Don't Miss!
- News
ಬೆಂಗಳೂರು: ಬಸವೇಶ್ವರನಗರ ಜಂಕ್ಷನ್ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ:CM
- Sports
Ind vs NZ 3rd T20: ಸರಣಿ ಗೆಲ್ಲುವ ಉತ್ಸಾಹದಲ್ಲಿ ಟೀಂ ಇಂಡಿಯಾ: ಪಿಚ್ ವರದಿ ನೋಡಿ ತಂಡದಲ್ಲಿ ಬದಲಾವಣೆ
- Technology
ಸ್ಯಾಮ್ಸಂಗ್ನ ಈ ಹೊಸ ಡಿವೈಸ್ ನೋಡಿದ್ರೆ ನಿಮಗೆ ಏನನ್ನಿಸುತ್ತೆ? ಇದೇನು ಸಾಬೂನಾ?
- Lifestyle
ಒಂಟಿಯಾಗಿ ಅಂಟಾರ್ಟಿಕಾ ಯಾತ್ರೆ ಮಾಡಿದ ಮೊದಲ ಮಹಿಳೆ: ಕ್ಯಾಪ್ಟನ್ ಪ್ರೀತ್ ಚಾಂದಿ, ಇವರ ಸ್ಟೋರಿಯೇ ಸ್ಪೂರ್ತಿದಾಯಕ
- Finance
Budget 2023 Expectations: ಸಾಮಾನ್ಯ ಜನರ ಬಜೆಟ್ ನಿರೀಕ್ಷೆಗಳೇನು?
- Automobiles
ಶೀಘ್ರವೇ ಕಡಿಮೆ ಬೆಲೆಯಲ್ಲಿ ಸಿಗಲಿದೆ ಮಾರುತಿ ಸುಜುಕಿ ಆಲ್ಟೊ ಕೆ10 ಎಕ್ಸ್ಟ್ರಾ ಎಡಿಷನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಖಾಸಗಿ ಪುಟಗಳು' ನೋಡಿ ಥ್ರಿಲ್ ಆದ ಸ್ಯಾಂಡಲ್‌ವುಡ್ ಸೆಲೆಬ್ರೆಟಿಗಳು
ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಸಿನಿಮಾಗಳು ರಿಲೀಸ್ ಆಗುತ್ತಲೇ ಇವೆ. ಈ ವರ್ಷವಂತೂ ಕನ್ನಡ ಸಿನಿಮಾಗಳು ಇಡೀ ದೇಶವೇ ಮೆಚ್ಚುವಂತೆ ಮಾಡಿದೆ. ಅದರಂತೆ ಹೊಸ ಸಿನಿಮಾಗಳು ಕೂಡ ಒಳ್ಳೊಳ್ಳೆ ಕಂಟೆಂಟ್ ಹಿಡಿದು ಬರುತ್ತಿವೆ.
ಹೀಗೆ ಕಂಟೆಂಟ್ ಹಿಡಿದು ಬರುತ್ತಿರುವ ಹೊಸಬರ ಸಿನಿಮಾಗಳ ಸಾಲಿನಲ್ಲಿ ಸ್ಯಾಂಡಲ್‌ವುಡ್‌ನ ಮತ್ತೊಂದು ಸಿನಿಮಾ ಸೇರಿಕೊಂಡಿದೆ. ಅದುವೇ 'ಖಾಸಗಿ ಪುಟಗಳು'. ಈಗಾಗಲೇ ಈ ಸಿನಿಮಾ ರಿಲೀಸ್ ಆಗಿದ್ದು ಪ್ರೇಕ್ಷಕರಿಗೆ ಕಿಕ್ ಕೊಟ್ಟಿದೆ.
'ಪರ್ಫೆಕ್ಟ್
ಗರ್ಲ್'
ಅದಿತಿ
ಪ್ರಭುದೇವ
ಮದುವೆಯ
ಅಲ್ಬಮ್:
ಹಸೆಮಣೆಯಲ್ಲೇ
ಮುತ್ತಿಟ್ಟ
ಪತಿ!
'ಖಾಸಗಿ ಪುಟಗಳು' ಸಿನಿಮಾವನ್ನು ಸಂತೋಷ್ ಶ್ರೀಕಂಠಪ್ಪ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ನವೆಂಬರ್ 18ರಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಈ ಸಿನಿಮಾದ ಟ್ರೈಲರ್ ಹಾಗೂ ಹಾಡುಗಳು ಪ್ರೇಕ್ಷಕರಿಗೆ ಇಷ್ಟ ಆಗಿತ್ತು. ಇನ್ನೂ ಈ ಸಿನಿಮಾ ಚಿತ್ರಮಂದಿರದಲ್ಲೂ ಪ್ರೇಕ್ಷಕರು ಮೆಚ್ಚುವಂತೆ ಮಾಡಿದೆ. ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಗಿಟ್ಟಿಸಿಕೊಂಡ ಈ ಸಿನಿಮಾ ಎರಡನೇ ವಾರ ಪ್ರದರ್ಶನ ಕಾಣುತ್ತಿದೆ.
'ಖಾಸಗಿ ಪುಟಗಳು' ಸಿನಿಮಾ ಕಂಟೆಂಟ್ ಬೇಸ್ಡ್ ಸಿನಿಮಾ. ನವೀರಾದ ಪ್ರೇಮಕಥೆಯುಳ್ಳ ಸಿನಿಮಾದ ದೃಶ್ಯಗಳು ಹಾಗೂ ಹಾಡುಗಳು ಹೈಲೈಟ್. ಈಗಾಗಲೇ ಈ ಸಿನಿಮಾದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯವೂ ಕೂಡ ಪ್ರೇಕ್ಷಕರಿಗೆ ಇಷ್ಟ ಆಗಿದೆ. ಹೀಗಾಗಿ ಈ ಸಿನಿಮಾ ಬಗ್ಗೆ ಪ್ರೇಕ್ಷಕರು ಹಾಗೂ ಸ್ಯಾಂಡಲ್‌ವುಡ್ ಸೆಲೆಬ್ರೆಟಿಗಳು ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸ್ಯಾಂಡಲ್‌ವುಡ್‌ನ ನಿರ್ದೇಶಕರಾದ ಜಯತೀರ್ಥ, ಬಿ.ಎಂ.ಗಿರಿರಾಜ್, ಗುರುದೇಶ್ ಪಾಂಡೆ, ಸುಜಯ್ ಶಾಸ್ತ್ರಿ, ಶಂಕರ್ ಗುರು ಸೇರಿದಂತೆ ಹಲವರು ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಹಾಗೇ 'ಕೆಜಿಎಫ್' ಖ್ಯಾತಿಯ ಅರ್ಚನಾ ಜೋಯಿಸ್, ಅರ್ಚನಾ ಕೊಟ್ಟಿಗೆ, ಶ್ರೀ ಮಹಾದೇವ್, ಚೈತ್ರಾ ಕೊಟ್ಟೂರ್, ಬ್ರೋ ಗೌಡ ಸೇರಿದಂತೆ ಹಲವು ನಟ-ನಟಿಯರು 'ಖಾಸಗಿ ಪುಟಗಳು' ವೀಕ್ಷಿಸಿ ಸೋಶಿಯಲ್ ಮೀಡಿಯಾಗಳಲ್ಲಿ ಸಿನಿಮಾ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
'ಖಾಸಗಿ ಪುಟಗಳು' ಸಿನಿಮಾದಲ್ಲಿ ಕಾಲೇಜು ಹುಡುಗನ್ನೊಬ್ಬನ ನವೀರಾದ ಪ್ರೇಮಕಥೆ ಹೊತ್ತ ಸಿನಿಮಾವಿದು. ಚಿತ್ರದಲ್ಲಿ ವಿಶ್ವ ನಾಯಕನಾಗಿ, ಶ್ವೇತಾ ಡಿಸೋಜ ನಾಯಕಿಯಾಗಿ ನಟಿಸಿದ್ದಾರೆ. ಇವರೂ ಕೂಡ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದ್ದಾರೆ. ಸದ್ಯ ಈ ಸಿನಿಮಾ ಎರಡನೇ ವಾರಕ್ಕೆ ಕಾಲಿಟ್ಟಿದೆ.

ಚೇತನ್ ದುರ್ಗಾ, ನಂದಕುಮಾರ್, ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್ ಒಳಗೊಂಡ ತಂಡ ಈ ಚಿತ್ರದಲ್ಲಿದೆ. ಮಂಜು ವಿ ರಾಜ್, ವೀಣಾ ವಿ ರಾಜ್, ಮಂಜುನಾಥ್ ಡಿ ಎಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಾಸುಕಿ ವೈಭವ್ ಸಂಗೀತ ನಿರ್ದೇಶನವಿದೆ. ವಿಶ್ವಜಿತ್ ರಾವ್ ಛಾಯಾಗ್ರಹಣ, ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಆಶಿಕ್ ಕುಸುಗೋಳಿ ಸಂಕಲನ ಚಿತ್ರಕ್ಕಿದೆ.