ನಟಿ ರಾಗಿಣಿ ಜಾಮೀನು ಅರ್ಜಿ ಮತ್ತೆ ಮೂರು ದಿನ ಮುಂದಕ್ಕೆ
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮೂರು ದಿನಗಳ ಕಾಲ ಮುಂದೂಡಿಕೆಯಾಗಿದೆ. ಇಂದು ವಿಚಾರಣೆ ನಡೆಸಿದ ಬೆಂಗಳೂರಿನ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯ ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.
ನಟಿ ರಾಗಿಣಿ ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾರೆ. ಸೆಪ್ಟೆಂಬರ್ 14ರಂದು ರಾಗಿಣಿಯನ್ನು 1ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿತ್ತು.

ರಾಗಿಣಿ ಬಂಧನ ಆಗಿದ್ದು ಯಾವಾಗ?
ಸೆಪ್ಟೆಂಬರ್ 4 ರಂದು ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ನಟಿಯನ್ನು ವಶಕ್ಕೆ ಪಡೆದುಕೊಂಡರು. ಸೆಪ್ಟೆಂಬರ್ 14ರಂದು ರಾಗಿಣಿಯನ್ನು 1ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿತ್ತು.
English summary
Sandalwood Drug Case :Actress Ragini Dwivedi Bail Plea Adjourned Till September 19.


Click it and Unblock the Notifications