ಡ್ರಗ್ಸ್ ಪ್ರಕರಣ: ನಟಿ ಸಂಜನಾ ಗಲ್ರಾನಿ 5 ದಿನ ಸಿಸಿಬಿ ಪೊಲೀಸರ ವಶಕ್ಕೆ

ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿಯನ್ನ 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಲಾಗಿದೆ. 8ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

Recommended Video

ಕೊನೆಗೂ CCB ಪೋಲೀಸರ ಕೈಗೆ ತಗಲಾಕೊಂಡ Sanjjanaa Galrani | Filmibeat Kannada

ಇಂದು (ಸೆಪ್ಟಂಬರ್ 8) ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದರು. ಬಳಿಕ ಅವರನ್ನು ವಶಕ್ಕೆ ಪಡೆದು, ಸಿಸಿಬಿ ಕಚೇರಿಗೆ ಕರೆದುಕೊಂಡು ಬಂದು ವಿಚಾರಣೆಗೆ ಒಪಡಿಸಲಾಗಿತ್ತು. ನಂತರ 8ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ.

8 ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರ್ಟ್ ಮುಂದೆ ಕೇಳಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ 5 ದಿನಗಳು ಸಿಸಿಬಿ ವಶಕ್ಕೆ ನೀಡಲಾಗಿದೆ. ಮೂರು ಗಂಟೆಗೂ ಅಧಿಕ ಕಾಲ ಸಂಜನಾರನ್ನು ವಿಚಾರಣೆ ನಡೆಸಿದ ಸಿಸಿಬಿ ಅನೇಕ ಪ್ರಶ್ನೆಗಳನ್ನು ಸಂಜನಾ ಮುಂದಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

Sandalwood Drug Case: Sanjjana Galrani Sent To Five-Day Custody By Court

ಸದ್ಯ ಸಂಜನಾ ಅವರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಸಂಜನಾಗೆ ಸಂಬಂಧಿಸಿದ 3 ಮೊಬೈಲ್, ಲ್ಯಾಪ್ ಟಾಪ್ ಮತ್ತು ಹಾರ್ಡ್ ಡೆಸ್ಕ್ ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಸಂಜನಾ ಆಪ್ತ ರಾಹುಲ್ ಶೆಟ್ಟಿ ಮತ್ತು ಪೃಥ್ವಿ ಶೆಟ್ಟಿ ಇಬ್ಬರನ್ನು ಸಿಸಿಬಿ ಬಂಧಿಸಿದೆ. ಇವರಿಬ್ಬರ ಹೇಳಿಕೆ ಆಧಾರದ ಮೇಲೆ ಸಂಜನಾ ಗಲ್ರಾನಿ ಅವರನ್ನು ಬಂಧಿಸಲಾಗಿದೆ. ಡ್ರಗ್ಸ್ ಗೂ ತನಗೂ ಯಾವುದೇ ಸಂಬಂಧವಿಲ್ಲ ಎನ್ನುತ್ತಿದ್ದ ಸಂಜನಾ ಈಗ ಸಿಸಿಬಿ ವಶದಲ್ಲಿದ್ದಾರೆ.

More from Filmibeat

English summary
Actress sanjjanaa galrani sent to five-day custody by court. CCB raid on actress sanjjanaa galrani house in indiranagar.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X