Breaking: ನಟಿ ರಾಗಿಣಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಕನ್ನಡ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮಾಡಿದ ನ್ಯಾಯಾಧೀಶ ನಾರಿಮನ್ ಪೀಠ ಗುರುವಾರ ಜಾಮೀನು ನೀಡಿ ಆದೇಶಿಸಿದೆ.
ಸುಮಾರು 140 ದಿನಗಳ ಕಾಲ ಪರಪ್ಪನ ಜೈಲಿನಲ್ಲಿದ್ದ ನಟಿ ರಾಗಿಣಿಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ಕಾಟನ್‌ಪೇಟೆ ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿನಿ ಎ2 ಆಗಿದ್ದರು. ಇದೇ ಪ್ರಕರಣದಲ್ಲಿ ಬಂಧಿತವಾಗಿದ್ದ ಶಿವಪ್ರಕಾಶ್‌ಗೂ ಜಾಮೀನು ಸಿಕ್ಕಿದೆ.
ಕಳೆದ ವರ್ಷ ಸೆಪ್ಟೆಂಬರ್ 4 ರಂದು ನಟಿ ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸೆಪ್ಟೆಂಬರ್ 14ರವರೆಗೂ ಸಿಸಿಬಿ ಕಸ್ಟಡಿಯಲ್ಲಿದ್ದ ನಟಿಯನ್ನು ಸೆಪ್ಟೆಂಬರ್ 15 ರಂದು ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು.

ಸಿಸಿಬಿ ವಿಶೇಷ ನ್ಯಾಯಾಲಯ ಹಾಗೂ ಕರ್ನಾಟಕ ಹೈ ಕೋರ್ಟ್‌ಗಳಲ್ಲಿ ನಟಿ ರಾಗಿಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಈ ನ್ಯಾಯಾಲಯಗಳಲ್ಲಿ ಬೇಲ್ ಸಿಕ್ಕಿರಲಿಲ್ಲ. ಇದೀಗ, ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಮಂಜೂರು ಆಗಿದೆ.
ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ನಂತರ ನಟಿ ಸಂಜನಾ ಗಲ್ರಾನಿ ಅವರನ್ನು ಬಂಧಿಸಲಾಗಿತ್ತು. ಬಳಿಕ, ಸಂಜನಾಗೆ ಜಾಮೀನು ಸಿಕ್ಕಿತ್ತು.
Recommended Video
ರಾಗಿಣಿ ಜೈಲಿನಿಂದ ಇಂದು ಬಿಡುಗಡೆಯಾಗುವುದು ಕಷ್ಟ ಎಂದು ಹೇಳಲಾಗುತ್ತಿದೆ. ಸುಪ್ರೀಂಕೋರ್ಟ್‌ನಿಂದ ಬಿಡುಗಡೆ ಪ್ರತಿ ಬಂದ ಬಳಿಕ ಅದನ್ನ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ನೀಡಿ ಪರಿಶೀಲಿಸಿದ ನಂತರವೇ ರಾಗಿಣಿ ಬಿಡುಗಡೆ ಎನ್ನಲಾಗಿದೆ.


Click it and Unblock the Notifications











