»   » ಹಿರಿಯ ಕಲಾವಿದ ಕೆ ಎಸ್ ಅಶ್ವತ್ಥ್ ಕಣ್ಮರೆ

ಹಿರಿಯ ಕಲಾವಿದ ಕೆ ಎಸ್ ಅಶ್ವತ್ಥ್ ಕಣ್ಮರೆ

Subscribe to Filmibeat Kannada
ಮೈಸೂರು, ಜ. 18 : ಕನ್ನಡ ಚಿತ್ರರಂಗದಲ್ಲಿ ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾಗಿದ್ದ ಹಿರಿಯ ಕಲಾವಿದ ಕೆ ಎಸ್ ಅಶ್ವತ್ಥ್ ಇನ್ನಿಲ್ಲ. ಕಳೆದ ಕೆಲ ದಿನಗಳಿಂದ ಆನಾರೋಗ್ಯದಿಂದ ತುರ್ತು ನಿಗಾ ಘಟಕದಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದ ಅಶ್ವತ್ಥ್ ಸೋಮವಾರ ನಸುಕಿನ ಜಾವ 2.15 ಕ್ಕೆ ನಮ್ಮೆಲ್ಲರನ್ನೂ ಅಗಲಿ ಬಾರದು ಲೋಕಕ್ಕೆ ತೆರೆಳಿದ್ದಾರೆ. ನಗರದ ಜವರೇಗೌಡ ಪಾರ್ಕ್ ನಲ್ಲಿ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

ಅಶ್ವತ್ಥ್ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಗುರುವಾರ ಅವರು ಮಾತನಾಡುವ ಮಟ್ಟಿಗೆ ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದವು. ಆದರೆ, ಉಸಿರಾಟದ ತೊಂದರೆ ತೀವ್ರಗೊಂಡ ಪರಿಣಾಮ ಅವರ ಅಸುನೀಗಿದರು ಎಂದು ವೈದ್ಯರು ತಿಳಿಸಿದ್ದಾರೆ. ಇತ್ತೀಚೆಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅಶ್ವತ್ಥ್ ಅವರನ್ನು ಚಿಕಿತ್ಸೆಗಾಗಿ ನಗರದ ಮೈಸೂರಿನ ಬಸಪ್ಪ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿಗೆ ರಕ್ತ ಪೂರೈಕೆ ನಿಧಾನಗೊಂಡು ಆರೋಗ್ಯ ವಿಷಮಿಸಿದ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು.

ಗುರುವಾರ ಅವರು ಮಾತನಾಡುವ ಮಟ್ಟಿಗೆ ಚೇತರಿಸಿಕೊಂಡಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದರು. ಗುರುವಾರ ಬೆಳಗ್ಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಶ್ವತ್ಥ್ ಅವರ ಯೋಗಕ್ಷೇಮ ವಿಚಾರಿಸಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ, ಚಿತ್ರ ನಿರ್ಮಾಪಕ ಸಾ.ರಾ.ಗೋವಿಂದು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಸಹ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದರು.

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada