For Quick Alerts
  ALLOW NOTIFICATIONS  
  For Daily Alerts

  'ಭಜರಂಗಿ 2' ಬಿಡುಗಡೆ ದಿನಾಂಕ ಮತ್ತೆ ಘೋಷಣೆ

  |

  ಹಲವು ತಿಂಗಳುಗಳಿಂದ ಚಿತ್ರಮಂದಿರದಲ್ಲೇ ಬಿಡುಗಡೆ ಆಗಬೇಕೆಂದು ಕಾದು ಕುಳಿತಿರುವ ಶಿವರಾಜ್ ಕುಮಾರ್ ನಟನೆಯ 'ಭಜರಂಗಿ 2' ಸಿನಿಮಾ ಬಿಡುಗಡೆ ದಿನಾಂಕ ಮತ್ತೊಮ್ಮೆ ಘೋಷಿಸಲಾಗಿದೆ.

  ಈ ಹಿಂದೆ ವರಮಹಾಲಕ್ಷ್ಮಿ ಹಬ್ಬಕ್ಕೆ 'ಭಜರಂಗಿ 2' ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು ಆದರೆ ಚಿತ್ರಮಂದಿರಗಳು ಪೂರ್ಣ ತೆರೆಯದ ಕಾರಣ ಆ ದಿನ ಸಿನಿಮಾ ಬಿಡುಗಡೆ ಆಗಿರಲಿಲ್ಲ.

  ಇದೀಗ ಹೊಸ ದಿನಾಂಕ ಘೋಷಣೆ ಆಗಿದ್ದು ಅಕ್ಟೋಬರ್ 29ನೇ ತಾರೀಖಿನಂದು ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಅಕ್ಟೋಬರ್ 1 ರಿಂದ ಚಿತ್ರಮಂದಿರಗಳು ಪೂರ್ಣ ಸೀಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬಹುದು ಎಂದು ಸರ್ಕಾರ ಆದೇಶ ನೀಡಿದ ಬೆನ್ನಲ್ಲೆ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.

  'ಭಜರಂಗಿ 2' ಸಿನಿಮಾವನ್ನು ಹರ್ಷ ನಿರ್ದೇಶನ ಮಾಡಿದ್ದು, ಜಯಣ್ಣ-ಭೋಗೇಂದ್ರ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ಭಾವನಾ ನಾಯಕಿಯಾಗಿ ನಟಿಸಿದ್ದು, ಹಿರಿಯ ನಟಿ ಶ್ರುತಿ ಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ.

  'ಭಜರಂಗಿ 2' ಸಿನಿಮಾವು ಸೆಪ್ಟೆಂಬರ್ 10ಕ್ಕೆ ರಾಜ್ಯದಾದ್ಯಂತ ಬಿಡುಗಡೆ ಆಗಲಿದೆ ಎಂದು ಘೋಷಿಸಲಾಗಿತ್ತು, 'ಭಜರಂಗಿ 2' ಸಿನಿಮಾ ಬಿಡುಗಡೆ ಆದ ಕೂಡಲೇ 'ಸಲಗ' ಸಿನಿಮಾ ಬಿಡುಗಡೆ ಆಗಲಿದೆ ಎಂದು ಸುದ್ದಿ ಹರಿದಾಡಿತ್ತು. ಆದರೆ ಚಿತ್ರಮಂದಿರಗಳು ಪೂರ್ಣ ತೆರೆಯಲಿಲ್ಲವಾದ್ದರಿಂದ 'ಭಜರಂಗಿ 2' ಸಿನಿಮಾ ಬಿಡುಗಡೆ ಆಗಲಿಲ್ಲ. ಹೇಳಿದ ಸಮಯಕ್ಕೆ ಸಿನಿಮಾ ಬಿಡುಗಡೆ ಆಗದ ಬಗ್ಗೆ ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಹರ್ಷಾ ಪ್ರೇಕ್ಷಕರಲ್ಲಿ ಕ್ಷಮೆ ಸಹ ಕೇಳಿದ್ದರು.

  ಇದೀಗ ಅಕ್ಟೋಬರ್ 29 ರಂದು 'ಭಜರಂಗಿ 2' ಸಿನಿಮಾ ಬಿಡುಗಡೆ ಆದ ಬಳಿಕ ವಿಜಯ್ ನಟಿಸಿ, ಮೊದಲ ಬಾರಿಗೆ ನಿರ್ದೇಶನ ಮಾಡಿರುವ 'ಸಲಗ' ಸಿನಿಮಾ ಸಹ ಬಿಡುಗಡೆ ಆಗುವ ದಟ್ಟ ಸಾಧ್ಯತೆ ಇದೆ. ಅದರ ಹಿಂದೆಯೇ ಸುದೀಪ್ ನಟನೆಯ 'ಕೋಟಿಗೊಬ್ಬ 3' ಸಿನಿಮಾ ಸಹ ಬಿಡುಗಡೆ ಆಗಲಿದೆ.

  ಅಕ್ಟೋಬರ್ 1 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಿತ್ರಮಂದಿರಗಳು ಪೂರ್ಣ ಸೀಟು ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲಿವೆ, ಹಾಗಾಗಿ 'ಭಜರಂಗಿ 2' ಮಾತ್ರವೇ ಅಲ್ಲದೆ ಹಲವು ಕನ್ನಡ ಸಿನಿಮಾಗಳು ಬಿಡುಗಡೆ ಆಗಲಿವೆ.

  English summary
  Shiva Rajkumar starer Bhajarangi 2 movie will release on October 29. Previously it scheduled to release on September 10.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X