Breaking: ಕನ್ನಡದ ಜನಪ್ರಿಯ ಹಾಸ್ಯನಟ ಮೋಹನ್ ನಿಧನ

ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯನಟ ಮೋಹನ್ ಜುನೇಜ ನಿಧನ ಹೊಂದಿದ್ದಾರೆ. ಜುನೇಜ ಅವರು ಕೆಲಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಮೋಹನ್ ಜುನೇಜ ಅವರು ಕನ್ನಡದ ಹಲವಾರು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಹಾಸ್ಯನಟ ಹಾಗೂ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. 'ಕೆಜಿಎಫ್' ಸಿನಿಮಾ ಸರಣಿಯಲ್ಲಿಯೂ ಮೋಹನ್ ಜುನೇಜ ನಟಿಸಿದ್ದಾರೆ.

'ವಠಾರ' ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಮೋಹನ್ ನಟಿಸಿದ್ದರು. ಕಿರುತೆರೆ ಮೂಲಕ ಬೆಳಕಿಗೆ ಬಂದ ಮೋಹನ್ ಆ ನಂತರ ಹಲವಾರು ಸಿನಿಮಾಗಳಲ್ಲಿ ನಟಿಸಿದರು.

ಬೆಂಗಳೂರು ಉತ್ತರ ತಾಲ್ಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದ ಮೋಹನ್ ಜುನೇಜ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾದ ಕಾರಣ ಅವರನ್ನು ಹೆಸರಘಟ್ಟದ ಸಪ್ತಗಿರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಕೊನೆ ಉಸಿರೆಳೆದಿದ್ದಾರೆ.

ಮೋಹನ್ ನಿಧನಕ್ಕೆ ಸಿನಿಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ.

Sandalwood Comedy Actor Mohan Juneja Died

More from Filmibeat

English summary
Sandalwood comedy actor Mohan Juneja Died. He acted in many Kannada movies including KGF.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X