For Quick Alerts
  ALLOW NOTIFICATIONS  
  For Daily Alerts

  ಶಿವಣ್ಣಗೆ ಭಿನ್ನ ಕತೆ ಮಾಡಿಕೊಂಡಿರುವ ಭಟ್ಟರು: ಜನ ನೀರು ಕುಡಿದಾಗೆಲ್ಲ ಸಿನಿಮಾ ನೆನಪಾಗುತ್ತಂತೆ!

  |

  ಯೋಗರಾಜ್ ಭಟ್ ನಿರ್ದೇಶನದಲ್ಲಿ ಶಿವರಾಜ್ ಕುಮಾರ್-ಪ್ರಭುದೇವ ಒಟ್ಟಿಗೆ ನಟಿಸುತ್ತಿರುವ 'ಪ್ರೊಡಕ್ಷನ್ ನಂ 47' ಸಿನಿಮಾದ ಮುಹೂರ್ತ ಇಂದು (ಜೂನ್ 23) ರಾಕ್ ಲೈನ್ ಸ್ಟುಡಿಯೋದಲ್ಲಿ ನೆರವೇರಿದೆ.

  ಸಿನಿಮಾದ ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಅವರು ಆರಂಭಫಲಕ ತೋರಿದರು. ಪುಷ್ಪಕುಮಾರಿ ವೆಂಕಟೇಶ್ ಕ್ಯಾಮೆರಾ ಚಾಲನೆ ಮಾಡಿದರು.

  ಮುಹೂರ್ತ ಕಾರ್ಯದ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶಿವರಾಜ್ ಕುಮಾರ್, ''ರಾಕ್ ಲೈನ್ ವೆಂಕಟೇಶ್ ಅವರ ಸಂಸ್ಥೆ ಅಂದರೆ ನನಗೆ ನಮ್ಮ ಮನೆಯ ಸಂಸ್ಥೆ ಇದ್ದ ಹಾಗೆ. ನನ್ನ ಅವರ ಸ್ನೇಹ ಮೂವತ್ತು ವರ್ಷಕ್ಕೂ ಹಳೆಯದು. ಸ್ನೇಹಿತರಾಗಿ ಬಂದು ನಿರ್ಮಾಪಕರಾದರು. ಇಂತಹ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವುದು ಹಾಗೂ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಅಭಿನಯಿಸುತ್ತಿರುವುದು ಸಂತಸ'' ಎಂದರು.

  ''ಭಾರತದ ಖ್ಯಾತ ನೃತ್ಯಗಾರ, ನಟ ಪ್ರಭುದೇವ್ ಅವರ ಜೊತೆ ಅಭಿನಯಿಸುತ್ತಿರುವುದು ಖುಷಿ ತಂದಿದೆ. ಜುಲೈ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಯೋಗರಾಜ್ ಭಟ್ ಉತ್ತಮ ಕಥೆ ಸಿದ್ದಮಾಡಿಕೊಂಡಿದ್ದಾರೆ.‌ ಫನ್, ಎಮೋಷನ್ ಹಾಗೂ ಆಕ್ಷನ್ ಡ್ರಾಮ ಎಲ್ಲಾ ರೀತಿಯ ಅಂಶಗಳಿರುವ ಕಥೆಯಿದು. ಎಲ್ಲರ ಮನಸ್ಸಿಗೂ ಚಿತ್ರ ಹತ್ತಿರವಾಗುತ್ತದೆ'' ಎಂದು ಶಿವರಾಜಕುಮಾರ್ ತಿಳಿಸಿದರು.

  ''ನೀರು ಕುಡಿಯೋವಾಗೆಲ್ಲ ಸಿನಿಮಾ ನೆನಪಿಗೆ ಬರಬೇಕು''

  ''ನೀರು ಕುಡಿಯೋವಾಗೆಲ್ಲ ಸಿನಿಮಾ ನೆನಪಿಗೆ ಬರಬೇಕು''

  ನಿರ್ದೇಶಕ ಯೋಗರಾಜ್ ಭಟ್ ಮಾತನಾಡಿ, ''ನಾನು, ನಿರ್ಮಾಪಕರಿಗೆ ಕಥೆ ಹೇಳುವಾಗ, ನಾವು ಯಾವಾಗ ನೀರು ಕುಡಿಯುತ್ತೇವೊ, ಆಗೆಲ್ಲಾ ಈ ಸಿನಿಮಾ ನೆನಪಿಗೆ ಬರಬೇಕು ಅಂತಹ ಕಥೆ ಇದು ಎಂದು ಹೇಳಿದ್ದೆ. ಆ ನಂತರ ಇನ್ನೊಂದು ಕಥೆ ಕೂಡ ಮಾಡಿಕೊಂಡಿದ್ದೆ‌. ಆದರೆ ರಾಕ್ ಲೈನ್ ಅವರು, ಅವತ್ತು ನೀರಿನ ಕಥೆ ಹೇಳಿದ್ದಿರಲ್ಲಾ ಅದೇ ಕಥೆ ಸಿನಿಮಾ ಮಾಡಿ ಎಂದರು ಅದಕ್ಕಾಗಿಯೇ ಈ ಸಿನಿಮಾ ಮಾಡುತ್ತಿದ್ದೇನೆ'' ಎಂದರು.

  ಒಂದೂವರೆ ವರ್ಷದಿಂದಲೂ ಕತೆ ಬರೆಯುತ್ತಿದ್ದೆ: ಯೋಗರಾಜ್ ಭಟ್

  ಒಂದೂವರೆ ವರ್ಷದಿಂದಲೂ ಕತೆ ಬರೆಯುತ್ತಿದ್ದೆ: ಯೋಗರಾಜ್ ಭಟ್

  ''ಶಿವಣ್ಣನಿಗೆ ಎರಡು ವರ್ಷಗಳಿಂದ ಕಥೆ ಹೇಳುತ್ತಾ ಬಂದಿದ್ದೀನಿ. ಬರೆಯುವುದು ತಿದ್ದುವುವುದು ಮಾಡುತ್ತಲೇ ಇದ್ದೆ. ಎರಡು ವರ್ಷದ ನಂತರ ಗಟ್ಟಿ ಕಥೆ ಸಿದ್ದ ಮಾಡಿಕೊಂಡಿದ್ದೇವೆ. ಹಾಸ್ಯ, ಎಮೋಷನ್, ಸೆಂಟಿಮೆಂಟ್ ಜೊತೆಗೆ ತುಂಬಾ ಬ್ರಿಲಿಯೆಂಟ್ ಆದ ಆಕ್ಷನ್ ಡ್ರಾಮಾ ಸಹ ಇದೆ. ನಾನು ಈ ಚಿತ್ರದಲ್ಲಿ ತಂತ್ರಜ್ಞನಿಗಿಂತ ಹೆಚ್ಚಾಗಿ ಪ್ರೇಕ್ಷಕನಾಗಿ ಕೆಲಸ ಮಾಡುತ್ತಿದ್ದೀನಿ. ಇದು ನನ್ನ ಹೆಮ್ಮೆಯ ಕ್ಷಣ ಇದು. ನಾನು ಮೊದಲಿನಿಂದಲೂ ಶಿವಣ್ಣನ ಅಭಿಮಾನಿ. ಆನವಟ್ಟಿಯಲ್ಲಿ 'ರಥಸಪ್ತಮಿ' ಚಿತ್ರವನ್ನು ಜನಜಂಗುಳಿಯಲ್ಲಿ ನೋಡಿದ್ದು ಈಗಲೂ ನೆನಪಿದೆ‌.

  ಶಿವರಾಜ್ ಕುಮಾರ್ ಹಾಗೂ ಪ್ರಭುದೇವ ಇಬ್ಬರೂ ಉತ್ತಮ ನಟರು. ಅವರಿಬ್ಬರು ನಮ್ಮ ಚಿತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹ ಅಪಾರ. ಇಂತಹ ದಿಗ್ಗಜರ ಜೊತೆ ಕೆಲಸ ಮಾಡಿ ನಾನು ಏನಾದರೂ ಹೊಸತು ಕಲಿಯುತ್ತೀನಿ'' ಎಂದರು ನಿರ್ದೇಶಕ ಯೋಗರಾಜ್ ಭಟ್.

  ಉತ್ತಮ ಸಂದೇಶವಿರುವ ಸಿನಿಮಾ: ರಾಕ್‌ಲೈನ್ ವೆಂಕಟೇಶ್

  ಉತ್ತಮ ಸಂದೇಶವಿರುವ ಸಿನಿಮಾ: ರಾಕ್‌ಲೈನ್ ವೆಂಕಟೇಶ್

  ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, ''ಸಿನಿಮಾ ನಿರ್ಮಾಣ ಮಾಡಿ ತುಂಬಾ ವರ್ಷವಾಗಿತ್ತು. ಕೊರೊನಾ ನಂತರ ನಮ್ಮ‌ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಅದರಲ್ಲೂ ಶಿವಣ್ಣ ಅವರ ಜೊತೆ ಮಾಡುತ್ತಿರುವುದು ಖುಷಿಯ ವಿಚಾರ. ಅವರ ಚಿತ್ರ ಮಾಡಲು ಒಳ್ಳೆಯ ಕಥೆ ಬೇಕಿತ್ತು. ಯೋಗರಾಜ್ ಭಟ್ ಇವತ್ತಿನ ಜನರಿಗೆ ಬೇಕಾದಂತಹ ಉತ್ತಮ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಹೊಟ್ಟೆ ತುಂಬಾ ನಕ್ಕುನಗಿಸುವ ಚಿತ್ರವಿದು. ಕೊನೆಗೆ ಉತ್ತಮ ಸಂದೇಶ ನೀಡುವ ಚಿತ್ರವೂ ಹೌದು'' ಎಂದರು.

  ಪ್ರೇಕ್ಷಕನಾಗಿ ಸಿನಿಮಾಕ್ಕಾಗಿ ಕಾಯುತ್ತಿರುವೆ: ಯೋಗರಾಜ್ ಭಟ್

  ಪ್ರೇಕ್ಷಕನಾಗಿ ಸಿನಿಮಾಕ್ಕಾಗಿ ಕಾಯುತ್ತಿರುವೆ: ಯೋಗರಾಜ್ ಭಟ್

  ''ಇಂತಹ ಒಳ್ಳೆಯ ಕಥೆ ನನಗೆ ಸಿಕ್ಕಿರುವುದು ಸಂತೋಷ. ಪ್ರಭುದೇವ ನಮ್ಮ ಚಿತ್ರದಲ್ಲಿ ನಟಿಸುತ್ತಿರುವುದು‌ ಕೂಡ ಸಂತಸ ತಂದಿದೆ. ಎಲ್ಲಾ ಕೂಡಿ ಬರಬೇಕು ಅಂತರಲ್ಲಾ ಹಾಗೆ. ಯೋಗರಾಜ್ ಭಟ್ ಅವರ ನಿರ್ದೇಶನ, ವಿ.ಹರಿಕೃಷ್ಣ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಶಿವರಾಜಕುಮಾರ್-ಪ್ರಭುದೇವ ಅವರ ನಟನೆ ಮತ್ತು ನೃತ್ಯ ಇಷ್ಟೆಲ್ಲ ಉತ್ತಮ ಅಂಶಗಳಿರುವ ಈ ಚಿತ್ರ ಜನರ ಮೆಚ್ಚುಗೆಗೆ ಪಾತ್ರವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ನಾನು ಒಬ್ಬ ಪ್ರೇಕ್ಷಕನಾಗಿ ಈ ಚಿತ್ರಕ್ಕಾಗಿ ಕಾಯುತ್ತಿರುವೆ'' ಎಂದರು.

  English summary
  Shiva Rajkumar, Prabhudeva movie directing by Yogaraj Bhat starts from today. Muhurtham happened on June 23 in Rockline studios.
  Thursday, June 23, 2022, 16:39
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X