For Quick Alerts
  ALLOW NOTIFICATIONS  
  For Daily Alerts

  ಸ್ಯಾಂಡಲ್ ವುಡ್ ಗೆ ನಶೆಯ ನಂಟು: ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದೇನು?

  |

  ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾದ ನಂಟಿನ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಪರ ವಿರೋಧ ಮಾತುಗಳು ಕೇಳಿ ಬರುತ್ತಿವೆ. ಈಗಾಗಲೇ ಡ್ರಗ್ಸ್ ಜಾಲದ ಬಿನ್ನತ್ತಿರುವ ಸಿಸಿಬಿ, ನಟಿ ರಾಗಿಣಿ ಆಪ್ತ ರವಿಶಂಕರ್ ನನ್ನು ವಶಕ್ಕೆ ಪಡೆದಿದು ವಿಚಾರಣೆ ಮಾಡುತ್ತಿದ್ದಾರೆ.

  ರಾಗಿಣಿ ಮನೆಗೆ ಪೋಲೀಸರ ಎಂಟ್ರಿ | Filmibeat Kannada

  ಸ್ಯಾಂಡಲ್ ವುಡ್ ನಶೆಯ ಬಗ್ಗೆ ನಟಿ ಮತ್ತು ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ. 40 ವರ್ಷದ ಅನುಭವದಲ್ಲಿ ಡ್ರಗ್ಸ್ ಇರೋದು ನಾನು ಕಂಡಿಲ್ಲ ಎಂದು ಹೇಳಿದ್ದಾರೆ.

  ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳಿಯೋದು ಬೇಡ: ಸುಮಲತಾ ಅಂಬರೀಶ್ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳಿಯೋದು ಬೇಡ: ಸುಮಲತಾ ಅಂಬರೀಶ್

  ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುಮಲತಾ ಅಂಬರೀಶ್ ನಂತರ ಡ್ರಗ್ಸ್ ವಿಚಾರವಾಗಿ ಮಾಧ್ಯಮದವರ ಜೊತೆ ಮಾತನಾಡಿದ್ದಾರೆ.

  40 ವರ್ಷದ ಅನುಭವದಲ್ಲಿ ನಾನು ನೋಡಿಲ್ಲ. ಹಾಗಂತ ಇಲ್ಲಾ ಅಂತಲ್ಲ, ನನ್ನ ಗಮನಕ್ಕೆ ಬಂದಿಲ್ಲ. ನಮಗೆ ಗೊತ್ತಿಲ್ಲದ ವಿಷಯಗಳ ಬಗ್ಗೆ ಮಾತನಾಡೋದು ತಪ್ಪಾಗುತ್ತೆ. ಡ್ರಗ್ಸ್ ಕಂಟ್ರೋಲ್ ಮಾಡೋಕೆ ಅಂತಾಲೇ ಏಜೆನ್ಸಿ ಇದೆ. ಯಾರು ಇದರಲ್ಲಿ ಪಾಲ್ಗೊಂಡಿದ್ದಾರೋ ಅವರನ್ನು ತನಿಖೆ ಮಾಡಬೇಕು ಎಂದು ಹೇಳಿದರು.

  ನಾನು ಒಬ್ಬ ಸೆಲೆಬ್ರಿಟಿ ಆಗಿ ಅಲ್ಲ. ತಾಯಿಯಾಗಿ ಹೇಳುತ್ತಿದ್ದೇನೆ, ಯುವಜನರು ದುಶ್ಚಟಗಳ ದಾಸರಾಗಬಾರದು. ಚಿತ್ರರಂಗ ಅಂತಲ್ಲ ಎಲ್ಲಾ ಕಡೆ ಡ್ರಗ್ಸ್ ಮಾಫಿಯಾ ಇದೆ ಎಂದು ಸುಮಲತಾ ಅಂಬರೀಶ್ ಡ್ರಗ್ಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

  English summary
  Actress And MP Sumalatha Ambareesh reaction about Sandalwood drug mafia.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X