ಡ್ರಗ್ಸ್ ಪ್ರಕರಣ: ಸಿಸಿಬಿ ವಶಕ್ಕೆ ನಟಿ ಸಂಜನಾ ಗಲ್ರಾನಿ

ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ನಟಿ ಸಂಜನಾ ಗಲ್ರಾನಿಯನ್ನ ಸಿಸಿಬಿ ವಶಕ್ಕೆ ಪಡೆದಿದೆ.

Recommended Video

ಕೊನೆಗೂ CCB ಪೋಲೀಸರ ಕೈಗೆ ತಗಲಾಕೊಂಡ Sanjjanaa Galrani | Filmibeat Kannada

ಇಂದು (ಸೆಪ್ಟಂಬರ್ 8) ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಇಂದಿರಾನಗರದಲ್ಲಿರುವ ನಟಿ ಸಂಜನಾ ಗಲ್ರಾನಿ ಫ್ಲ್ಯಾಟ್ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಈಗ ಅವರನ್ನು ವಶಕ್ಕೆ ಪಡೆದು, ಸಿಸಿಬಿ ಕಚೇರಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಪೊಲೀಸ್ ವಾಹನದಲ್ಲಿಯೇ ಸಂಜನಾ ಸಿಸಿಬಿ ಕಚೇರಿಗೆ ಹೋಗುತ್ತಿದ್ದಾರೆ.

ಇನ್ಸ್ ಪೆಕ್ಟರ್ ಪುನೀತ್ ಮತ್ತು ಇನ್ಸ್ ಪೆಕ್ಟರ್ ಅಂಜುಮಾಲಾ ನೇತೃತ್ವದ 8 ಅಧಿಕಾರಿಗಳ ತಂಡ ಸಂಜನಾ ಮನೆ ಮೇಲೆ ದಾಳಿ ನಡೆಸಿ, ಹುಡುಕಾಟ ನಡೆಸಿದ್ದಾರೆ. ಸಂಜನಾಗೆ ಸಂಬಂಧಿಸಿದ 3 ಮೊಬೈಲ್, ಲ್ಯಾಪ್ ಟಾಪ್ ಮತ್ತು ಹಾರ್ಡ್ ಡೆಸ್ಕ್ ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

Sandalwood Drug Case: Central Crime Branch Takes Actress Sanjjanaa Galrani Into Custody

ಸಂಜನಾ ಆಪ್ತ ರಾಹುಲ್ ಶೆಟ್ಟಿ ಮತ್ತು ಪೃಥ್ವಿ ಶೆಟ್ಟಿ ಇಬ್ಬರನ್ನು ಸಿಸಿಬಿ ಬಂಧಿಸಿದೆ. ಇವರ ಹೇಳಿಕೆ ಆಧಾರದ ಮೇಲೆ ಸಂಜನಾ ಗಲ್ರಾನಿ ಅವರನ್ನು ಬಂಧಿಸಲಾಗಿದೆ. ಡ್ರಗ್ಸ್ ಗೂ ತನಗೂ ಯಾವುದೇ ಸಂಬಂಧವಿಲ್ಲ ಎನ್ನುತ್ತಿದ್ದ ಸಂಜನಾಗೆ ಈಗ ಸಂಕಷ್ಟ ಎದುರಾಗಿದೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪದಡಿ ಈಗಾಗಲೇ ನಟಿ ರಾಗಿಣಿಯನ್ನು ಸಿಸಿಬಿ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

More from Filmibeat

English summary
CCB takes actress Sanjjanaa Galrani into custody. CCB raid on actress sanjjanaa galrani house in indiranagar.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X