ಹಿರಿಯ ನಟ ಹುಲಿವಾನ್ ಗಂಗಾಧರ್ ಕೊರೊನಾ ಸೋಂಕಿಗೆ ಬಲಿ
ಹಿರಿಯ ನಟ ಹುಲಿವಾನ್ ಗಂಗಾಧರ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. 70 ವರ್ಷ ಗಂಗಾಧರ್ ಕಿರುತೆರೆ ಮತ್ತು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರು. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಗಂಗಾಧರ್ ನಿನ್ನ ರಾತ್ರಿ( ಜುಲೈ 17) ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Recommended Video
ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಗಂಗಾಧರ್ ಸದ್ಯ ಕಿರಿತೆರೆಯಲ್ಲಿ ಪ್ರಸಾರವಾಗುತ್ತಿದ್ದ ಪ್ರೇಮಲೋಕ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದರು. ಧಾರಾವಾಹಿಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಗಂಗಾಧರ್ ಚಿತ್ರೀಕರಣದಲ್ಲಿ ಭಾಗಿಯಾಗಿ ಎರಡನೇ ದಿನಕ್ಕೆ ಜ್ವರ ಕಾಣಿಸಿಕೊಂಡಿದೆ. ನಂತರ ಸೆಲ್ಫ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಉಸಿರಾಟ ಸಮಸ್ಯೆಯಾದ ಹಿನ್ನಲೆ ಆಸ್ಪತ್ರೆ ದಾಖಲಾಗಿದ್ದರು.

ಕೊರೊನಾ ಪರೀಕ್ಷೆ ಮಾಡಿಸಿದ ಬಳಿಕ ಕೊರೊನಾ ಪಾಸಿಟಿವ್ ಬಂದಿರುವುದು ಗೊತ್ತಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ 17ರಂದು ಕೊನೆಯುಸಿರೆಳೆದಿದ್ದಾರೆ. ಗಂಗಾಧರ್ ಮೂವರು ಹೆಣ್ಣು ಮಕ್ಕಳು, ಒಬ್ಬ ಪುತ್ರ ಮತ್ತು ಪತ್ನಿಯನ್ನು ಅಗಲಿದ್ದಾರೆ.
ನಟ ಗಂಗಾಧರ್ 1500ಕ್ಕೂ ಹೆಚ್ಚು ನಾಟಕ, 118 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಕಿರುತೆರೆಯಲ್ಲೂ ಸಖತ್ ಬ್ಯುಸಿಯಾಗಿದ್ದರು. ಉಲ್ಟಾ ಪಲ್ಟಾ, ಗ್ರಾಮ ದೇವತೆ, ಭೂಮಿ ತಾಯಿ ಚೊಚ್ಚಲ ಮಗ, ಅಪ್ಪು, ಕುರಿಗಳು ಸಾರ್ ಕುರಿಗಳು, ಶಬ್ದವೇಧಿ ಸೇರಿದಂತೆ ಸಾಕಷ್ಟು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ.


Click it and Unblock the Notifications











