For Quick Alerts
  ALLOW NOTIFICATIONS  
  For Daily Alerts

  'ರಾಬರ್ಟ್' ನಿರ್ಮಾಪಕ ಉಮಾಪತಿ ಸೇರಿ ನಾಲ್ವರ ಕೊಲೆಗೆ ಸ್ಕೆಚ್: 7 ಜನ ವಶಕ್ಕೆ

  By ಫಿಲ್ಮ್ ಡೆಸ್ಕ್
  |

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಹಾಗೂ ಅವರ ಸಹೋದರ ದೀಪಕ್ ಸೇರಿದಂತೆ ನಾಲ್ಕು ಜನರ ಕೊಲೆಗೆ ಸ್ಕೆಚ್ ಹಾಕಿದ್ದ 7ಜನ ಆರೋಪಿಗಳನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

  ರಾಬರ್ಟ್ ನಿರ್ಮಾಪಕನ ಕೊಲೆಗೆ ಸ್ಕೆಚ್, 7 ಜನ ಕಿಡಿಗೇಡಿಗಳ ಬಂಧನ | Filmibeat Kannada

  ನಿರ್ಮಾಪಕ ಉಮಾಪತಿ ಹಾಗೂ ದೀಪಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡುವ ಬಗ್ಗೆ ಮಂಜುನಾಥ್ ಹಾಗೂ ಅವನ ಸಹಚರರು ಸ್ಕೆಚ್ ಹಾಕುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಸುಳಿವು ಸಿಕ್ಕ ಕೂಡಲೇ ದಾಳಿ‌ ಮಾಡಿದ್ದ ಜಯನಗರ ಪೊಲೀಸರು ಸದ್ಯ ಏಳು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  ನಾಲ್ವರಲ್ಲಿ ಯಾರೆ ಬಂದರೂ ಕೊಲೆ ಮಾಡಲೇಬೇಕು ಎಂದು ಪ್ಲಾನ್ ಮಾಡಿ, ಟೆಂಪೋ ಟ್ರಾವೆಲ್ ನಲ್ಲಿ ಮಾರಕಾಸ್ತ್ರ ಹಿಡಿದು ಕುಳಿತ್ತಿದ್ದರು ಎಂದು ತಿಳಿದುಬಂದಿದೆ. ಕುಖ್ಯಾತ ರೌಡಿ ಶೀಟರ್ ಸೈಕಲ್ ರವಿ, ಸಹಚರ ಬೇಕರಿ ರಘು, ನಿರ್ಮಾಪಕ ಉಮಾಪತಿ ಹಾಗೂ ದೀಪಕ್ ಕೊಲೆಗೆ ಸ್ಕೆಚ್ ಹಾಕಿದ್ದರು ಎಂದು ತಿಳಿದುಬಂದಿದೆ.

  ಖಚಿತ ಮಾಹಿತಿ ಮೇರೆಗೆ ನಿನ್ನೆ (ಡಿಸೆಂಬರ್ 19) ರಾತ್ರಿ 8ಗಂಟೆಗೆ ಸಿನಿಮೀಯ ರೀತಿಯಲ್ಲಿ ದಾಳಿ ಮಾಡಿದ್ದ ಜಯನಗರ ಪೊಲೀಸರು ರೌಡಿ ಶೀಟರ್ ಭರತ್ ಕುಮಾರ್ ಸೇರಿ 7 ಜನರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಕೆಲವರು ಅಲ್ಲಿಂದ ಪರಾರಿಯಾಗಿದ್ದಾರೆ.

  Seven members arrested for planning to murder for Robert movie producer

  ಈ ಪ್ರಕರಣ ಸಂಬಂಧ ಜಯನಗರ ಪೊಲೀಸರಿಂದ ಎಫ್ ಐ ಆರ್ ದಾಖಲಾಗಿದೆ. ಇನ್ನೂ ಉಳಿದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಯುತ್ತಿದ್ದಾರೆ. ಹಣಕಾಸಿನ ವ್ಯವಹಾರ ಹಿನ್ನಲೆ ಕೊಲೆಗೆ ಸ್ಕೆಚ್ ಹಾಕಿದ್ದರು ಎಂದು ಶಂಕಿಸಲಾಗಿದೆ.

  English summary
  Seven members arrested for planning to murder for Robert movie producer.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X