For Quick Alerts
  ALLOW NOTIFICATIONS  
  For Daily Alerts

  ಡ್ರಗ್ಸ್ ಪ್ರಕರಣ: ಸಿಸಿಬಿ ಪೊಲೀಸರ ಮುಂದೆ ಹಾಜರಾದ ಸಂಜನಾ ಗಲ್ರಾನಿ

  |

  ಡ್ರಗ್ಸ್ ಪ್ರಕರಣದ ಆರೋಪಿ ನಟಿ ಸಂಜನಾ ಗಲ್ರಾನಿ ಇಂದು ಸಿಸಿಬಿ ಪೊಲೀಸರ ಮುಂದೆ ಹಾಜರಾದರು.

  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿ, ಕೆಲವು ದಿನಗಳ ಹಿಂದಷ್ಟೆ ಆರೋಗ್ಯ ಕಾರಣ ನೀಡಿ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ.

  ಜಾಮೀನು ನೀಡಿದ್ದ ನ್ಯಾಯಾಲಯವು, ಸಂಜನಾ ಗೆ ಕೆಲವು ಷರತ್ತುಗಳನ್ನು ವಿಧಿಸಿತ್ತು, ಜಾಮೀನು ಅವಧಿಯಲ್ಲಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಸಹ ಷರತ್ತು ವಿಧಿಸಲಾಗಿತ್ತು. ಆ ಷರತ್ತಿನ ಅನ್ವಯ ಇಂದು ಸಂಜನಾ ಗಲ್ರಾನಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದರು.

  ಸೆಪ್ಟೆಂಬರ್ 8 ರಂದು ನಟಿ ಸಂಜನಾ ಗಲ್ರಾನಿಯನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀರು ಬಂಧಿಸಿದ್ದರು. ಅವರನ್ನು ಪರಪ್ಪರ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು.

  ಡಿಸೆಂಬರ್ 11 ರಂದು ಕರ್ನಾಟಕ ರಾಜ್ಯ ಹೈಕೋರ್ಟ್‌ ಸಂಜನಾ ಗೆ ಜಾಮೀನು ಮಂಜೂರು ಮಾಡಿದೆ. ಕೆಲವು ಷರತ್ತುಗಳನ್ನು ಸಹ ಸಂಜನಾ ಗೆ ವಿಧಿಸಲಾಗಿದೆ. ಮೂರು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಇಬ್ಬರ ಶ್ಯೂರಿಟಿ ನೀಡುವುದರ ಜೊತೆಗೆ. ಪ್ರತಿ ತಿಂಗಳು ಎರಡು ಬಾರಿ ಪೊಲೀಸ್ ಠಾಣೆಗೆ ಹಾಜರಾಗಬೇಕು ಹಾಗೂ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಕಾರ್ಯ ಮಾಡದೆ ವಿಚಾರಣೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿ ಸಂಜನಾಗೆ ಜಾಮೀನು ಮಂಜೂರು ಮಾಡಲಾಗಿದೆ.

  ತೆಲುಗು ಹುಡುಗನ ಹಿಂದೆ ಬಿದ್ದ ಡಿಂಪಲ್ ಕ್ವೀನ್ Rachitha Ram | Filmibeat Kannada

  ಸಂಜನಾ ಗಲ್ರಾನಿಗಿಂತಲೂ ಮೊದಲು ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿಗೆ ಈ ವರೆಗೆ ಜಾಮೀನು ದೊರೆತಿಲ್ಲ. ರಾಗಿಣಿ ಗೆ ಇತ್ತೀಚೆಗೆ ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

  English summary
  Actress Sanjana Galrani appeared before CCB police officers who investigating drugs case. Sanjana got bail on December 3.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X