'ಸರಿಗಮಪ' ಖ್ಯಾತಿಯ ಗಾಯಕ, ಪೊಲೀಸ್ ಸುಬ್ರಹ್ಮಣ್ಯ ಪತ್ನಿ ಕೊರೊನಾಗೆ ಬಲಿ
ಕನ್ನಡ ಕಿರುತೆರೆಯ ಪ್ರಸಿದ್ಧ ರಿಯಾಲಿಟಿ ಶೋಗಳಲ್ಲಿ ಒಂದಾಗಿರುವ ಸರಿಗಮಪ ಶೋ ಮೂಲಕ ಕನ್ನಡಿಗರ ಮನೆಮಾತಾಗಿದ್ದ ಪೊಲೀಸ್ ಕಾನ್ಸಟೇಬಲ್ ಸುಬ್ರಹ್ಮಣ್ಯ ಪತ್ನಿ ಮಹಾಮಾರಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.
Recommended Video
ಸುಬ್ರಹ್ಮಣ್ಯ ಪತ್ನಿ ಜ್ಯೋತಿ ಅವರಿಗೆ ಕಳೆದ ಒಂದು ವಾರದ ಹಿಂದೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಕಳೆದ ಎರಡು ದಿನಗಳ ಹಿಂದೆ ಉಸಿರಾಟ ಸಮಸ್ಯೆ ತೀವ್ರವಾಗಿದೆ. ಪತ್ನಿಯ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಬೆಂಗಳೂರಿನ ಆಸ್ಪತ್ರೆಗಳನ್ನು ಸುತ್ತಾಡಿದ್ದಾರೆ. ಯಾವುದೇ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಬೆಡ್ ಸಿಗದೆ ಪರದಾಡಿದ್ದಾರೆ.
ಕೊನೆಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಪತ್ನಿಯನ್ನು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಬ್ರಹ್ಮಣ್ಯ ಪತ್ನಿ ನಿನ್ನೆ (ಮೇ 10) ಕೊನೆಯುಸಿರೆಳೆದಿದ್ದಾರೆ.

ಕೋಲಾರ ಮೂಲದವರಾದ ಸುಬ್ರಹ್ಮಣ್ಯ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸರಿಗಮಪ ಶೋನಲ್ಲಿ ಭಾಗಿಯಾಗಿದ್ದ ಸುಬ್ರಹ್ಮಣ್ಯ ಅವರಿಗೆ ದೊಡ್ಡ ಹೆಸರು ತಂದುಕೊಟ್ಟಿತ್ತು. ಪತ್ನಿ ಜ್ಯೋತಿ ಕೂಡ ಒಂದು ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದರು.
ಕೊರೊನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಹಾಡಿನ ಮೂಲಕ ಜಾಗೃತಿ ಮೂಡಿಸುವ ಕೆಲಸ ಸಹ ಮಾಡಿದ್ದರು. ಆದರೀಗ ಕೊರೊನಾ ಮಾಹಾಮಾರಿಯಿಂದ ತನ್ನ ಪತ್ನಿಯನ್ನು ಕಳೆದುಕೊಂಡು ದುಃಖದಲ್ಲಿ ಮುಳುಗಿದ್ದಾರೆ.


Click it and Unblock the Notifications











