ಶೇ.50 ರಿಯಾಯಿತಿ ದರದಲ್ಲಿ 'ರಾಯಣ್ಣ' ಟಿಕೆಟ್

By Rajendra

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಐತಿಹಾಸಿಕ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಚಿತ್ರದ ಟಿಕೆಟ್ ಗಳನ್ನು ಶೇ.50ರ ರಿಯಾಯಿತಿ ದರದಲ್ಲಿ ನೀಡಲು ಚಿತ್ರತಂಡ ಮುಂದಾಗಿದೆ. ಆದರೆ ಈ ಕೊಡುಗೆ ಜನಸಾಮಾನ್ಯರಿಗಲ್ಲ. ರಾಜ್ಯದ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಮಾತ್ರ. ಈ ಕೊಡುಗೆಯನ್ನು ಘೋಷಿಸಿದ್ದಾರೆ ಚಿತ್ರದ ನಿರ್ಮಾಪಕ ಆನಂದ್ ಅಪ್ಪುಗೋಳ್.

ಈ ಸಂಬಂಧ ಅವರು ಪತ್ರಿಕೆಗಳಿಗೆ ಜಾಹೀರಾತನ್ನೂ ನೀಡಿದ್ದಾರೆ. ರಾಜ್ಯದ ಎಲ್ಲಾ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಈ ಸೌಲಭ್ಯವನ್ನು ಪಡೆಯಬಹುದು. ಆನಂದ್ ಅಪ್ಪುಗೋಳ್ ಅವರ ಮನವಿಗೆ ಕರ್ನಾಟಕ ರಾಜ್ಯ ಸರ್ಕಾರ ಸಹ ಅನುಮೋದನೆ ನೀಡಿದೆ.

ಇದಿಷ್ಟೇ ಅಲ್ಲದೆ ಸ್ವಾತಂತ್ರ್ಯ ಯೋಧರು, ವೀರ ಯೋಧರು 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಚಿತ್ರವನ್ನು ಉಚಿತವಾಗಿ ವೀಕ್ಷಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ ಚಿತ್ರದ ನಿರ್ಮಾಪಕರು. ವಿದ್ಯಾರ್ಥಿಗಳು, ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಗುರುತಿನ ಚೀಟಿಯನ್ನು ಥಿಯೇಟರಿನ ಟಿಕೆಟ್ ಕೌಂಟರ್ ನಲ್ಲಿ ತೋರಿಸಿ ಟಿಕೆಟ್ ಗಳನ್ನು ಪಡೆಯಬಹುದಾಗಿದೆ.

ಈಗಾಗಲೆ 25 ದಿನಗಳನ್ನು ಪೂರೈಸಿರುವ ರಾಯಣ್ಣ ಈಗ ರಾಜ್ಯದಾದ್ಯಂತ ವಿಜಯಯಾತ್ರೆ ಹೊರಡಲು ಅಣಿಯಾಗಿದೆ. ಇದೇ ಭಾನುವಾರ (ಡಿಸೆಂಬರ್ 2) ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಚಿತ್ರತಂಡ ಬೆಂಗಳೂರಿನ ಸಂಗೊಳ್ಳಿ ಪ್ರತಿಮೆಯಿಂದ ಬೆಳಗ್ಗೆ 9.30ಕ್ಕೆ ಹೊರಡಲಿದೆ. (ಒನ್ಇಂಡಿಯಾ ಕನ್ನಡ)

More from Filmibeat

English summary
Kranthiveera Sangolli Rayanna producer Anand B Appugol given big offer to students, freedom fighters and soldiers. He announced 50% concession on ticket price for school and college students. Freedom fighters and soldiers are to watch the movie at free of cost.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X