮಗಳಿಗೂ ಭೇಟಿ ನೀಡುತ್ತಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಕರ್ನಾಟಕದಲ್ಲಿ ಮೂರು ಪ್ರಮುಖ ರಾಜಕೀಯ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೆ ತೆರೆಮರೆಯಲ್ಲಿ ರಣತಂತ್ರವನ್ನು ರೂಪಿಸುತ್ತಿವೆ.
ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಆರಂಭ ಆಗಿವೆ. ಇದೇ ವೇಳೆ ಸಿನಿಮಾ ತಾರೆಯರನ್ನು ಕರೆತಂದು ಚುನಾವಣೆಗೆ ನಿಲ್ಲಿಸುವ ಸಾಧ್ಯತೆಗಳು ಸಾಕಷ್ಟಿವೆ.
Oscars
2023
:
RRR,ಕಾಂತಾರ
ಅಷ್ಟೇ
ಅಲ್ಲ..
ಆಸ್ಕರ್
ಲಿಸ್ಟ್‌ನಲ್ಲಿದೆ
ಕಿಚ್ಚನ
'ವಿಕ್ರಾಂತ್
ರೋಣ'!
ಸದ್ಯ ಕಿಚ್ಚ ಸುದೀಪ್ ಮೇಲೆ ಕಾಂಗ್ರೆಸ್ ಪಕ್ಷ ಕಣ್ಣಿಟ್ಟಿದೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಮಾಧ್ಯಮಗಳ ವರದಿ ಪ್ರಕಾರ, ರಮ್ಯಾ ಮೂಲಕ ಕಿಚ್ಚ ಸುದೀಪ್ ಅವರನ್ನು ಕಾಂಗ್ರೆಸ್ ಮುಖಂಡರು ಸಂಪರ್ಕಿಸಿದ್ದು, ರಾಜಕೀಯಕ್ಕೆ ಕರೆದುಕೊಂಡು ಬರಲೇಬೇಕು ಅಂತ ನಿರ್ಧರಿಸಿದ್ದಾರೆ ಅನ್ನೋ ಮಾತು ಕೇಳಿ ಬರುತ್ತಿದೆ.

ಕಾಂಗ್ರೆಸ್ ಸೇರುತ್ತಾರಾ ಕಿಚ್ಚ ಸುದೀಪ್?
ಕಿಚ್ಚ ಸುದೀಪ್‌ಗೆ ಅಪಾರ ಅಭಿಮಾನಿ ಬಳಗವಿದೆ. ಅಲ್ಲದೆ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಅಂತ ಮುಖಂಡರು ನಿರ್ಧರಿಸಿದ್ದಾರೆ. ಹೀಗಾಗಿ ಸುದೀಪ್ ಕಾಂಗ್ರೆಸ್ ಸೇರಿದರೆ ದೊಡ್ಡ ಮಟ್ಟದಲ್ಲಿ ಲಾಭ ಆಗಲಿದೆ ಅಂತ ಚಿಂತಿಸಿದ್ದಾರೆ. ಹೀಗಾಗಿ ರಮ್ಯಾ ಮೂಲಕ ಕೇಂದ್ರ ಕಾಂಗ್ರೆಸ್ ನಾಯಕರು ಸುದೀಪ್ ಅವರನ್ನು ಸಂಪರ್ಕಿಸಿದ್ದಾರೆ ಅಂತ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಬಗ್ಗೆ ರಮ್ಯಾ, ಸುದೀಪ್ ಹಾಗೂ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲ.

ರಾಜಕೀಯದ ಬಗ್ಗೆ ಸುದೀಪ್ ಹೇಳಿದ್ದೇನು?
ಕಿಚ್ಚ ಸುದೀಪ್‌ಗೆ ಎಲ್ಲಾ ಪಕ್ಷದಲ್ಲೂ ಸ್ನೇಹಿತರಿದ್ದಾರೆ. ಕೆಲವು ಮುಖಂಡರು ಆಪ್ತರು ಕೂಡ ಹೌದು. ಈ ಹಿಂದೆ ಹಲವು ಬಾರಿ ಬೇರೆ ಬೇರೆ ಪಕ್ಷದ ರಾಜಕೀಯ ಮುಖಂಡರಿಗೆ ಕಿಚ್ಚ ಸುದೀಪ್ ಪ್ರಚಾರ ಕೂಡ ಮಾಡಿದ್ದಾರೆ. ಆ ವೇಳೆ ಕೂಡ ಸುದೀಪ್ ಅವರಿಗೆ ರಾಜಕೀಯಕ್ಕೆ ಬರುತ್ತೀರಾ ಎಂಬ ಪ್ರಶ್ನೆಗಳನ್ನು ಕೇಳಲಾಗಿತ್ತು. ಆಗಲೂ ಸುದೀಪ್ ರಾಜಕೀಯದ ಬಗ್ಗೆ ಆಸಕ್ತಿ ಇಲ್ಲಾ ಅಂತಾನೇ ಹೇಳಿಕೆ ನೀಡಿದ್ದರು. ಹೀಗಾಗಿ ಈ ಬಾರಿ ರಾಜಕೀಯಕ್ಕೆ ಬರುತ್ತಾರಾ? ಅನ್ನೋ ಅನುಮಾನವಿದೆ.

ಸಿನಿಮಾದಲ್ಲಿ ಇನ್ನೂ ಕರಿಯರ್ ಇದೆ
ಸಾಮಾನ್ಯವಾಗಿ ಸಿನಿಮಾಗಳಿಂದ ದೂರ ಉಳಿಯಬೇಕು ಅಂತ ನಿರ್ಧರಿಸಿದಾಗ ರಾಜಕೀಯದ ಕಡೆ ಮುಖ ಮಾಡುತ್ತಾರೆ. ಆದರೆ, ಕಿಚ್ಚ ಸುದೀಪ್‌ಗೆ ಡಿಮ್ಯಾಂಡ್ ಕಮ್ಮಿಯಾಗಿಲ್ಲ. ಇತ್ತೀಚೆಗೆ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸದ್ದು ಮಾಡಿದ್ದಾರೆ. ಆ ಬಳಿಕ ಕಿಚ್ಚನಿಗೆ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲೇ ಆಫರ್‌ಗಳು ಬರುತ್ತಿವೆ. ಈ ಕಾರಣಕ್ಕೆ ಈಗಲೇ ರಾಜಕೀಯ ಪ್ರವೇಶ ಮಾಡೋದು ಬಹುತೇಕ ಅನುಮಾನ.

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಬ್ಯುಸಿ
ಸುದೀಪ್ 'ವಿಕ್ರಾಂತ್ ರೋಣ' ಸಿನಿಮಾ ಬಳಿಕ ಹೊಸ ಸಿನಿಮಾವನ್ನು ಅನೌನ್ಸ್ ಮಾಡಿಲ್ಲ. ಇನ್ನೇನು ಕೆಲವು ದಿನಗಳಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಡಲಿದ್ದಾರೆ ಅನ್ನೋ ಮಾತು ಕೇಳಿಬರುತ್ತಿದೆ. ತಮಿಳಿನ ಪ್ರತಿಷ್ಠಿತ ಸಂಸ್ಥೆಯೊಂದು ಕಿಚ್ಚನ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ ಎನ್ನಲಾಗಿದೆ. ಇಂತಹ ಸಂದರ್ಭದಲ್ಲಿ ಸುದೀಪ್ ರಾಜಕೀಯ ಪ್ರವೇಶ ಮಾಡುತ್ತಾರಾ? ಅನ್ನೋ ಪ್ರಶ್ನೆಯಂತೂ ಸಹಜವಾಗಿಯೇ ಹುಟ್ಟುಕೊಂಡಿದೆ.