ಬೆಂಗಳೂರಿನ ಸಿನಿಮಾ ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಕಿಡಿಗೇಡಿಗೆ ಬಿತ್ತು ಗೂಸಾ

ನಗರದ ಚಿತ್ರಮಂದಿರವೊಂದರಲ್ಲಿ ಮಹಿಳೆಯರ ಸುರಕ್ಷತೆಗೆ ಧಕ್ಕೆ ತರುವಂತಹ ಆಘಾತಕಾರಿ ಘಟನೆ ನಡೆದಿದೆ. ಚಿತ್ರಮಂದಿರದ ಮಹಿಳಾ ಶೌಚಾಲಯಲ್ಲಿ ರಸಹ್ಯ ಕ್ಯಾಮರಾ ಇಟ್ಟಿದ್ದ ಕಿಡಿಗೇಡಿ ಸಿಕ್ಕಿಬಿದ್ದಿದ್ದಾನೆ. ಸಿನಿಮಾ ನೋಡಲು ಬಂದ ಪ್ರೇಕ್ಷಕರು ಆತನನ್ನು ಹಿಡಿದು ಥಳಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗ್ತಿದೆ.

ಬೆಂಗಳೂರಿನ ಮಡಿವಾಳದ ಸಂಧ್ಯಾ ಚಿತ್ರಮಂದಿರದಲ್ಲಿ ಈ ಘಟನೆ ವರದಿಯಾಗಿದೆ. ನಿನ್ನೆ ಚಿತ್ರಮಂದಿರದಲ್ಲಿ ತೆಲುಗಿನ 'ನುವ್ವು ನಾಕು ನಚ್ಚಾವು' ಚಿತ್ರ ಪ್ರದರ್ಶನವಾಗುತ್ತಿತ್ತು. ಮಹಿಳಾ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಸಿನಿಮಾ ನೋಡಲು ಬಂದಿದ್ದರು. ಈ ವೇಳೆ ಶೌಚಾಲಯಕ್ಕೆ ಹೋದ ಮಹಿಳೆಯರಿಗೆ ಅಲ್ಲಿ ಸೀಕ್ರೆಟ್ ಕ್ಯಾಮರಾ ಇರುವುದು ಗೊತ್ತಾಗಿದೆ. ಕೂಡಲೇ ಈ ಬಗ್ಗೆ ಅಲ್ಲಿದ್ದವರಿಗೆ ವಿಷಯ ತಿಳಿಸಿದ್ದು ಸೀಕ್ರೆಟ್ ಕ್ಯಾಮರಾ ಇಟ್ಟಿದ್ದ ಆರೋಪಿಯನ್ನು ಹಿಡಿದುಕೊಂಡಿದ್ದಾರೆ. ಆಕ್ರೋಶಗೊಂಡ ಪ್ರೇಕ್ಷಕರು ಆತನಿಗೆ ಧರ್ಮದೇಟು ಕೊಟ್ಟಿದ್ದಾರೆ.

Secret Camera Found in Women s Toilet at Bengaluru Sandhya Theater Accused Caught by Audience

ಮಡಿವಾಳ ಪೊಲೀಸ್ ಠಾಣೆ ಪೊಲೀಸರು ಕೂಡಲೇ ಸ್ಥಳಕ್ಕಾಗಮಿಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಡಿವಾಳ ಸುತ್ತಮುತ್ತಲ ಭಾಗದಲ್ಲಿ ಸಂಧ್ಯಾ ಚಿತ್ರಮಂದಿರ ಬಹಳ ಜನಪ್ರಿಯವಾಗಿದೆ. ಇದೀಗ ಈ ಘಟನೆ ಭಾರೀ ಚರ್ಚೆ ಹುಟ್ಟಾಕ್ಕಿದೆ. ಮಹಿಳೆಯರ ಸುರಕ್ಷತೆ ಬಗ್ಗೆ ಕಳವಳ ಉಂಟು ಮಾಡಿದೆ. ಬಂಧಿನ ಅಪ್ರಾಪ್ತ ಎನ್ನಲಾಗಿದ್ದು ಆತ ಯಾರು? ಈ ದುಷ್ಕೃತ್ಯದ ಹಿಂದಿನ ಉದ್ದೇಶ ಏನು ಎಂದು ವಿಚಾರಣೆ ನಡೆಸಲಾಗ್ತಿದೆ.

ಪದೇ ಪದೆ ಇಂತಹ ಘಟನೆಗಳು ವರದಿ ಆಗುತ್ತಲೇ ಇದೆ. 2 ವರ್ಷದ ಹಿಂದೆ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜು ಮಹಿಳಾ ಹಾಸ್ಟೆಲ್ ಟಾಯ್ಲೆಟ್‌ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆ ಆಗಿತ್ತು. ವಿಡಿಯೋ ಚಿತ್ರೀಕರಿಸಿ ಬೇರೆಯವರಿಗೆ ಕಳುಹಿಸಿದ್ದ ಆರೋಪ ಕೇಳಿಬಂದಿತ್ತು.

3 ವರ್ಷಗಳ ಹಿಂದೆ ಉಡುಪಿಯ ಖ್ಯಾತ ಪ್ಯಾರಾ ಮೆಡಿಕಲ್ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಇದೇ ರೀತಿ ರಹಸ್ಯವಾಗಿ ಮೊಬೈಲ್ ಕ್ಯಾಮರಾ ಬಳಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ರಾಜಕೀಯ ತಿರುವು ಪಡೆದುಕೊಂಡು ಸಂಚಲನ ಸೃಷ್ಟಿಸಿತ್ತು. ಟಾಯ್ಲೆಟ್‌ನಲ್ಲಿ ಹಿಂದೂ ಹುಡುಗಿಯ ವೀಡಿಯೊ ರೆಕಾರ್ಡ್ ಮಾಡಿ, ಅದನ್ನು ಮುಸ್ಲಿಂ ಹುಡುಗರೊಂದಿಗೆ ಹಂಚಿಕೊಂಡಿದ್ದ ಆರೋಪದಲ್ಲಿ ಪ್ರಕರಣದ ದಾಖಲಾಗಿತ್ತು.

More from Filmibeat

Read more about: theater kannada sandalwood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X