ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಹಿರಿಯ ಕಲಾವಿದರಿಂದ ಡಿಸಿಎಂಗೆ ಮನವಿ

ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡುವಂತೆ ಚಿತ್ರರಂಗದ ಹಿರಿಯ ಕಲಾವಿದರು ಡಿಸಿಎಂ ಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಈಗಾಗಲೆ ಧಾರಾವಾಹಿ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದ್ದು, ಚಿತ್ರೀಕರಣ ಪ್ರಾರಂಭವಾಗಿದೆ. ಆದರೆ ಹೀರಿಯ ಕಲಾವಿದರಿಗೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ಹಾಗಾಗಿ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಹಿರಿಯ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಲು ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ.

Recommended Video

ದರ್ಶನ್ ಸಿನಿಮಾ ಶೀರ್ಷಿಕೆಯನ್ನು ತನ್ನ ಸಿನಿಮಾಗೆ ಇಟ್ಟ ಅನುಷ್ಕಾ ಶರ್ಮಾ | Anushka Sharma | Bul Bul

ಹಿರಿಯ ಕಲಾವಿದರಾದ ಡಿಂಗ್ರಿ ನಾಗರಾಜ್, ಲಕ್ಷ್ಮೀ ದೇವಮ್ಮ, ಶೋಭ ರಾಘವೇಂದ್ರ, ಮಂಜುಳಾ, ಗಣೇಶ್ ರಾವ್ ಸೇರಿದ್ದಂತೆ ಅನೇಕ ಕಲಾವಿದರು ಡಾ. ಅಶ್ವತ್ಥನಾರಾಯಣ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಕಲಾವಿದರ ಸಮಸ್ಯೆ ಆಲಿಸಿದ ಡಿಸಿಎಂ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡುವುದಾಗಿ ಭರವಸೆ ನೀಡಿದರು. ಲಾಕ್ ಡೌನ್ ನಿಂದು ಸುಮಾರು 2 ತಿಂಗಳಿನಿಂದ ಚಿತ್ರೀಕರಣ ಸ್ಥಗಿತವಾಗಿದೆ. ಈಗಾಗಲೆ ಕಿರುತೆರೆ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಆದರೆ 60 ವರ್ಷ ಮೇಲ್ಪಟ್ಟ ಕಲಾವಿದರಿಗೆ ಚಿತ್ರೀಕರಣದಲ್ಲಿ ಭಾಗಿಯಾಗಲು ಅವಕಾಶವಿಲ್ಲ. ಹಾಗಾಗಿ ಹಿರಿಯ ಕಲಾವಿದರು ಸಂಪಾದನೆ ಇಲ್ಲದೆ ಪರದಾಡುವಂತಾಗಿದೆ. ಸಮಸ್ಯೆಗೆ ಪರಿಹಾರ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

Senior Artists Meet Request To Ashwath Narayan For Permission To Shooting

ಇದೆ ಸಮಯದಲ್ಲಿ ಬೇರೆ ರಾಜ್ಯಗಳಲ್ಲಿ ಅಂದರೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಹಿರಿಯ ಕಲಾವಿದರು ಮತ್ತು ತಂತ್ರಜ್ಞರಿಗೆ ಮಾಸಾಶನ ದೊರೆಯುತ್ತಿದೆ. ಕರ್ನಾಟಕದಲ್ಲೂ ದೊರೆಯುವಂತಾಗಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.

More from Filmibeat

English summary
Kannada Senior Artist meet DCM and request to Ashwath Narayan for permission to take part in the shooting.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X