Don't Miss!
- Education
Chamarajanagar WCD Recruitment 2021: 223 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ - Sports
ಐಪಿಎಲ್ 2021: ಕೊಲ್ಕತ್ತಾ ಮತ್ತು ಪಂಜಾಬ್ ಮುಖಾಮುಖಿಯ ಅಂಕಿಅಂಶ - Automobiles
ಕೇವಲ 2.7 ಸೆಕೆಂಡ್ನಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗ, ಹೊಸ ಫೆರಾರಿ ಕಾರು ಅನಾವರಣ - News
ಪಂಡಿತ್ ರಾಜನ್ ಮಿಶ್ರಾ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ - Lifestyle
ಈ ನೈಸರ್ಗಿಕ ವಿಷಯಗಳಿಂದ ನಿಮ್ಮ ಬ್ಲಾಕ್ ಹೆಡ್ಸ ನ್ನು ತೆಗೆದುಹಾಕಬಹುದು - Finance
ಚಿನ್ನದ ಬೆಲೆ ಇಳಿಕೆ: 3 ದಿನಗಳಲ್ಲಿ 1,000 ರೂಪಾಯಿ ಕುಸಿತ - Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ! - Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಟಿ ಸಂಜನಾ ಗಲ್ರಾನಿ ಹಾಗೂ ಪತಿಗೆ ಕೊರೊನಾ ಪಾಸಿಟಿವ್
ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿ ಸಂಕಷ್ಟ ಅನುಭವಿಸಿದ್ದ ನಟಿ ಸಂಜನಾ ಗಲ್ರಾನಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ.
ಸಂಜನಾ ಮಾತ್ರವೇ ಅಲ್ಲದೆ ಪತಿ ಅಜೀಜ್ ಪಾಷಾ ಅವರಿಗೂ ಕೊರೊನಾ ಪಾಸಿಟಿವ್ ಆಗಿದೆ. ಈ ಬಗ್ಗೆ ಸಂಜನಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಸಂಜನಾ ಗಲ್ರಾನಿ ನಿನ್ನೆಯಷ್ಟೆ ಪತಿಯ ಕುಟುಂಬದೊಂದಿಗೆ ಡಿನ್ನರ್ ಪಾರ್ಟಿ ಮಾಡಿದ್ದರು. ಇಂದು ಸಂಜನಾಗೆ ಪಾಸಿಟಿವ್ ಆಗಿದ್ದು ಸಂಜನಾ ಅವರ ಪತಿಯ ಕುಟುಂಬದವರಿಗೂ ಆತಂಕ ಎದುರಾಗಿದೆ.
'ನನಗೆ ಕೊರೊನಾ ಪಾಸಿಟಿವ್ ಆಗಿದೆ. ನನಗೆ ನನ್ನ ಪತಿಯಿಂದಲೇ ಕೊರೊನಾ ಸೋಂಕು ಆಗಿದೆ. ನನ್ನ ಪತಿ ವೈದ್ಯರಾಗಿದ್ದು ಪ್ರತಿ ದಿನ ಅವರು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಪ್ರಬಲವಾದ ಕೊರೊನಾ ಎರಡನೇ ಅಲೆಯನ್ನು ಧೈರ್ಯದಿಂದ ಎದುರಿಸಲು ನಾವು ಸಜ್ಜಾಗಿದ್ದೇವೆ'' ಎಂದಿದ್ದಾರೆ ಸಂಜನಾ.
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಎಸ್ಐಟಿಯಿಂದ ಬಂಧನಕ್ಕೆ ಒಳಗಾಗಿ ಜೈಲುವಾಸ ಅನುಭವಿಸಿದ್ದರು. ನಟಿ ರಾಗಿಣಿ ದ್ವಿವೇದಿ ಸಹ ಇದೇ ಪ್ರಕರಣದಲ್ಲಿ ಸಿಲುಕಿಕೊಂಡು ಸಂಜನಾ ಜೊತೆಗೆ ಜೈಲು ವಾಸ ಅನುಭವಿಸಿದರು.


Click it and Unblock the Notifications






























