ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿಗೆ 2 ದಿನ ಜೈಲು

ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ಸಂಜನಾ ಗಲ್ರಾನಿಗೆ 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ. ಸಿಸಿಬಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಸಂಜನಾ ಅವರನ್ನು ಇಂದು ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಈ ವೇಳೆ ಸಂಜನಾ ಪರ ವಕೀಲ ಶ್ರೀನಿವಾಸ ರಾವ್ ಅವರು ಸಂಜನಾ ಅವರಿಗೆ ಜಾಮೀನು ನೀಡಬೇಕೆಂದು ಮನವಿ ಸಲ್ಲಿಸಿದರು. ಆದರೆ, ವಾದ-ಪ್ರತಿವಾದದ ವಿಚಾರಣೆ ನಡೆಸಿದ 1ನೇ ಎಸಿಎಂಎಂ ಕೋರ್ಟ್ 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಸೂಚಿಸಿದೆ. ಹೀಗಾಗಿ, ಸೆಪ್ಟೆಂಬರ್ 18ವರೆಗೂ ಸಂಜನಾ ಜೈಲಿನಲ್ಲಿರಬೇಕಾಗುತ್ತದೆ.

ಈಗಾಗಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರದ ಜೈಲು ಸೇರಿದ್ದಾರೆ.

Sandalwood Drug Racket: Actress Sanjjanaa Galrani sent to 2 days judicial custody

ಇದೀಗ, ಸಂಜನಾ ಗಲ್ರಾನಿ ಅವರನ್ನು ಸಹ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡುವಂತೆ ಕೋರ್ಟ್ ಸೂಚಿಸಿದೆ. ಸದ್ಯ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸಿಸಿಬಿ ವಶದಲ್ಲಿರುವ ನಟಿ ಸಂಜನಾ ಅವರನ್ನು ಇಂದು ಸಂಜೆ ವೇಳೆ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗುತ್ತದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿಶಂಕರ್ ಮತ್ತು ವೀರೇನ್ ಖನ್ನಾ ಅವರಿಗೆ ಬೆಂಗಳೂರಿನ 33ನೇ ಸಿಸಿಎಚ್ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲು ಆದೇಶಿಸಿದೆ.

Recommended Video

Diganth ಹಾಗು Aindrita Ray ಮೊದಲ ದಿನದ ವಿಚಾರಣೆ ಹೇಗಾಯ್ತು | Oneindia Kannada

More from Filmibeat

English summary
Sandalwood Drug Racket: Actress Sanjjanaa Galrani sent to 2 days judicial custody.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X