ಗೃಹ ಸಚಿವರನ್ನ ಭೇಟಿ ಮಾಡಿದ ಶಿವರಾಜ್ ಕುಮಾರ್ ದಂಪತಿ
ನಟ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರನ್ನ ಇಂದು ವಿಧಾನಸೌಧದಲ್ಲಿ ಭೇಟಿ ಮಾಡಿದ್ದಾರೆ.
ಮಾನ್ಯತಾ ಟೆಕ್ ಪಾರ್ಕ್ ನಿಂದ ಟ್ರಾಪಿಕ್ ಸಮಸ್ಯೆ ಉಂಟಾಗುತ್ತಿದ್ದು, ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂದು ಶಿವರಾಜ್ ಕುಮಾರ್ ದಂಪತಿ, ಹೋಮ್ ಮಿನಿಸ್ಟರ್ ಗೆ ದೂರು ನೀಡಿದ್ದಾರೆ.

ಮಾನ್ಯತಾ ಟೆಕ್ ಪಾರ್ಕ್ ನಿರ್ಮಾಣದ ವೇಳೆ ರಸ್ತೆಯನ್ನ ಕಲ್ಪಿಸಲ್ಲ, 30 ಸಾವಿರ ಸಿಬ್ಬಂದಿ ಮಾತ್ರ ಕೆಲಸ ಮಾಡಲಿದ್ದಾರೆ ಎಂದು ಅನುಮತಿ ಪಡೆಯಲಾಗಿತ್ತು. ಆದ್ರೆ, 1 ಲಕ್ಷದ 50 ಸಾವಿರ ಜನ ಈಗ ಕೆಲಸ ಮಾಡುತ್ತಿದ್ದು, ದಿನಕ್ಕೆ 5 ಸಾವಿರಕ್ಕೂ ಅಧಿಕ ವಾಹನಗಳು ಟೆಕ್ ಪಾರ್ಕ್ ಗೆ ಬರ್ತಿದೆ. ಇದರಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.
ಸುಮಾರು 15 ನಿಮಿಷಗಳ ಕಾಲ ಶಿವರಾಜ್ ಕುಮಾರ್ ದಂಪತಿ ಹಾಗೂ ಸ್ಥಳಿಯರ ಜೊತೆ ಮಾತನಾಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ''ಈ ಬಗ್ಗೆ ಸಚಿವ ಕೆ.ಜೆ ಜಾರ್ಜ್ ಅವರೊಂದಿಗೆ ಚರ್ಚಿಸುತ್ತೇವೆ. ಪೊಲೀಸರಿಗೂ ಮಾಹಿತಿ ನೀಡುತ್ತೇವೆ. ಖುದ್ದು ತಾವೇ ಬಂದು ಸ್ಥಳ ಪರಿಶೀಲನೆ ನಡೆಸುತ್ತೇವೆ'' ಎಂದು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ.


Click it and Unblock the Notifications











