For Quick Alerts
  ALLOW NOTIFICATIONS  
  For Daily Alerts

  ಡ್ರಗ್ಸ್ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ನಿರ್ಮಾಪಕ ಸೌಂದರ್ಯ ಜಗದೀಶ್

  By ಫಿಲ್ಮ್ ಡೆಸ್ಕ್
  |

  ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯ ಪ್ರಕರಣದಲ್ಲಿ ನಿರ್ಮಾಪಕ ಸೌಂದರ್ಯ ಜಗದೀಶ್ ಅವರನ್ನು ಸಿಸಿಬಿ ವಿಚಾರಣೆಗೆ ಒಳಪಡಿಸಿದೆ. ಇದೇ ಮೊದಲ ಬಾರಿಗೆ ನಿರ್ಮಾಪಕರೊಬ್ಬರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

  ನಿರ್ಮಾಪಕ ಸೌಂದರ್ಯ ಜಗದೀಶ್ ಅವರಿಗೆ ಸಿ ಸಿ ಬಿ ನಿನ್ನೆ(ಅ.20) ನೋಟಿಸ್ ನೀಡಿತ್ತು ಎಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಇಂದು ಸೌಂದರ್ಯ ಜಗದೀಶ್ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಜಗದೀಶ್ ಅವರು ಬೆಂಗಳೂರಿನ ಒರಾಯನ್ ಮಾಲ್ ಬಳಿ ಪಬ್ ಒಂದನ್ನು ಹೊಂದಿದ್ದಾರಂತೆ.

  ನಿರ್ಮಾಪಕ ಸೌಂದರ್ಯ ಜಗದೀಶ್ ಸ್ಯಾಂಡಲ್ ವುಡ್ ನಲ್ಲಿ ಸುದೀಪ್ ಅಭಿನಯದ ಮಸ್ತ್ ಮಜಾ ಮಾಡಿ, ಅಪ್ಪು-ಪಪ್ಪು, ರಾಮ್ ಲೀಲಾ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.

  ಡ್ರಗ್ಸ್ ಪ್ರಕರಣ ಸಂಬಂಧ ಈಗಾಗಲೇ ಸಾಕಷ್ಟು ಮಂದಿಯನ್ನು ವಿಚಾರಣೆ ಮಾಡಲಾಗಿದೆ. ಸ್ಯಾಂಡಲ್ ವುಡ್ ಮತ್ತು ಕಿರುತೆರೆಯ ಅನೇಕ ಕಲಾವಿದರನ್ನು ಸಿಸಿಬಿ ವಿಚಾರಣೆಗೆ ಒಳಪಡಿಸಿದೆ. ಇದೀಗ ಡ್ರಗ್ಸ್ ಪ್ರಕರಣ ಸಂಬಂಧ ಬಿಗ್ ಬಾಸ್ ಸ್ಪರ್ಧಿ ಮತ್ತು ಡ್ಯಾನ್ಸರ್ ಆಡಂ ಪಾಷಾ ಅವರನ್ನು ಬಂಧಿಸಲಾಗಿದೆ.

  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಬೆಂಗಳೂರು ನಗರದಲ್ಲಿ ಬಂಧನಕ್ಕೆ ಒಳಗಾಗಿದ್ದ ಅನಿಕಾಳಿಂದ ಮಾದಕ ವಸ್ತುವನ್ನು ಆಡಂ ಪಾಷಾ ಖರೀದಿಸಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಅಧಿಕಾರಿಗಳು ಆಡಂ ಪಾಷಾನನ್ನು ಬಂಧಿಸಿದ್ದಾರೆ. ಅನಿಕಾಳ ಬಂಧನದ ಸಮಯದಲ್ಲಿ ಆಡಂ ಪಾಷಾ, 'ಅನಿಕಾ ನನ್ನ ಗೆಳತಿ, ಆಕೆಯೊಂದಿಗೆ ಆಪ್ತತೆ ಇದೆ, ಆದರೆ ಆಕೆಯ ಡ್ರಗ್ಸ್ ವ್ಯವಹಾರದ ಬಗ್ಗೆ ನನಗೆ ಗೊತ್ತಿಲ್ಲ' ಎಂದಿದ್ದರು.

  English summary
  Sandalwood Drug Case: CCB Interrogates Producer Soundarya Jagdish.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X