ಶಿವಮೊಗ್ಗದಲ್ಲಿ ಇತಿಹಾಸ ಬರೆದ 'ಸ.ಹಿ.ಪ್ರಾ.ಶಾ ಕಾಸರಗೋಡು' ಸಿನಿಮಾ
ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾ ನಾಳೆ ರಾಜ್ಯಾದಂತ್ಯ ಬಿಡುಗಡೆಯಾಗಲಿದೆ. ಈ ಕಾರಣ ಇಂದು ಚಿತ್ರದ ಪ್ರೀಮಿಯರ್ ಶೋವನ್ನು ಏರ್ಪಡಿಲಾಗಿದೆ. ಶಿವಮೊಗ್ಗ, ಮಂಗಳೂರು, ಮೈಸೂರು ಹಾಗೂ ಬೆಂಗಳೂರಿನಲ್ಲಿ ಚಿತ್ರದ ವಿಶೇಷ ಪ್ರದರ್ಶನ ನಡೆಯಲಿದೆ.
ವಿಶೇಷ ಅಂದರೆ, ಇದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಮೊದಲ ಪ್ರೀಮಿಯರ್ ಶೋ ಇದಾಗಿದೆ. ಶಿವಮೊಗ್ಗ ನಗರದ ಸಿಟಿ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ ಇಂದು (ಗುರುವಾರ) ಸಂಜೆ 7 ಮತ್ತು ರಾತ್ರಿ 9 ಗಂಟೆಗೆ ಪ್ರದರ್ಶನ ನಡೆಯಲಿದೆ.
ಶಿವಮೊಗ್ಗದಲ್ಲಿ ಫಸ್ಟ್ ಟೈಂ ಪ್ರೀಮಿಯರ್ ಶೋ ನಡೆಯುತ್ತಿದ್ದು, ಅಲ್ಲಿನ ಜನರು ಕೂಡ ಉತ್ಸುಕರಾಗಿದ್ದಾರೆ. ಸಿನಿಮಾದ ಟಿಕೆಟ್ ಗೆ ಸಖತ್ ಡಿಮ್ಯಾಂಡ್ ಇದೆ.

'ಕಿರಿಕ್ ಪಾರ್ಟಿ' ನಂತರ ರಿಷಬ್ ಶೆಟ್ಟಿ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಸಿನಿಮಾ ಟ್ರೇಲರ್ ಮತ್ತು ಹಾಡುಗಳು ಸೂಪರ್ ಹಿಟ್ ಆಗಿದ್ದು, ಚಿತ್ರದ ಬಗ್ಗೆ ದೊಡ್ಡ ನಿರೀಕ್ಷೆ ಇದೆ.
ಅಂದಹಾಗೆ, ಅನಂತನಾಗ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡು, ರಂಜನ್, ಮುಂತಾದವರಿದ್ದಾರೆ. ವಾಸುಕಿ ವೈಭವ್ ಸಂಗೀತ ನಿರ್ದೇಶನ ಹಾಗೂ ಅಜನೀಶ್ ಲೋಕನಾಥ್ ಹಿನ್ನಲೆ ಸಂಗೀತ ನೀಡಿದ್ದಾರೆ.


Click it and Unblock the Notifications











