ಮಹಾಶಿವರಾತ್ರಿ ಹಬ್ಬಕ್ಕೆ ಶುಭ ಕೋರಿದ ಸ್ಯಾಂಡಲ್‌ವುಡ್ ಸ್ಟಾರ್ಸ್
ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ ಜೋರಾಗಿದೆ. ಸ್ಯಾಂಡಲ್‌ವುಡ್‌ನಲ್ಲಿ ಶಿವರಾತ್ರಿ ಸಂಭ್ರಮದ ಜೊತೆ ರಾಬರ್ಟ್ ಹಬ್ಬವೂ ಅದ್ಧೂರಿಯಾಗಿ ನಡೆಯುತ್ತಿದೆ. ಇದರ ಜೊತೆಗೆ ಸ್ಟಾರ್ ನಟರು ತಮ್ಮ ಚಿತ್ರಗಳ ಹೊಸ ಪೋಸ್ಟರ್‌ಗಳನ್ನು ಹಂಚಿಕೊಳ್ಳುವ ಮೂಲಕ ಶಿವರಾತ್ರಿ ಹಬ್ಬಕ್ಕೆ ಶುಭ ಕೋರಿದ್ದಾರೆ.
''ಎಲ್ಲರಿಗು ಮಹಾ ಶಿವರಾತ್ರಿ ಹಬ್ಬದ ಶುಭಾಶಯಗಳು'' ಎಂದು ನಟ ಪುನೀತ್ ರಾಜ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಪುನೀತ್ ನಟನೆಯ ಯುವರತ್ನ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮ ಮಾರ್ಚ್ 20 ರಂದು ಮೈಸೂರಿನಲ್ಲಿ ನಡೆಯಲಿದೆ.
'ವಿಕ್ರಾಂತ್ ರೋಣ' ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಸುದೀಪ್ ಎಲ್ಲರಿಗೂ ಶಿವರಾತ್ರಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

''ಮಹಾಶಿವರಾತ್ರಿಯ ಈ ಶುಭ ಸಂದರ್ಭದಲ್ಲಿ ಶಿವನ ಆಶೀರ್ವಾದ ನಿಮ್ಮೊಂದಿಗಿರಲಿ. ಕರುಣಾಮಯಿಯ ಕೃಪೆಯಿಂದ ನಿಮ್ಮ ಬಾಳಿನಲ್ಲಿ ಇನ್ನಷ್ಟು ಖುಷಿ ಪ್ರಜ್ವಲಿಸಲಿ. ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು'' ಎಂದು ನಟ ದರ್ಶನ್ ವಿಶ್ ಮಾಡಿದ್ದಾರೆ.
ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಇಂದು ಬಿಡುಗಡೆಯಾಗಿದ್ದು, ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ.
''ನಾಡಿನ ಸಮಸ್ತ ಬಾಂಧವರಿಗೆ ಮಹಾಶಿವರಾತ್ರಿಯ ಶುಭಾಶಯಗಳು'' ಎಂದು ನಿರ್ದೇಶಕ ಪವನ್ ಒಡೆಯರ್ ಶುಭಕೋರಿದ್ದಾರೆ.

ಶಿವನ ವೇಷ ಧರಿಸಿರುವ ಮಕ್ಕಳ ಜೊತೆಗಿನ ಫೋಟೋ ಶೇರ್ ಮಾಡಿರುವ ನಟ ರಮೇಶ್ ಅರವಿಂದ್ ಶಿವನ ಜಪ ಮಾಡಿದ್ದಾರೆ.


Click it and Unblock the Notifications