twitter
    For Quick Alerts
    ALLOW NOTIFICATIONS  
    For Daily Alerts

    ಶಿವಣ್ಣ ಅಭಿಮಾನಿಗಳಿಗೆ ಭರ್ಜರಿ ಸುದ್ದಿ; 'ಭಜರಂಗಿ-2' ಬಿಡುಗಡೆ ದಿನಾಂಕ ಘೋಷಣೆ

    |

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ 'ಭಜರಂಗಿ-2' ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 2ನೇ ಲಾಕ್ ಡೌನ್ ಬಳಿಕ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಮೊದಲ ಸಿನಿಮಾ ತಂಡ ಇದಾಗಿದೆ.

    ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಇದೀಗ ಹ್ಯಾಟ್ರಿಕ್ ಹೀರೋ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗಿದ್ದು, ಶಿವಣ್ಣ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಶಿವರಾಜ್ ಕುಮಾರ್ ನಟನೆಯ 'ಭಜರಂಗಿ-2' ಸಿನಿಮಾ 'ಸೆಪ್ಟಂಬರ್ 10'ರಂದು ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

    ಅಂದಹಾಗೆ ಸೆಪ್ಟಂಬರ್ 10 ಗಣೇಶ ಹಬ್ಬ. ಗಣೇಶ ಚತುರ್ಥಿ ದಿನವೇ ಭಜರಂಗಿ-2 ಸಿನಿಮಾ ಬಿಡುಗಡೆಯಾಗುತ್ತಿರುವುದು ಹಬ್ಬದ ಸಂಭ್ರಮವನ್ನು ಡಬಲ್ ಮಾಡಿದೆ. 'ಭಜರಂಗಿ-2' ಸಿನಿಮಾ ಚಿತ್ರೀಕರಣ ಮುಗಿಸಿ ಒಂದು ವರ್ಷದ ಮೇಲಾಗಿದೆ. ಕೊರೊನಾ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಗುತ್ತಲೆ ಇತ್ತು. ಇದೀಗ ಅಧಿಕೃತವಾಗಿ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಮಾಡಿ ಅಭಿಮಾನಿಗಳ ಸಂತಸ ಹೆಚ್ಚಿಸಿದೆ.

    Shiva Rajkumar Starrer Bhajarangi 2 Movie to release on 10th September 2021

    ಭಜರಂಗಿ-2 ನಿರ್ದೇಶಕ ಹರ್ಷ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾ. ಜಯಣ್ಣ ಫಿಲ್ಮ್ಸ್ ನಿರ್ಮಾಣದಲ್ಲಿ ಸಿನಿಮಾ ಮೂಡಿಬರುತ್ತಿದೆ. ಹರ್ಷ ಮತ್ತು ಶಿವಣ್ಣ ಕಾಂಬಿನೇಷನ್ ನಲ್ಲಿ ಭಜರಂಗಿ ಮತ್ತು ವಜ್ರಕಾಯ ಸಿನಿಮಾ ಬಳಿಕ ಮೂಡಿಬರುತ್ತಿರುವ ಚಿತ್ರವಿದು. ಚಿತ್ರದಲ್ಲಿ ಶಿವಣ್ಣಗೆ ನಾಯಕಿಯಾಗಿ ಭಾವನ ಮೆನನ್ ಕಾಣಿಸಿಕೊಂಡಿದ್ದಾರೆ.

    Recommended Video

    ಇಂದ್ರಜಿತ್ ಮೀಟರ್ ನ ಮೆಚ್ಚಲೇ ಬೇಕು

    ನಟಿ ಭಾವನಾ ಟಗರು ಸಿನಿಮಾದ ಬಳಿಕ ಶಿವಣ್ಣ ಜೊತೆ ಎರಡನೇ ಬಾರಿ ನಟಿಸುತ್ತಿದ್ದಾರೆ. ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿರುವ 'ಭಜರಂಗಿ-2' ಹೇಗಿರಲಿದೆ ಎನ್ನುವ ಕುತೂಹಲಕ್ಕೆ ಸೆಪ್ಟಂಬರ್ 10ರಂದು ತೆರೆಬೀಳಲಿದೆ.

    English summary
    Actor Shiva Rajkumar Starrer Bhajarangi 2 Movie to release on 10th September 2021.
    Tuesday, July 20, 2021, 17:39
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X