Just In
Don't Miss!
- News
ರಮೇಶ್ ಜಾರಕಿಹೊಳಿ ಸಿಡಿ: ಸಹೋದರ ಸತೀಶ್ ಸಿಡಿಸಿದ ಹೊಸ ಬಾಂಬ್
- Finance
ಚಿನ್ನದ ಬೆಲೆ ಕೊಂಚ ಇಳಿಕೆ: ಮಾರ್ಚ್ 03ರ ಬೆಲೆ ಎಷ್ಟಿದೆ?
- Automobiles
ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್ವ್ಯಾಗನ್ ಟಿಗ್ವಾನ್ ಎಸ್ಯುವಿ
- Sports
'ಭಾರತ-ಇಂಗ್ಲೆಂಡ್ 4ನೇ ಟೆಸ್ಟ್ನಲ್ಲಿ ನಾನು ಇಂಗ್ಲೆಂಡ್ಗೆ ಚಿಯರ್ ಮಾಡ್ತೇನೆ'
- Education
Karnataka SSLC Exam 2021 Time Table: ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
- Lifestyle
ಮಾರ್ಚ್ ನಲ್ಲಿದೆ ಕಷ್ಟ ನಿವಾರಿಸುವ ಫಾಲ್ಗುಣ ಅಮವಾಸ್ಯೆ, ಯಾಕಿಷ್ಟು ಮಹತ್ವ ಗೊತ್ತಾ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬ್ಯಾಡ್ ಮ್ಯಾನರ್ಸ್ ಚಿತ್ರತಂಡ ಸೇರಿದ ಹಿರಿಯ ನಟಿ ತಾರಾ ಅನುರಾಧ
ದುನಿಯಾ ಸೂರಿ ಮತ್ತು ಅಭಿಷೇಕ್ ಅಂಬರೀಶ್ ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ ಬ್ಯಾಡ್ ಮ್ಯಾನರ್ಸ್ ಚಿತ್ರಕ್ಕೆ ಹಿರಿಯ ನಟಿ ತಾರಾ ಅನುರಾಧ ಎಂಟ್ರಿಯಾಗಿದೆ. ನೆಚ್ಚಿನ ನಾಯಕ ಅಂಬರೀಶ್ ಅವರೊಟ್ಟಿಗೆ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ತಾರಾ, ಈಗ ಅಂಬಿ ಪುತ್ರನೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.
ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ತಾರಾ ನಟಿಸುತ್ತಿದ್ದಾರೆ ಎಂದು ಸ್ವತಃ ಚಿತ್ರತಂಡ ಪ್ರಕಟಿಸಿದ್ದು, ಈಗಾಗಲೇ ಶೂಟಿಂಗ್‌ನಲ್ಲು ಸಹ ನಟಿ ತೊಡಗಿಕೊಂಡಿದ್ದಾರೆ. ಈ ಮೂಲಕ ಅಂಬರೀಶ್ ಎರಡನೇ ತಲೆಮಾರಿಗೆ ತಾರಾ ಸಾಥ್ ನೀಡಿದ್ದಾರೆ. ವಿಶೇಷ ಅಂದ್ರೆ ದುನಿಯಾ ಸೂರಿ ಜೊತೆ ತಾರಾ ಅವರದ್ದು ಮೊದಲ ಸಿನಿಮಾ ಇದು.
ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಅಂಬಿ ಪುತ್ರನ 'ಬ್ಯಾಡ್ ಮ್ಯಾನರ್ಸ್' ಆರಂಭ
ಅಂದ್ಹಾಗೆ, ಜನವರಿ 15 ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬ್ಯಾಡ್ ಮ್ಯಾನರ್ಸ್ ಸಿನಿಮಾದ ಮುಹೂರ್ತ ನೆರವೇರಿತ್ತು. ಸುಮಲತಾ ಅಂಬರೀಶ್ ಸಹ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಮುಹೂರ್ತದ ಜೊತೆ ಮಂಡ್ಯ ಹಾಗೂ ಮೈಸೂರಿನ ಭಾಗದಲ್ಲಿ ಬ್ಯಾಡ್ ಮ್ಯಾನರ್ಸ್ ಚಿತ್ರೀಕರಣ ಆರಂಭವಾಗಿತ್ತು. ಆರಂಭದಲ್ಲಿ ಚಿತ್ರದ ಆಕ್ಷನ್ ದೃಶ್ಯಗಳನ್ನು ಶೂಟ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿ, ಅದಕ್ಕೆ ತಕ್ಕ ತಯಾರಿ ಮಾಡಿಕೊಂಡಿತ್ತು.
'ಅಮರ್' ಸಿನಿಮಾ ಬಳಿಕ ಅಭಿಷೇಕ್ ಮಾಡುತ್ತಿರುವ ಎರಡನೇ ಸಿನಿಮಾ ಎಂಬ ಕಾರಣಕ್ಕೆ ಹಾಗೂ ಸುಕ್ಕ ಸೂರಿ ನಿರ್ದೇಶನ ಮಾಡುತ್ತಿರುವ ಕಾರಣಕ್ಕೆ ಈ ಪ್ರಾಜೆಕ್ಟ್ ಭಾರಿ ನಿರೀಕ್ಷೆ ಮೂಡಿಸಿದೆ.
ಅಂಬಿ ಪುತ್ರನ ಜೊತೆ ಡಿಂಪಲ್ ಕ್ವೀನ್ ರಚಿತಾ ರಾಮ್ ರೊಮ್ಯಾನ್ಸ್
ಈ ಚಿತ್ರಕ್ಕಾಗಿ ಅಭಿಷೇಕ್ ಅಂಬರೀಶ್ ಬಾಡಿ ಟ್ರಾನ್ಸ್‌ಫರ್‌ಮೇಶನ್‌ನ ಸಹ ಮಾಡಲಿದ್ದಾರೆ. ಸುಧೀರ್ ಕೆಎಂ ಈ ಚಿತ್ರ ನಿರ್ಮಾಣ ಮಾಡಲಿದ್ದು, ಚರಣ್ ರಾಜ್ ಸಂಗೀತ ಇರಲಿದೆ. ಇನ್ನು ರಚಿತಾ ರಾಮ್ ಹಾಗೂ ಪ್ರಿಯಾಂಕಾ ಇಬ್ಬರು ನಾಯಕಿಯರು.