ಡಾರ್ಲಿಂಗ್ ಕೃಷ್ಣ 'ಶುಗರ್ ಫ್ಯಾಕ್ಟರಿ' ಸೇರಿದ ನಟಿ ಶಿಲ್ಪಾ ಶೆಟ್ಟಿ

ಸ್ಯಾಂಡಲ್ ವುಡ್ ನಟ ಡಾರ್ಲಿಂಗ್ ಕೃಷ್ಣ ನಟನೆಯ 'ಶುಗರ್ ಫ್ಯಾಕ್ಟರಿ' ಸಿನಿಮಾದ ಬಗ್ಗೆ ದಿನಕ್ಕೊಂದು ಸುದ್ದಿ ಹೊರಬೀಳುತ್ತಿದೆ. ಲವ್ ಮಾಕ್ ಟೇಲ್ ಬಳಿಕ ಡಾರ್ಲಿಂಗ್ ಕೃಷ್ಣ ಸಿನಿಮಾಗಳ ಮೇಲಿನ ನಿರೀಕ್ಷೆ ಹೆಚ್ಚಾಗಿದ್ದು, ಶುಗರ್ ಫ್ಯಾಕ್ಟರಿ ಸಿನಿಮಾ ಸಹ ಭಾರಿ ಕುತೂಹಲ ಮೂಡಿಸಿದೆ.

ಈಗಾಗಲೇ ಶುಗರ್ ಫ್ಯಾಕ್ಟರಿ ಚಿತ್ರಕ್ಕೆ ಇಬ್ಬರು ನಟಿಯರು ಎಂಟ್ರಿ ಕೊಟ್ಟಿದ್ದಾರೆ. ಇದೀಗ ಮೂರನೆ ನಾಯಕಿಯ ಪ್ರವೇಶವಾಗಿದೆ. ಹೌದು, ಡಾರ್ಲಿಂಗ್ ಕೃಷ್ಣ ಶುಗರ್ ಫ್ಯಾಕ್ಟರಿ ಗೆ ನಟಿ ಶಿಲ್ಪಾ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ. ಶಿಲ್ಪಾ ಶೆಟ್ಟಿ ಅಂದಾಕ್ಷಣ ಬಾಲಿವುಡ್ ನಟಿ ಅಂದೊಳ್ಳುಬೇಡಿ. ತುಳು ಮತ್ತು ಕನ್ನಡದ ಕೆಲವು ಧಾರಾವಾಹಿಗಳಲ್ಲಿ ನಟಿಸಿರುವ ನಟಿ ಸುಂದರಿ ಶಿಲ್ಪಾ ಶೆಟ್ಟಿ. ಇದೀಗ ಶುಗರ್ ಫ್ಯಾಕ್ಟರಿ ಮೂಲಕ ಬೆಳ್ಳಿ ಪರದೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ.

ಇನ್ನು 'ಪಂಚತಂತ್ರ' ನಾಯಕಿ ಸೋನಲ್ ಮೊಂತೆರೊ ಹಾಗೂ ಅದ್ವಿತಿ ಶೆಟ್ಟಿ ಈಗಾಗಲೇ ಸಿನಿಮಾತಂಡ ಸೇರಿದ್ದಾರೆ. ಶುಗರ್ ಫ್ಯಾಕ್ಟರಿ ಸಿನಿಮಾ ಮುಂದಿನ ತಿಂಗಳು ಜನವರಿ 28ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರಕ್ಕೆ ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

Shilpa Shetty the latest Join Darling Krishnas Sugar Factory

Recommended Video

ಪೊಗರು ರಿಲೀಸ್ ಗೆ ಮೊದಲೆ ಮತ್ತೊಂದು ಸುರ್ಪ್ರೈಸ್ ಕೊಟ್ಟ ಧ್ರುವ ಸರ್ಜಾ | Filmibeat Kannada

ಈ ಮೊದಲು ಮನಸಾಲಜಿ ಎನ್ನುವ ಸಿನಿಮಾ ಮಾಡಿದ್ದ ದೀಪಕ್ ಇದೀಗ ಶುಗರ್ ಫ್ಯಾಕ್ಟರಿ ಮೂಲಕ ಎರಡನೇ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಬಳಿಕ ಗೋವಾ, ಮೈಸೂರು ಮತ್ತು ವಿದೇಶದಲ್ಲೂ ಚಿತ್ರೀಕರಣ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದ್ದಾರೆ.

More from Filmibeat

English summary
Actress Shilpa Shetty the latest Join Darling Krishna's Sugar Factory. This movie is directed by Deepa Aras.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X