ಶಿವಣ್ಣ 123: ಫಸ್ಟ್ ಲುಕ್ ಬಂತು, ಟೈಟಲ್ ಬಗ್ಗೆ ಹೆಚ್ಚಿದ ಕುತೂಹಲ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ 123ನೇ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಜುಲೈ 12ಕ್ಕೆ ಸೆಂಚುರಿ ಸ್ಟಾರ್ ಹುಟ್ಟುಹಬ್ಬ. ಒಂದು ದಿನ ಮುಂಚಿತವಾಗಿ ಹೊಸ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣವಾಗಿದೆ.
ಔಟ್ ಅಂಡ್ ಔಟ್ ಆಕ್ಷನ್ ಲುಕ್‌ನಲ್ಲಿ ಶಿವರಾಜ್ ಕುಮಾರ್ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರದ ಮೇಲೆ ಕುತೂಹಲ ಹೆಚ್ಚಿದೆ. ವಿಶೇಷ ಅಂದ್ರೆ ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಸಹ ಪ್ರಮಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪೋಸ್ಟರ್‌ನಲ್ಲೂ ಧನಂಜಯ್ ನೋಡಬಹುದು.
123ನೇ ಸಿನಿಮಾದ ಟೈಟಲ್ ಏನು ಎನ್ನುವುದನ್ನು ಜುಲೈ 12ಕ್ಕೆ ಪ್ರಕಟಿಸಲಾಗುವುದು. ಇನ್ನುಳಿದಂತೆ ಈ ಚಿತ್ರವನ್ನು ವಿಜಯ್ ಮಿಲ್ಟನ್ ನಿರ್ದೇಶನ ಮಾಡುತ್ತಿದ್ದಾರೆ. ಕೋವಿಡ್ ಕಾರಣದಿಂದ ಬ್ರೇಕ್ ತೆಗೆದುಕೊಂಡಿದ್ದ ಚಿತ್ರತಂಡ ಮತ್ತೆ ಶೂಟಿಂಗ್ ಶುರು ಮಾಡಿದೆ.

ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ನಿರ್ದೇಶಕ ಈಗ ಕೊನೆಯ ಹಂತದ ಕೆಲಸಕ್ಕೆ ಚಾಲನೆ ಕೊಟ್ಟಿದ್ದಾರೆ. ಕೆಲವು ಆಕ್ಷನ್ ದೃಶ್ಯಗಳು ಹಾಗೂ 20 ನಿಮಿಷದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣವಷ್ಟೆ ಬಾಕಿ ಇದೆ. ಇದು ಕೊನೆಯ ಶೆಡ್ಯೂಲ್ ಎಂದು ಸ್ವತಃ ವಿಜಯ್ ಮಿಲ್ಟನ್ ಹೇಳಿದ್ದರು.
ಶಿವರಾಜ್ ಕುಮಾರ್, ಡಾಲಿ ಧನಂಜಯ್ ಜೊತೆ 'ದಿಯಾ' ಖ್ಯಾತಿಯ ಪೃಥ್ವಿ ಅಂಬರ್ ಸಹ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಕೃಷ್ಣ ಸಮರ್ಥ್ ಬಂಡವಾಳ ಹಾಕಿದ್ದಾರೆ.


Click it and Unblock the Notifications











