ಡ್ರಗ್ಸ್ ಪ್ರಕರಣ: ನಟಿ ಸಂಜನಾ ಮತ್ತೆ ಮೂರು ದಿನ ಸಿಸಿಬಿ ಕಸ್ಟಡಿಗೆ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯನ್ನು 14 ದಿನಗಳು ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದ್ರೆ, ನಟಿ ಸಂಜನಾ ಗಲ್ರಾನಿ ಅವರನ್ನು ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ ವಹಿಸಲಾಗಿದೆ.
ರಾಗಿಣಿ, ಸಂಜನಾ ಹಾಗೂ ಇತರೆ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಇಂದು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಸಂಜನಾ ಅವರನ್ನು ಮತ್ತಷ್ಟು ದಿನ ಕಸ್ಟಡಿಗೆ ನೀಡುವಂತೆ ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಮನವಿ ಮಾಡಿದ್ದರು.

ಸಂಜನಾ ಅವರಿಂದ ಮತ್ತಷ್ಟು ವಿವರ ಬೇಕಿದೆ, ಅವರು ತನಿಖೆಗೆ ಸೂಕ್ತವಾಗಿ ಸಹಕರಿಸಿಲ್ಲ, ಹೀಗಾಗಿ, ಇನ್ನು ಸ್ವಲ್ಪ ದಿನ ಕಸ್ಟಡಿಗೆ ನೀಡುವಂತೆ ಸಿಸಿಬಿ ಕೇಳಿಕೊಂಡಿದ್ದರು. ಪೊಲೀಸರ ಮನವಿಯನ್ನು ಪುರಸ್ಕರಿಸಿದ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮೂರು ದಿನಕ್ಕೆ ಸಂಜನಾ ವಶಕ್ಕೆ ನೀಡಿ ಆದೇಶಿಸಿದ್ದಾರೆ.
ಹೀಗಾಗಿ, ಸಂಜನಾ ಅವರನ್ನು ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗುತ್ತದೆ. ಮೂರು ದಿನಗಳ ವಿಚಾರಣೆ ಬಳಿಕ ಸೆಪ್ಟೆಂಬರ್ 16 ರಂದು ಕೋರ್ಟ್ ಮುಂದೆ ಮತ್ತೆ ಸಂಜನಾ ಹಾಜರಾಗಬೇಕಿದೆ.


Click it and Unblock the Notifications











