ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ಆಯ್ಕೆ ಆದ ನಿರ್ದೇಶಕ ಎಸ್.ನಾರಾಯಣ್

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಚಲನಚಿತ್ರ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ 2017 ನೇ ಕ್ಯಾಲೆಂಡರ್ ವರ್ಷದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಚಿತ್ರರಂಗದ ಸಮಗ್ರ ಬೆಳವಣಿಗೆಗೆ ಅಪೂರ್ವ ಕೊಡುಗೆ ನೀಡಿದ ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಜೀವಿತಾವಧಿ ಸಾಧನೆಗೆ ನೀಡುವ ಡಾ.ರಾಜ್ ಕುಮಾರ್ ಪ್ರಶಸ್ತಿಗೆ ಹಿರಿಯ ಕಲಾವಿದೆ ಶ್ರೀಮತಿ ಲಕ್ಷ್ಮಿ, ಕನ್ನಡ ಚಿತ್ರರಂಗಕ್ಕೆ ಅಪೂರ್ವ ಕೊಡುಗೆ ನೀಡಿದ ನಿರ್ದೇಶಕರಿಗೆ ನೀಡುವ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ಎಸ್.ನಾರಾಯಣ್, ಮತ್ತು ಕನ್ನಡ ಚಲನಚಿತ್ರ ರಂಗದ ವಿವಿಧ ವಲಯಗಳಲ್ಲಿ ಅಪೂರ್ವ ಸಾಧನೆ ಮಾಡಿದ ಹಿರಿಯ ಚೇತನಗಳಿಗೆ ನೀಡುವ ಡಾ.ವಿಷ್ಣುವರ್ಧನ್ ಪ್ರಶಸ್ತಿಗೆ ನಿರ್ಮಾಪಕ ಜಿ.ಎನ್.ಲಕ್ಷ್ಮೀಪತಿ ರವರುಗಳನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಗಳು ತಲಾ 50 ಗ್ರಾಂ ಚಿನ್ನದ ಪದಕ ಹಾಗೂ ರೂ. 2.00 ಲಕ್ಷ ರೂಪಾಯಿ ನಗದು ಬಹುಮಾನ ಒಳಗೊಂಡಿದೆ.

S Narayan selected for Puttanna Kanagal Award

2017 ನೇ ಕ್ಯಾಲೆಂಡರ್ ವರ್ಷದ ಜೀವಮಾನ ಸಾಧನೆ ಪ್ರಶಸ್ತಿ ಆಯ್ಕೆ ಮಾಡಲು ಅಧ್ಯಕ್ಷರನ್ನಾಗಿ ನಟ ಶ್ರೀ ಜೆ.ಕೆ.ಶ್ರೀನಿವಾಸ ಮೂರ್ತಿ ಹಾಗೂ ಛಾಯಾಗ್ರಾಹಕ ಬಿ.ಎಸ್.ಬಸವರಾಜು, ನಟಿ ಹೇಮಾ ಚೌಧರಿ, ಸುರೇಶ್ ಅರಸ್ ಮತ್ತು ಹುಣಸವಾಡಿ ರಾಜನ್ ಸಮಿತಿ ಸದಸ್ಯರುಗಳಾಗಿದ್ದರು.

ಸಮಿತಿಯ ಸದಸ್ಯರು ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ತಮ್ಮ ವರದಿ ಸಲ್ಲಿಸಿದರು.

More from Filmibeat

English summary
S Narayan selected for Puttanna Kanagal Award.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X