ಶಿವಣ್ಣ ಈಗ ಕ್ಯಾನ್ಸರ್‌ನಿಂದ ಮುಕ್ತ; "ನೀಮೋ ಶಿವಣ್ಣನಿಗಿದ್ದ ನೋವನ್ನು ಶಾಶ್ವತವಾಗಿ ತೆಗೊಂಡು ಹೋದ" ಗೀತಕ್ಕ ಭಾವುಕ

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅನಾರೋಗ್ಯ ಆತಂಕವನ್ನು ಹುಟ್ಟಿಸಿತ್ತು. ಕೆಲವು ತಿಂಗಳು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದರು. ಡಿಸೆಂಬರ್ 24ರಂದು ಶಿವಣ್ಣಗೆ ಶಸ್ತ್ರ ಚಿಕಿತ್ಸೆ ಕೂಡ ಮಾಡಲಾಗಿತ್ತು. ಅದು ಯಶಸ್ವಿಯಾಗಿದೆ ಎಂದು ಕೆಲವು ದಿನಗಳ ಹಿಂದಷ್ಟೇ ವೈದ್ಯ ಡಾ. ಮುರುಗೇಶನ್ ಮನೋಹರನ್ ಹಾಗೂ ಗೀತಾ ಶಿವರಾಜ್‌ಕುಮಾರ್ ವಿಡಿಯೋ ಮೂಲಕ ಮಾಹಿತಿ ನೀಡಿದ್ದರು.

ಆ ಬಳಿಕ ಅವರ ಆರೋಗ್ಯದ ಬಗ್ಗೆ ಮಾಹಿತಿ ಇರಲಿಲ್ಲ. ಶಿವಣ್ಣ ಚೇತರಿಸಿಕೊಳ್ಳುತ್ತಿದ್ದಾರೆ ಎಂದಷ್ಟೇ ಹೇಳಲಾಗಿತ್ತು. ಈಗ ಶಿವಣ್ಣ ಕ್ಯಾನ್ಸರ್‌ನಿಂದ ಸಂಪೂರ್ಣವಾಗಿ ಹೊರಬಂದಿದ್ದಾರೆ ಎಂಬ ಸಂದೇಶವನ್ನು ಕಳುಹಿಸಿದ್ದಾರೆ. ಈ ಮೂಲಕ ಅಭಿಮಾನಿಗಳಲ್ಲಿ ಇದ್ದ ಆತಂಕವನ್ನು ದೂರವಾದಂತೆ ಆಗಿದೆ. ಶಸ್ತ್ರ ಚಿಕಿತ್ಸೆ ಬಳಿಕ ಶಿವಣ್ಣ ಚೇತರಿಸಿಕೊಳ್ಳುತ್ತಿದ್ದಾರೆಂಬ ಮಾಹಿತಿ ಸಿಕ್ಕಿದೆ.

Shivanna is now cancer free says wife Geetha Shivarajkumar

ಇದೊಂದಿಗೆ ಮೈಸೂರಿನಲ್ಲಿ ಶಿವಣ್ಣ ಸಹೋದರಿ ಲಕ್ಷ್ಮಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಶಿವಣ್ಣನಿಗೆ ನಾವೇ ಕರೆ ಮಾಡಿ ಮಾತಾಡಿದ್ದು, ಅವರ ಆರೋಗ್ಯ ಚೆನ್ನಾಗಿದೆ. ಅಮೆರಿಕದಲ್ಲಿ ಒಂದು ತಿಂಗಳು ವಿಶ್ರಾಂತಿ ಪಡೆಯಲಿದ್ದು ಆ ಬಳಿಕ ಬೆಂಗಳೂರಿಗೆ ಬರುತ್ತಾರೆ. ಅವರ ಆರೋಗ್ಯದ ಬಗ್ಗೆ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ದಿಢೀರನೇ ಅವರ ಅನಾರೋಗ್ಯದ ವಿಷಯ ತಿಳಿದು ಆತಂಕ ಆಗಿತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

ಅಮೆರಿಕದಲ್ಲಿರುವ ಶಿವಣ್ಣ ಕುಟುಂಬಕ್ಕೆ ಮತ್ತೊಂದು ಆಘಾತ ಆಗಿದೆ. ಅವರ ಕುಟುಂಬದಲ್ಲಿ ಒಂದಾಗಿದ್ದ ಸಾಕು ನಾಯಿ ನೀಮೋ ಸಾವನ್ನಪ್ಪಿದೆ. ಈ ವಿಷಯ ತಿಳಿದು ಗೀತಾ ಶಿವರಾಜ್‌ಕುಮಾರ್ ಭಾವುಕರಾಗಿದ್ದಾರೆ. "ನನ್ನ ನೀಮೋ ಶಿವಣ್ಣನಿಗೆ ಇದ್ದ ನೋವನ್ನು ಶಾಶ್ವತವಾಗಿ ತೆಗೆದುಕೊಂಡು ಹೋಗಿದ್ದಾನೆ" ಎಂದು ಹೇಳಿದ್ದಾರೆ. ಈ ನೋವಿನಲ್ಲಿ ಭಾವನಾತ್ಮಕ ಪತ್ರ ಬರೆದು ಪೋಸ್ಟ್ ಮಾಡಿದ್ದಾರೆ. ಆ ಪತ್ರದ ಸಾಲುಗಳು ಹೀಗಿವೆ.

"ನಮ್ಮ ಮನೆಯಲ್ಲಿ ನಾವು ಐದಲ್ಲಾ, ಆರು ಜನ. ಶಿವಣ್ಣ, ಗೀತಾ, ನಿಶು, ನಿವಿ, ದಿಲೀಪ್ ಮತ್ತು ನನ್ನ ಮರಿ ನೀಮೋ. ನಿರು ಹುಟ್ಟುಹಬ್ಬಕ್ಕೆ ದಿಲೀಪ್ ಅವರು ಮದುವೆಗೆ ಮುಂಚೆ ನೀಮೋನನ್ನು ಗಿಫ್ಟಾಗಿ ತಂದರು. ನಿಶು ಡಾಕ್ಟರ್ ಆಗಿದ್ದರಿಂದ ಅವಳಿಗೆ ನೀಮೋನನ್ನು ನೋಡಿಕೊಳ್ಳಲು ಸಮಯ ಆಗೋದಿಲ್ಲ ಎಂದು ನಮ್ಮ ಮನೆಗೆ ತಂದ್ವಿ! ಹೀಗೆ ಅವನು ನಮ್ಮ ಮನೆಯಲ್ಲಿ ಆರನೆಯವನಾದ. Thanks Dileep for bringing him to our life.

ಎಲ್ಲರೂ ಅವರ ಪೆಟ್ ಹಿಂದೆ ಓಡಾಡ್ತಾ ಇರ್ತಾರೆ. ಆದ್ರೆ ನೀಮೋ ಯಾವಾಗೂ ನನ್ನ ಹಿಂದೆ. ನಾನು ಕಿಚನ್ನಲ್ಲಿ ಇರುವಾಗ ಅಥವಾ ಮನೆಯಲ್ಲಿ ಎಲ್ಲೇ ಹೋದ್ರೂ ಅವನು ಯಾವಾಗಲೂ ನನ್ನ ಹಿಂದೆ. ನನ್ನ ಕೆಲ್ಸ ಮುಗಿಯುವುದು ಎಷ್ಟೇ ಹೊತ್ತಾದರೂ ಅವನು ಮಾತ್ರ ನನ್ನ ಹಿಂದೆ. ಶಿವಣ್ಣ ಅವರ ಕಾಲ ಬಳಿ ಅಂಟಿಕೊಂಡು, ಅಂಗಲ್ ಅಡ್ಡಸ್ಟ್ ಮಾಡಿಕೊಂಡು, ನನ್ನ ಮುಖ ಕಾಣೋ ಹಾಗೆ ಕೂರ್ತಿದ್ದ ನೀಮೋ.

ನೀಮೋ ನನ್ನ ಜೀವನದ ಭಾಗ. ನೀಮೋ, ಗೀತಾ ಇಬ್ಬರಲ್ಲ, ನಾವಿಬ್ಬರು ಒಂದೇ. ಅವನು ಬೆಳೆಯುವಾಗ ಅವನು ಎಷ್ಟೇ ದೊಡ್ಡವನಾದ್ರೂ ಮಗುವಿನಂತೆ ಆರೈಕೆ ಮಾಡಿ, ಅವನ ಊಟ, ತಿಂಡಿ, ಅವನಿಗೆ ಜ್ವರ ಬಂದರೆ ತಕ್ಷಣ ಟ್ರೀಟ್ಮೆಂಟ್. ಅದಾದ ಮೇಲೆ ಅವನಿಗೆ ಕರೆಕ್ಟ್ ಟೈಮಿಗೆ ಮೆಡಿಸಿನ್. ಹೀಗೆ ತುಂಬಾ ಕಾಳಜಿಯಿಂದ ನೋಡಿಕೊಂಡಿದ್ದು ನಿವಿ. ಈಗ ಈ ಮರಿ ನಮ್ಮನೆಲ್ಲ ಬಿಟ್ಟಿ ದೇವರ ಹತ್ತಿರ ಹೋದ. ನನ್ನ ಮರಿ ನಾನು ಅಮೆರಿಕಗೆ ಬಂದ ಮೇಲೆ ಬಿಟ್ಟು ಹೋದ. ಅವನ ನಿಸ್ವಾರ್ಥ ಪ್ರೀತಿ ಯಾರಿಂದಲೂ ತುಂಬಲು ಸಾಧ್ಯವಾಗೋಲ್ಲ, ನಾವು ಅಮೆರಿಕಗೆ ಬಂದ ಮೇಲೆನೆ ಅವನು ಹೊರಡಬೇಕು ಎಂದು ಅವನು ಡಿಸೈಡ್ ಮಾಡಿದ್ದ ಅನ್ಸುತ್ತೆ.

ಊಟ ಮಾಡುವಾಗ ನಿಶು ಚೇರ್ ಹಿಂದೆ, ಆಮೇಲೆ ನಿವಿ ಜೊತೆಗೆ, ಹಾಗೂ ಮಲಗುತ್ತಿದ್ದಿದ್ದು ನಮ್ಮ ಜೊತೆಗೆ. ಈಗ ಒಂದು ತಿಂಗಳಿಂದ ರಾತ್ರಿ ಶಿವಣ್ಣವಿಗೆ ಅಂಟಿಕೊಂಡು ಮಲಗುತ್ತಿದ್ದ. ಮೊದಲ್ಲೆಲ್ಲಾ ಅವನು ಹೀಗೆ ಮಾಡಿದವನಲ್ಲ. ನೆನ್ನೆ ಮಾತನಾಡುವಾಗ ವಿವಿ 'ಅವನಿಗೆ ಪಪ್ಪನಿಗೆ ಏನು ಆಗ್ತಾ ಇತ್ತು ಅಂತ ಗೊತ್ತಿತ್ತು ಅಂಸುತ್ತೆ, ಅದಕ್ಕೆ ಹಾಗೆ ಮಲಗುತ್ತಿದ್ದ' ಅಂದಳು. ನನಗೂ ಹಾಗೆ ಅನ್ನಿಸಿತು. ನಾವು ಅಲ್ಲೇ ಇದ್ದರೆ ತುಂಬಾ ಕಷ್ಟ ಪಡ್ತೀವಿ, ಹಾಗೂ ಈ ಸಮಯದಲ್ಲಿ ಕಷ್ಟ ಪಡಬಾರದೆಂದು ಕಾದು ನನ್ನ ಮರಿ ನಮ್ಮೆಲ್ಲರನ್ನು ಬಿಟ್ಟು ಹೋದ. ಅವನನ್ನು ನಮ್ಮ ಜೀವನದ ಭಾಗವಾಗಿ ಕರೆದುಕೊಂಡು ಬಂದಿದ್ದು ಹಾಗೂ ಅವನು ಹೊರಡುವಾಗ ಜೊತೆಯಲ್ಲೇ ನಿಂತಿದ್ದು ದಿಲೀಪ್. ನಮ್ಮ ಮನೆಯಲ್ಲಿ ಕಿರಣ, ಆಕಾಶ್, ಗಂಗಮ್ಮ, ಮನು, ಚಿಕ್ ಮನು ಎಲ್ಲರೂ ನೀಮೋನನ್ನು ಅವರ ಸ್ವಂತ ಮಗುವಿನಂತೆ ನೋಡಿಕೊಂಡಿದ್ದಾರೆ. ಅವರ ಕುಟುಂಬದ ಭಾಗದಂತೆ ನೋಡಿಕೊಂಡಿದ್ದಾರೆ. ಲಾವಣ್ಯಾ. ದಿಗಂತ್ ಹಾಗೂ ಅವರ ಮಗ ವಿಷ್ಣು ಇವರಿಗೂ ನೀಮೋ ಅಂದರೆ ಅಷ್ಟೇ ಪ್ರೀತಿ. ವಿಷ್ಣು ಮತ್ತು ನೀಮೋ ಆಟ ಆಡುವಾಗ, ಅಥವಾ ವಿಷ್ಣು ಅವನ ಬಳಿ ಮಾತನಾಡೋದು ಈಗಲೂ ಕಣ್ಣಿಗೆ ಕಟ್ಟಿದಂತಿದೆ.

ನೀಮೋ ಸದಾ ನಮ್ಮೊಳಗಿದ್ದಾನೆ. ನನ್ನೊಳಗಿದ್ದಾನೆ. ಯಾವಾಗೂ ಇರ್ತಾನೆ. ಅವನು ಹೋಗಿದ್ದನ್ನು ನಾನು ಕಣ್ಣಲ್ಲಿ ನೋಡಿಲ್ಲ. ನೋಡಿದ್ದರೂ ಅವನು ಹೋಗಿದ್ದಾನೆ ಎಂದು ನಾನು ಎಂದೂ ಒಪ್ಪಿಕೊಳ್ಳಲ್ಲ. ಪ್ರಾಣಿಗಳು ನಮ್ಮನ್ನು ಬಿಟ್ಟು ಹೋಗೋವಾಗ ನಮ್ಮ ನೋವನ್ನೂ ಅವರ ಜೊತೆಯಲ್ಲಿ ತೆಗೆದುಕೊಂಡು ಹೋಗ್ತಾರಂತೆ. ನನ್ನ ನೀಮೋ ಶಿವಣ್ಣನಿಗೆ ಇದ್ದ ನೋವನ್ನು ಶಾಶ್ವತವಾಗಿ ತೆಗೆದುಕೊಂಡು ಹೋಗಿದ್ದಾನೆ. ಲವ್ ಯೂ ನೀಮೋ" ಎಂದು ಗೀತಾ ಶಿವರಾಜ್‌ಕುಮಾರ್ ಭಾವುಕರಾಗಿದ್ದಾರೆ.

More from Filmibeat

English summary
Shivanna is now cancer free says wife Geetha Shivarajkumar. She also shared that her pet Nemo demise news;
Read more about: shivarajkumar health
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X