ಬೆಂಗಳೂರಿನಲ್ಲಿ 'ಸಲಾರ್' ಅಡ್ವಾನ್ಸ್ ಬುಕ್ಕಿಂಗ್ ಹೇಗಿದೆ? ಕನ್ನಡಕ್ಕೆ ಎಷ್ಟು ಶೋ ಸಿಕ್ಕಿದೆ?

ಪ್ರಭಾಸ್ ನಟನೆಯ 'ಸಲಾರ್' ಸಿನಿಮಾ ಮುಂದಿನ ಶುಕ್ರವಾರ ತೆರೆಗಪ್ಪಳಿಸಿದೆ. ಜ್ಯೋತಿಷ್ಯದ ಆಧಾರದ ಮೇಲೆ ನಿರ್ಮಾಪಕರು ಸಿನಿಮಾ ರಿಲೀಸ್ ದಿನಾಂಕ ನಿಗದಿಪಡಿಸಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಹಳ ದೊಡ್ಡದಾಗಿ ಪ್ರೇಕ್ಷಕರ ಮುಂದೆ ಬರಲಿದೆ. ಈಗಾಗಲೇ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು ಸಖತ್ ರೆಸ್ಪಾನ್ಸ್ ಸಿಕ್ತಿದೆ.

ಕಳೆದ 3 ವರ್ಷಗಳಿಂದ 'ಸಲಾರ್' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಕಳೆದ ವರ್ಷ ಏಪ್ರಿಲ್ 14ಕ್ಕೆ ಬರಬೇಕಿದ್ದ ಸಿನಿಮಾ ಈ ವರ್ಷ ಸೆಪ್ಟೆಂಬರ್ 28ಕ್ಕೆ ಪೋಸ್ಟ್ ಪೋನ್ ಆಗಿತ್ತು. ಕೊನೆಗೆ ಮತ್ತೆ ಮೂರು ತಿಂಗಳು ಸಿನಿಮಾ ರಿಲೀಸ್ ಮುಂದೂಡಲಾಗಿತ್ತು. ಅಂತೂ ಇಂತೂ ಇದೇ 22ಕ್ಕೆ ಸಿನಿಮಾ ತೆರೆಗಪ್ಪಳಿಸುವುದು ಪಕ್ಕಾ ಆಗಿದೆ. ಸತತ ಸೋಲುಗಳಿಂದ ಕಂಗೆಟ್ಟಿರುವ ಪ್ರಭಾಸ್ ಕೂಡ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Salaar bengaluru Advance Booking Report, kannada and telugu shows count

'KGF' ಸರಣಿ ಸಿನಿಮಾಗಳನ್ನು ನೋಡಿದ ಪ್ರೇಕ್ಷಕರು 'ಸಲಾರ್' ಚಿತ್ರದಲ್ಲಿ ಪ್ರಶಾಂತ್‌ ನೀಲ್ ಟೇಕಿಂಗ್, ಪ್ರಭಾಸ್ ಆರ್ಭಟ ನೋಡೊಕೆ ತುದಿಗಾಲಲ್ಲಿ ನಿಂತಿದ್ದಾರೆ. ಈಗಾಗಲೇ ಆಯ್ದ ಥಿಯೇಟರ್‌ಗಳಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಶುರುವಾಗಿದೆ. ಬೆಳಗ್ಗೆ 5 ಗಂಟೆಗೆ ಹಲವೆಡೆ ಸಿನಿಮಾ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ.

ಬೆಂಗಳೂರಿನಲ್ಲಿ 25ಕ್ಕೂ ಅಧಿಕ ಥಿಯೇಟರ್‌ಗಳಲ್ಲಿ ಬುಕ್ಕಿಂಗ್ ಶುರುವಾಗಿದೆ. ನಗರದ ಬೃಂದಾ, ಕಾವೇರಿ, ಸಿದ್ದೇಶ್ವರ, ಶ್ರೀನಿವಾಸ, ವೀರೇಶ್, ಮುಕುಂದ ಸೇರಿದಂತೆ ಹಲವು ಸಿಂಗಲ್ ಸ್ಕ್ರೀನ್‌ ಥಿಯೇಟರ್‌ಗಳಲ್ಲಿ ಬೆಳಗ್ಗೆ 5 ಗಂಟೆಗೆ 'ಸಲಾರ್' ದರ್ಬಾರ್ ಶುರುವಾಗಲಿದೆ. ಹಲವು ಕಡೆಗಳಲ್ಲಿ ಅರ್ಲಿ ಮಾರ್ನಿಂಗ್ ಶೋ ಟಿಕೆಟ್ಸ್ ಸೋಲ್ಡ್‌ಔಟ್ ಆಗಿದೆ. ಕೆಲ ಶೋಗಳ ಫಾಸ್ಟ್ ಫಿಲ್ಲಿಂಗ್ ಇದೆ. ನಿಧಾನವಾಗಿ ಮತ್ತಷ್ಟು ಥಿಯೇಟರ್ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಬುಕ್ಕಿಂಗ್ ಆರಂಭವಾಗಲಿದೆ.

'ಸಲಾರ್‌' ಹೊಂಬಾಳೆ ಸಂಸ್ಥೆ ಸಿನಿಮಾ. ಪ್ರಶಾಂತ್ ನೀಲ್ ನಿರ್ದೇಶಕ. ಹಾಗಾಗಿ ಕರ್ನಾಟಕದಲ್ಲಿ ಕನ್ನಡ ವರ್ಷನ್‌ಗೆ ಹೆಚ್ಚು ಶೋಗಳು ಸಿಗುವ ನಿರೀಕ್ಷೆಯಿದೆ. ಸದ್ಯ ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ತೆಲುಗು ಶೋಗಳನ್ನು ಕೊಡಲಾಗಿದೆ. ಆದರೆ 2 ಕನ್ನಡ ಶೋಗಳ ಬುಕ್ಕಿಂಗ್ ಮಾತ್ರ ಓಪನ್ ಆಗಿದೆ. ಸಾಕಷ್ಟು ಜನ ಕನ್ನಡದಲ್ಲೇ ಚಿತ್ರವನ್ನು ನೋಡಲು ಕಾಯುತ್ತಿದ್ಧಾರೆ. ಈಗಾಗಲೇ ಬೆಂಗಳೂರಿನಲ್ಲೇ 15 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿರುವ ಅಂದಾಜಿದೆ.

Salaar bengaluru Advance Booking Report, kannada and telugu shows count

ಕನ್ನಡ ವರ್ಷನ್‌ನಲ್ಲಿ ಪ್ರಭಾಸ್ ಪಾತ್ರಕ್ಕೆ ವಸಿಷ್ಠ ಸಿಂಹ ಡಬ್ ಮಾಡಿದ್ದಾರೆ. ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ತಮ್ಮ ತಮ್ಮ ಪಾತ್ರಗಳಿಗೆ ತಾವೇ ಡಬ್ ಮಾಡಿದ್ದಾರೆ. ಕನ್ನಡದಲ್ಲಿ ಡಬ್ಬಿಂಗ್ ಗುಣಮಟ್ಟ ಚೆನ್ನಾಗಿರುವಂತೆ ಚಿತ್ರತಂಡ ನೋಡಿಕೊಂಡಿದೆ. ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಕನ್ನಡಕ್ಕೆ ಡಬ್ ಮಾಡಿದರೂ ಸರಿಯಾಗಿ ಶೋಗಳು ಕೊಡಲ್ಲ ಎನ್ನುವ ಆರೋಪ ಕೇಳಿಬರುತ್ತಲೇ ಇದೆ. ಆದರೆ ಹೊಂಬಾಳೆ ಸಂಸ್ಥೆಯೇ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುತ್ತಿರುವುದರಿಂದ ದೊಡ್ಡಮಟ್ಟದಲ್ಲಿ ಕನ್ನಡ ಶೋಗಳನ್ನು ನಿರೀಕ್ಷೆ ಮಾಡಲಾಗುತ್ತಿದೆ.

ಅಂದಾಜು 200 ಕೋಟಿ ರೂ. ಬಜೆಟ್‌ನಲ್ಲಿ 'ಸಲಾರ್' ಸಿನಿಮಾ ನಿರ್ಮಾಣವಾಗಿದೆ. ಚಿತ್ರತಂಡವೇ ಹೇಳುವಂತೆ 'KGF'ಗೀಮತ ಐದು ಪಟ್ಟು ದೊಡ್ಡದಾಗಿ ಚಿತ್ರವನ್ನು ಕಟ್ಟಿಕೊಡುವ ಪ್ರಯತ್ನ ನಡೆದಿದೆ. ಚಿತ್ರದಲ್ಲಿ ದೇವ ಹಾಗೂ ವರದರಾಜ್ ಮನ್ನಾರ್ ಎನ್ನುವ ಇಬ್ಬರೂ ಸ್ನೇಹಿತರ ಕಥೆಯನ್ನು ಪ್ರಶಾಂತ್ ನೀಲ್ ಹೇಳಲಿದ್ದಾರೆ.

ಜಗಪತಿ ಬಾಬು, ಗರುಡ ರಾಮ್, ಈಶ್ವರಿ ರಾವ್, ಪ್ರಮೋದ್, ನವೀನ್ ಶಂಕರ್, ದೇವರಾಜ್ ಸೇರಿದಂತೆ ದೊಡ್ಡ ತಾರಾಗಣ 'ಸಲಾರ್' ಚಿತ್ರದಲ್ಲಿದೆ. ರವಿ ಬಸ್ರೂರು ಸಂಗೀತ, ಭುವನ್ ಗೌಡ ಛಾಯಾಗ್ರಹಣ ಚಿತ್ರಕ್ಕಿದೆ. ಕರ್ನಾಟಕ ಮಾತ್ರವಲ್ಲದೇ ಹೊಸ ರಾಜ್ಯಗಳಲ್ಲಿ ಹೊರ ದೇಶಗಳಲ್ಲೂ 'ಸಲಾರ್' ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದೆ.

More from Filmibeat

English summary
Salaar advance booking opened in Bengaluru and response is very good;
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X