Saanya Iyer: ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡಲಿರುವ ಪುಟ್ಟಗೌರಿ ಮದುವೆಯ ಸಾನ್ಯಾ ಅಯ್ಯರ್

ಕಲರ್ಸ್ ಕನ್ನಡದ ಪುಟ್ಟಗೌರಿ ಮದುವೆ ಧಾರಾವಾಹಿ ಮೂಲಕ ಎಲ್ಲರ ಮನಗೆದ್ದಿದ್ದ ಪುಟ್ಟ ಬಾಲೆ ಸಾನ್ಯಾ ಅಯ್ಯರ್ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ. ಚೊಚ್ಚಲ ಸಿನಿಮಾದಲ್ಲಿಯೇ ನಾಯಕಿಯಾಗಿ ಆಯ್ಕೆಯಾಗಿದ್ದು, ಕಿರುತೆರೆಯಿಂದ ಬೆಳ್ಳಿತೆರೆಗೆ ಬಡ್ತಿ ಪಡೆಯುತ್ತಿದ್ದಾರೆ.

ಇಂದ್ರಜಿತ್ ಲಂಕೇಶ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಸಾನ್ಯಾ ಅಯ್ಯರ್ ನಾಯಕಿಯಾಗಲಿದ್ದಾರೆ. ಇಂದ್ರಜಿತ್ ಲಂಕೇಶ್ ತಮ್ಮ ಮಗ ಸಮರ್ಜಿತ್‌ನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದು, ಇದಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಸಮರ್ಜಿತ್ ಲಂಕೇಶ್ ಎದುರು ನಾಯಕಯಾಗಿ ನಮ್ಮ ಪುಟ್ಟಗೌರಿ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಬಾಕಿಯಿದೆ.

saanya-iyer-to-mark-debut-in-kannada

ಪುಟ್ಟಗೌರಿ ಮದುವೆ ಎಂಬ ಕಿರುತೆರೆ ಧಾರಾವಾಹಿಯಲ್ಲಿ ಬಾಲ ಕಲಾವಿದೆಯಾಗಿ ಗುರುತಿಸಿಕೊಂಡಿದ್ದ ಈ ನಟಿ ನಂತರ ವಿವಿಧ ರಂಗಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಪುಟ್ಟಗೌರಿ ನಂತರ ಕಾಣೆಯಾಗಿದ್ದ ನಟಿ ಕನ್ನಡದ ಬಿಗ್ ಬಾಸ್ ಒಟಿಟಿಯಲ್ಲಿ ಕಾಣಿಸಿಕೊಂಡಿದ್ದರು. ಇಲ್ಲಿಂದ ಅವರು ಬಿಗ್ ಬಾಸ್ ಸೀಸನ್ 9ರಲ್ಲಿ ಜನಪ್ರಿಯ ಸ್ಪರ್ಧಿಯಾಗಿದ್ದರು. ಇದಾದ ನಂತರ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದರು.

ಚಿತ್ರೋದ್ಯಮಕ್ಕೆ ಸಾನ್ಯಾ ಅಯ್ಯರ್ ಅವರ ಎಂಟ್ರಿ ಬಗ್ಗೆ ಈಗಾಗಲೇ ನಿರೀಕ್ಷೆಗಳು ಹೆಚ್ಚುವೆ. ಇದಕ್ಕೆ ತಕ್ಕಂತೆ ನಾಯಕಿಯಾಗಿಯೇ ಸಿನಿರಂಗದ ಪ್ರಯಾಣ ಪ್ರಾರಂಭಿಸಲಿದ್ದಾರೆ. ಅವರ ಫೋಟೋ ಶೂಟ್‌ಗಳು ಇದಕ್ಕೆ ಸಾಕ್ಷಿಯಾಗಿವೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ಸೆಪ್ಟೆಂಬರ್ 4 ರಂದು ಅಧಿಕೃತವಾಗಿ ಹಂಚಿಕೊಳ್ಳಲಾಗುತ್ತದೆ.

ಸಮರ್ಜಿತ್ ಲಂಕೇಶ್

ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ತಮ್ಮದೆ ಆದ ‍ಛಾಪು ಮೂಡಿಸಿರುವ ಹೆಸರಾಂತ ಸಾಹಿತಿ ಪಿ. ಲಂಕೇಶ್ ಅವರ ಮೊಮ್ಮಗ ಸಮರ್ಜಿತ್ ಲಂಕೇಶ್ ಚಂದನವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರರಾಗಿರುವ ಸಮರ್ಜಿತ್ ಲಂಕೇಶ್ ನಟನಾಗಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ, ನಟನೆ, ಸಾಹಸ ಮತ್ತು ನೃತ್ಯದಲ್ಲಿ ತರಬೇತಿ ಪಡೆದಿದ್ದಾರೆ. ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ ತರಬೇತಿ ಪಡೆದಿರುವ ಅವರು ಹಲವು ಜಾಹೀರಾತುಗಳ ಮೂಲಕ ನಟನಾ ಅನುಭವ ಪಡೆದಿದ್ದಾರೆ.

saanya-iyer-to-mark-debut-in-kannada

ಸಮರ್ಜಿತ್ ಲಂಕೇಶ್ ಅವರ ಚೊಚ್ಚಲ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ಆಕ್ಷನ್ ಕಟ್ ಹೇಳಲಿದ್ದಾರೆ. ಹೆಸರಿಡದ ಈ ಸಿನಿಮಾ ಸೆಪ್ಟೆಂಬರ್ 4 ರಂದು ಪ್ರಾರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಮೊದಲ ಚಿತ್ರದಲ್ಲಿಯೇ ನೈಜ್ಯ ಘಟನೆಗಳನ್ನುಟ್ಟುಕೊಂಡು ಸಿನಿಮಾ ಮಾಡಲು ಸಿದ್ಧರಾಗಿದ್ದಾರೆ. ಸಿನಿಮಾ ಲಾಂಚ್ ಆಗುವ ದಿನಾಂಕ ಹತ್ತಿರ ಬಂದಂತೆ ಚಿತ್ರದ ಕುರಿತು ಹೆಚ್ಚಿನ ವಿವರಗಳು ಹೊರಬರುವ ನಿರೀಕ್ಷೆಯಿದೆ.

ಇಂದ್ರಜಿತ್ ಲಂಕೇಶ್ ಕನ್ನಡ ಚಿತ್ರರಂಗದಲ್ಲಿ ಬರಹಗಾರ, ನಿರ್ದೇಶಕ, ನಿರ್ಮಾಪಕ ಮತ್ತು ನಟರಾಗಿಯೂ ಕೆಲಸ ಮಾಡಿದ್ದಾರೆ. ತುಂಟಾಟ (2002), ಲಂಕೇಶ್ ಪತ್ರಿಕೆ (2003), ಮೊನಾಲಿಸಾ (2004), ಐಶ್ವರ್ಯ (2006), ಮತ್ತು ಲವ್ ಯು ಆಲಿಯಾ (2020) ಮುಂತಾದ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಇತ್ತೀಚಿಗೆ ರಿಚಾ ಚಡ್ಡಾ ಅವರ ಜೊತೆಗೆ ಬಾಲಿವುಡ್‌ನಲ್ಲಿ ನಟಿ ಶಕೀಲಾ ಅವರ ಜೀವನಾಧಾರಿತ ಶಕೀಲಾ (2020) ಸಿನಿಮಾವನ್ನು ಮಾಡಿದ್ದರು.

More from Filmibeat

English summary
Saanya Iyer to mark debut in Kannada along with Samarjit Lankesh.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X