For Quick Alerts
  ALLOW NOTIFICATIONS  
  For Daily Alerts

  ಮೇಘನಾರಾಜ್ ಅರಸಿ ಬಂದ ಅಂತರಾಷ್ಟ್ರೀಯ ಪ್ರಶಸ್ತಿ

  By ಫಿಲ್ಮಿಬೀಟ್ ಡೆಸ್ಕ್
  |

  ಸಿನಿಮಾಗಳಲ್ಲಿ, ಕಿರುತೆರೆ ರಿಯಾಲಿಟಿ ಶೋಗಳ ಮೂಲಕ ನಟಿ ಮೇಘನಾ ರಾಜ್ ಮತ್ತೆ ಮನೊರಂಜನಾ ಕ್ಷೇತ್ರಕ್ಕೆ ಎಂಟ್ರಿ ಪಡೆದಿದ್ದಾರೆ.

  ಸಂಕಷ್ಟದ ದಿನಗಳ ದಾಟಿ ಮುಂದೆ ಸಾಗುತ್ತಿರುವ ಮೇಘನಾ ರಾಜ್‌ಗೆ ಖುಷಿಯ ಸಂಗತಿಯೊಂದು ಎದುರಾಗಿದೆ. ಮೇಘನಾ ಅವರನ್ನು ಅಂತರಾಷ್ಟ್ರೀಯ ಪ್ರಶಸ್ತಿಯೊಂದು ಅರಸಿ ಬಂದಿದೆ. ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ "FOG HERO" ಅವಾರ್ಡ್ ದೊರಕಿದೆ.

  ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ "ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ" ಇವರು ಆಯೋಜಿಸುವ "ಫೆಸ್ಟಿವಲ್ ಆಫ್ ಗ್ಲೋಬ್"(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಈ ಬಾರಿ ಆಗಸ್ಟ್‌ 19, 20 ಹಾಗೂ 21 ರಂದು ಈ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭಕ್ಕೆ ಅಲ್ಲಿ ನೆಲೆಸಿರುವ ಭಾರತೀಯರು, ಸ್ಥಳೀಯರು ಸೇರಿದಂತೆ ಲಕ್ಷಕ್ಕೂ ಅಧಿಕ ಜನ‌ರು ಬರುವ ನಿರೀಕ್ಷೆಯಿದೆ. ಅಲ್ಲಿನ ರಾಜಕೀಯ ಪ್ರಮುಖರು, ಗಣ್ಯರು ಸಹ ಸಮಾರಂಭಕ್ಕೆ ಆಗಮಿಸುತ್ತಾರೆ. ಪ್ರತಿವರ್ಷ ಭಾರತದ ಸ್ವಾತಂತ್ರ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸುವ ಸಲುವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಆಗಸ್ಟ್ 15ರ ಆಸುಪಾಸಿನ ದಿನಗಳಲ್ಲಿ ಈ ಹಬ್ಬ ಸಡಗರದಿಂದ ನಡೆಯಲಿದೆ. ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಅಲ್ಲಿ ನಡೆಯುತ್ತದೆ.

  ಕೊರೊನಾ ಕಾರಣದಿಂದ ಕಳೆದ ಎರಡು ವರ್ಷ ಈ ಸಮಾರಂಭವನ್ನು ಆಯೋಜಿಸಿರಲಿಲ್ಲ. ಈ ಬಾರಿ ಮತ್ತೆ ಮೊದಲಿಂತೆ ಅದ್ದೂರಿಯಾಗಿ ಈ ಹಬ್ಬವನ್ನು ಆಯೋಜಿಸಲಾಗಿದೆ.

  ಪ್ರತಿವರ್ಷ ಈ ಸಂದರ್ಭದಲ್ಲಿ ಭಾರತದಲ್ಲಿ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ "FOG HERO" ಅವಾರ್ಡ್" ನೀಡಲಾಗುತ್ತದೆ. ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಬಾರಿ ದಕ್ಷಿಣ ಭಾರತದ ಖ್ಯಾತ ನಟಿ ಮೇಘನರಾಜ್ "F0G HERO" ಅವಾರ್ಡ್ ಗೆ ಭಾಜನರಾಗಿದ್ದಾರೆ ಎಂದು ಕಾರ್ಯಕ್ರಮದ ಬಗ್ಗೆ ಹಾಗೂ ಪ್ರಶಸ್ತಿ ಪ್ರದಾನದ ಕುರಿತು

  ಸಂಸ್ಥೆಯ ಕ್ರಿಸ್ ಮೂರ್ತಿ ಮಾಹಿತಿ ನೀಡಿದರು.

  Recommended Video

  BigBoss OTT Kannada | ಇಷ್ಟು ದಿನ ಆದ್ರು ಈ ಪ್ರಶ್ನೆ ಯಾರು ಕೇಳಿರ್ಲಿಲ್ಲ. | Kiccha Sudeep

  ಅಮಿತಾಭ್‌ ಬಚ್ಚನ್‌, ಧರ್ಮೇಂದ್ರ ಮುಂತಾದ ಗಣ್ಯರು ಪಡೆದಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾನು ಭಾಜನಳಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಅಂತಹ ಮಹಾನ್ ನಟರಿಗೆ ಸಂದಿರುವ ಪ್ರಶಸ್ತಿಗೆ ಈ ಬಾರಿ ನಾನು ಆಯ್ಕೆಯಾಗಿರುವುದು ನನ್ನ ಪುಣ್ಯ. ನನ್ನ ತಂದೆಯ ಮೂಲಕ ಈ ವಿಷಯ ನನಗೆ ತಿಳಿಯಿತು. ಆಗಸ್ಟ್21 ರಂದು ನಡೆಯುವ ಅದ್ದೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಹೆಚ್ಚಿನ ಖುಷಿಯಾಗಿದೆ ಎಂದು ನಟಿ ಮೇಘನರಾಜ್ ಹೇಳಿದ್ದಾರೆ.

  English summary
  Sandalwood actress Meghana Raj awarded Fog Hero. The award will be given on August 19,20,21 in California.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X