For Quick Alerts
  ALLOW NOTIFICATIONS  
  For Daily Alerts

  ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

  |

  ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. ಈ ಹಿಂದೆ ಶುಕ್ರವಾರ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮಾಡಿದ್ದ ಬೆಂಗಳೂರಿನ ವಿಶೇಷ ಎನ್‌ಡಿಪಿಎಸ್‌ ನ್ಯಾಯಾಲಯ ಮುಂದಿನ ಸೆಪ್ಟೆಂಬರ್ 14ಕ್ಕೆ ಮುಂದೂಡಿತ್ತು.

  ಈ ಹಿನ್ನೆಲೆ ಇಂದು ಮತ್ತೆ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸೆಪ್ಟೆಂಬರ್ 16ಕ್ಕೆ ಮತ್ತೆ ವಿಚಾರಣೆಯನ್ನು ಮುಂದಕ್ಕೆ ಹಾಕಿದೆ. ಹೀಗಾಗಿ, ಜಾಮೀನಿನ ನಿರೀಕ್ಷೆಯಲ್ಲಿದ್ದ ರಾಗಿಣಿಗೆ ನಿರಾಸೆಯಾಗಿದೆ.

  ಮತ್ತೆ ಮೂರು ದಿನ ಸಿಸಿಬಿ ವಶಕ್ಕೆ ರಾಗಿಣಿ-ಸಂಜನಾಮತ್ತೆ ಮೂರು ದಿನ ಸಿಸಿಬಿ ವಶಕ್ಕೆ ರಾಗಿಣಿ-ಸಂಜನಾ

  ಸಿಸಿಬಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಶುಕ್ರವಾರ ವಿಡಿಯೋ ಕಾನ್ಫೆರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಿದ್ದ ರಾಗಿಣಿಗೆ ಮತ್ತೆ ಮೂರು ದಿನ ಪೊಲೀಸರ ವಶಕ್ಕೆ ನೀಡಲಾಗಿತ್ತು.

  ರಾಗಿಣಿ ಬಂಧನ ಆಗಿದ್ದು ಯಾವಾಗ?

  ಪತ್ನಿ Revathi ಕಾಲೆಳೆದ Nikhil Kumaraswamy | Oneindia Kannada

  ಸೆಪ್ಟೆಂಬರ್ 4 ರಂದು ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ನಟಿಯನ್ನು ವಶಕ್ಕೆ ಪಡೆದುಕೊಂಡರು. ಮೂರು ದಿನಗಳ ಕಾಲ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ ಬಳಿಕ ಸೆಪ್ಟೆಂಬರ್ 7 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನಂತರ ಐದು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿತ್ತು.

  English summary
  Sandalwood drug case: Court adjourns hearing on actress Ragini’s bail application till September 16.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X