For Quick Alerts
  ALLOW NOTIFICATIONS  
  For Daily Alerts

  ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

  |

  ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಇಂದ ಬಂಧನಕ್ಕೆ ಒಳಗಾಗಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

  ಜಾಮೀನಿಗಾಗಿ ಸಂಜನಾ ಗಲ್ರಾನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಿತು, ನಂತರ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 22 ಕ್ಕೆ ಮುಂದೂಡಲಾಯಿತು.

  ಅರ್ಜಿ ವಿಚಾರಣೆ ವೇಳೆ, ನಿನ್ನೆ ಎನ್‌ಡಿಪಿಎಸ್ ನ್ಯಾಯಾಲಯ ಹಾಗೂ ಕಮೀಷನರ್ ಕಚೇರಿಗೆ ಬೆದರಿಕೆ ಪತ್ರ ಬಂದ ಬಗ್ಗೆಯೂ ಚರ್ಚೆ ನಡೆಯಿತು, ಇದೇ ಕಾರಣವನ್ನು ಮುಂದಿಟ್ಟು, ಸಂಜನಾಗೆ ಜಾಮೀನು ನೀಡಬಾರದೆಂದು ಪಬ್ಲಿಕ್ ಪ್ರಾಸಿಕ್ಯೂಟರ್ ಮನವಿ ಮಾಡಿದರು.

  ನಿನ್ನೆ ನ್ಯಾಯಾಲಯ ಹಾಗೂ ಪೊಲೀಸ್ ಕಮೀಷನರ್ ಕಚೇರಿಗೆ ಬೆದರಿಕೆ ಪತ್ರ ಬಂದಿದ್ದು, ಸಂಜನಾ-ರಾಗಿಣಿಗೆ ಜಾಮೀನು ನೀಡದೇ ಇದ್ದರೆ ಬಾಂಬ್ ಸ್ಟೋಟಿಸುವುದಾಗಿ ಪತ್ರದಲ್ಲಿ ಬರೆಯಲಾಗಿದೆ. ಪತ್ರದ ಜೊತೆಗೆ ಡೆಟೊನೇಟರ್‌ ಅನ್ನು ಸಹ ಕಳಿಸಲಾಗಿದೆ.

  ಮೈಸೂರಿನಲ್ಲಿ ಬೀಡುಬಿಟ್ಟ ಹರಿಪ್ರಿಯಾ, ನೀನಾಸಂ ಸತೀಶ್ | Filmibeat Kannada

  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿಯನ್ನು ಸೆಪ್ಟೆಂಬರ್ 8 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಟಿ ರಾಗಿಣಿ ದ್ವಿವೇದಿ ಸಹ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದು, ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

  English summary
  Sanjana Galrani's bail application hearing postponed to October 02. Sanjana arrested by CCB on September 08.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X